AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಕಳ: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ನಗದು ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ನಗದನ್ನು ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಚೆಕ್‌ಪೋಸ್ಟ್‌ ಪೊಲೀಸರು ಜಪ್ತಿ ಮಾಡಿದ್ದಾರೆ. ದಾಖಲೆ ಇಲ್ಲದೆ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಬೊಲೆರೊ ವಾಹನದಲ್ಲಿ ಹಣ ಸಾಗಿಸುತ್ತಿದ್ದರು.

ಗಂಗಾಧರ​ ಬ. ಸಾಬೋಜಿ
|

Updated on:Apr 15, 2023 | 9:06 PM

Share

ಉಡುಪಿ: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ನಗದನ್ನು ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಚೆಕ್‌ಪೋಸ್ಟ್‌ ಪೊಲೀಸರು ಜಪ್ತಿ (seized) ಮಾಡಿದ್ದಾರೆ. ದಾಖಲೆ ಇಲ್ಲದೆ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಬೊಲೆರೊ ವಾಹನದಲ್ಲಿ ಹಣ ಸಾಗಿಸುತ್ತಿದ್ದರು. ಚುನಾವಣಾಧಿಕಾರಿ ಮದನ್ ಮೋಹನ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ಬ್ಯಾಂಕ್‌ ಲೆಟರ್ ವಶಪಡಿಸಿಕೊಂಡಿದ್ದಾರೆ. ಸಾಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಬಸ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಲಕ್ಷ ರೂ. ನಗದನ್ನು ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್ ಕೊಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ಬಸ್‌ನಲ್ಲಿ ತಪಾಸಣೆ ವೇಳೆ ಪತ್ತೆ ಆಗಿದೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ನಿಪ್ಪಾಣಿಗೆ ಬಸ್ ಆಗಮಿಸುತ್ತಿತ್ತು. ತಪಾಸಣೆ ವೇಳೆ ಮಹಾರಾಷ್ಟ್ರ ನೀರಾವರಿ ಇಲಾಖೆ ನಿವೃತ್ತ ಅಧಿಕಾರಿ ಅಣ್ಣಾಸಾಹೇಬ್ ಪಾಟೀಲ್ ಬಳಿ 8 ಲಕ್ಷ ಹಣ ಪತ್ತೆ ಆಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಹಣ ಸಾಗಾಟ

ಬೆಳಗಾವಿ: ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಅಕ್ರಮವಾಗಿ ಹಣ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದ್ದು, 9 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಕುಡಚಿ ಚೆಕ್​ಪೋಸ್ಟ್​ನಲ್ಲಿ ಕಾರೊಂದನ್ನು ತಡೆದು ತಪಾಸಣೆ ನಡೆಸಿದಾಗ 8 ಲಕ್ಷ ನಗದು ಪತ್ತೆಯಾಗಿದೆ. ಪ್ರಾಥಮಿಕ ವಿಚಾರಣೆ ವೇಳೆ ದಾಖಲೆ ಇಲ್ಲದಿರುವುದು ತಿಳಿದುಬಂದಿದೆ. ಹೀಗಾಗಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಇತ್ತ ಚಿಕ್ಕಾಲಗುಡ್ಡ ಚೆಕ್​ಪೋಸ್ಟ್​ನಲ್ಲೂ ಒಂದು ಕಾರನ್ನು ತಪಾಸಣೆ ನಡೆಸಿದಾಗ ದಾಖಲೆ ಇಲ್ಲದ 1 ಲಕ್ಷ ನಗದು ಪತ್ತೆಯಾಗಿದೆ. ಕೂಡಲೇ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಸದ್ಯ ಚುನಾವಣಾ ಅಧಿಕಾರಿಗಳು ಎರಡು ಪ್ರತ್ಯೇಕ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.5 ಕೆಜಿ ಚಿನ್ನಾಭರಣ ಜಪ್ತಿ, ಬೆಳಗಾವಿಯಲ್ಲಿ 9 ಲಕ್ಷ ವಶಕ್ಕೆ

ಚಿಕ್ಕಮಗಳೂರಿನಲ್ಲಿ ಭರ್ಜರಿ ಭೇಟೆ

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್​ಗಳಲ್ಲಿ 20 ಲಕ್ಷ ರೂಪಾಯಿ ನಗದು, ಲಕ್ಷಾಂತರ ಮೌಲ್ಯದ ಗಿಫ್ಟ್‌ಗಳನ್ನು ಜಪ್ತಿ ಮಾಡಲಾಗಿದೆ. ಕಡೂರು ಚೆಕ್‌ಪೋಸ್ಟ್‌ನಲ್ಲಿ 6 ಲಕ್ಷಕ್ಕೂ ಹೆಚ್ಚು, ತರೀಕೆರೆ ಚೆಕ್‌ಪೋಸ್ಟ್‌ನಲ್ಲಿ 3 ಲಕ್ಷಕ್ಕೂ, ಲಕ್ಕವಳ್ಳಿ ಎಂ.ಎನ್.ಕ್ಯಾಂಪ್‌ನಲ್ಲಿ ಒಂದು ಲಕ್ಷ ನಗದು ಸೀಜ್​ ಮಾಡಲಾಗಿದೆ. ಕೊರಿಯರ್ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ 7.5 ಲಕ್ಷ ಮೌಲ್ಯದ 760 ಜೀನ್ಸ್‌ ಪ್ಯಾಂಟ್‌ ಮತ್ತು ಬೀರೂರಿನಲ್ಲಿ 68 ಸಾವಿರಕ್ಕೂ ಮೌಲ್ಯದ 47 ಕುಕ್ಕರ್‌, 77 ಸೀರೆಗಳನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹಾಗಾಗಿ ಜಿಲ್ಲೆಯ ಚೆಕ್​ಪೋಸ್ಟ್​ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಕಣ್ಣೀರಿಡುತ್ತಲೇ ಬೆಂಬಲಿಗರನ್ನು ಸಮಾಧಾನಿಸುತ್ತಿರುವ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಸ್​ಎ ರಾಮದಾಸ್

ಮಾರ್ಚ್ 29ರಿಂದ ಈವರೆಗೆ ಬೆಂಗಳೂರಲ್ಲಿ 53.83 ಕೋಟಿ ರೂಪಾಯಿಗೂ ಅಧಿಕ ಹಣ, ಮದ್ಯ, ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಬರೋಬ್ಬರಿ 1187 ಎಫ್​ಐಆರ್​ ದಾಖಲಾಗಿವೆ. 8.26 ಕೋಟಿ ರೂ. ನಗದು, 22.16 ಕೋಟಿ ರೂ. ಮೌಲ್ಯದ ಮದ್ಯ, 9.51 ಕೋಟಿ ರೂ. ಮೌಲ್ಯದ ಡ್ರಗ್ಸ್, 4.73 ಲಕ್ಷ ರೂ. ಮೌಲ್ಯದ ಗೃಹಪಯೋಗಿ ವಸ್ತುಗಳು, 4.87 ಕೋಟಿ ರೂ. ಮೌಲ್ಯದ ಉಡುಗೊರೆ ಮತ್ತು 4.27 ಕೋಟಿ ರೂ. ಮೌಲ್ಯದ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:50 pm, Sat, 15 April 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ