Karnataka Assembly Election 2023: ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನಸಭೆ ಚುನಾವಣಗೆ ಈಗಾಗಲೆ ದಿನಾಂಕ ನಿಗದಿಯಾಗಿದ್ದು ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಇನ್ನು ನಾಮಪತ್ರ ಸಲ್ಲಿಕೆ ಗುರುವಾರ (ಏ.13) ರಿಂದ ಪ್ರಾರಂಭವಾಗಿದ್ದು ಏಪ್ರಿಲ್​ 20 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

Karnataka Assembly Election 2023: ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
ಬಿಜೆಪಿ, ಜೆಡಿಎಸ್​, ಕಾಂಗ್ರೆಸ್​
Follow us
ವಿವೇಕ ಬಿರಾದಾರ
|

Updated on:Apr 14, 2023 | 7:10 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಗೆ (Karnataka Assembly Election) ಈಗಾಗಲೆ ದಿನಾಂಕ ನಿಗದಿಯಾಗಿದ್ದು ಮೇ 10 ರಂದು ಮತದಾನ (Voting) ಹಾಗೂ ಮೇ 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಇನ್ನು ನಾಮಪತ್ರ (Nomination) ಸಲ್ಲಿಕೆ ಗುರುವಾರ (ಏ.13) ರಿಂದ ಪ್ರಾರಂಭವಾಗಿದ್ದು ಏಪ್ರಿಲ್​ 20 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನಾಮಪತ್ರ ಸಲ್ಲಿಕೆಗೆ ಸಮಯ ನಿಗದಿ ಪಡಿಸಿದ್ದು, ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಲ್ಲಿಸಬಹುದಾಗಿದೆ. ಈ ಹಿನ್ನೆಲೆ ನಿನ್ನೆ ಮೊದಲ ದಿನ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯ 27 ಅಭ್ಯರ್ಥಿಗಳು, ಕಾಂಗ್ರೆಸ್​ನ 26, ಎಎಪಿ 10, ಜೆಡಿಎಸ್​ 12, 45 ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಬೀಳಗಿಯಲ್ಲಿ ನಾಮಪತ್ರ ಸಲ್ಲಿಸಿದ ಮುರುಗೇಶ್ ನಿರಾಣಿ

ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಸಾಂಕೇತಿಕವಾಗಿ ಜಿಲ್ಲೆಯ ಬೀಳಗಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ್ದರು. ಬೀಳಗಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ. ಬೀಳಗಿ ತಾಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಯಾಗಿರುವ ತಹಸೀಲ್ದಾರ್​ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ಮುನ್ನ ಬೀಳಗಿ ಪಟ್ಟಣದ ಪ್ರಸಿದ್ದ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದರು. ನಿರಾಣಿಗೆ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ ಮತ್ತು ಸ್ಥಳೀಯ ಮುಖಂಡರು ಸಾಥ್​ ನೀಡಿದ್ದರು.

ಇದನ್ನೂ ಓದಿ: ಬಿಜೆಪಿಗೆ ಮತ ಹಾಕದಂತೆ ಆಣೆ, ಪ್ರಮಾಣ ಆರೋಪ: ನೀತಿ ಸಂಹಿತೆ ಉಲ್ಲಂಘಣೆ ಅಡಿ ಸ್ವಾಮೀಜಿ ವಿರುದ್ಧ ದೂರು ದಾಖಲು

ನಾಮಪತ್ರ ಸಲ್ಲಿಸಿದ ಎಸ್.ಟಿ.ಸೋಮಶೇಖರ್​​

ಯಶವಂತಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸಚಿವ ಎಸ್.ಟಿ.ಸೋಮಶೇಖರ್ ಅವರು ನಾಮಪತ್ರ ಸಲ್ಲಿಸಿದರು. ಪತ್ನಿ ಶ್ರೀಮತಿ ರಾಧಾ, ಪುತ್ರ ನಿಶಾಂತ್, ಸೂಚಕ ಅನಿಲ್ ಚೆಳಗೆರೆ ಮತ್ತು ರಂಗರಾಜ್ ಜೊತೆ ಹೇರೋಹಳ್ಳಿಯ ಬಿಬಿಎಂಪಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದ್ದರು.

ನಾಮಪತ್ರ ಸಲ್ಲಿಸಿದ ಎಸ್.ಟಿ.ಸೋಮಶೇಖರ್​

ಯಶವಂತಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸಚಿವ ಎಸ್.ಟಿ.ಸೋಮಶೇಖರ್ ಅವರು ನಾಮಪತ್ರ ಸಲ್ಲಿಸಿದರು. ಪತ್ನಿ ಶ್ರೀಮತಿ ರಾಧಾ, ಪುತ್ರ ನಿಶಾಂತ್, ಸೂಚಕ ಅನಿಲ್ ಚೆಳಗೆರೆ ಮತ್ತು ರಂಗರಾಜ್ ಜೊತೆ ಹೇರೋಹಳ್ಳಿಯ ಬಿಬಿಎಂಪಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದ್ದರು.

ಮಾಜಿ ಸಚಿವ ರಮೇಶ್​ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಗೋಕಾಕ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮೊದಲು ದಿನವೇ ನಾಮಪತ್ರ ಸಲ್ಲಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ತೆರಳಿದ ಅವರು ಚುನಾವಣಾಧಿಕಾರಿ ಗೀತಾ ಕೌಜಲಗಿ ಅವರಲ್ಲಿ ನಾಮಪತ್ರ ನೀಡಿದ್ದರು.

ಸಚಿವ ಸಿ.ಸಿ ಪಾಟೀಲ್ ನಾಮಪತ್ರ ಸಲ್ಲಿಕೆ

ನರಗುಂದ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸಚಿವ ಸಿ.ಸಿ ಪಾಟೀಲ್ ಅವರು ನಾಮಪತ್ರ ಸಲ್ಲಿಸಿದರು. ಬಾಗಲಕೋಟೆ ಸಂಸದ ಗದ್ದಿಗೌಡರ್, ವಿಧಾನ ಪರಿಷತ್ ಸದಸ್ಯ ಸಂಕನೂರು ಮತ್ತು ಇತರ ಪ್ರಮುಖರು ಇದ್ದರು. ಕ್ಷೇತ್ರ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗಿದೆ.

ಸಚಿವ ಸಿ.ಸಿ ಪಾಟೀಲ್ ನಾಮಪತ್ರ ಸಲ್ಲಿಕೆ

ನರಗುಂದ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸಚಿವ ಸಿ.ಸಿ ಪಾಟೀಲ್ ಅವರು ನಾಮಪತ್ರ ಸಲ್ಲಿಸಿದರು. ಬಾಗಲಕೋಟೆ ಸಂಸದ ಗದ್ದಿಗೌಡರ್, ವಿಧಾನ ಪರಿಷತ್ ಸದಸ್ಯ ಸಂಕನೂರು ಮತ್ತು ಇತರ ಪ್ರಮುಖರು ಇದ್ದರು. ಕ್ಷೇತ್ರ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಯಿತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:09 am, Fri, 14 April 23

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್