ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಗೆ (Karnataka Assembly Election) ಈಗಾಗಲೆ ದಿನಾಂಕ ನಿಗದಿಯಾಗಿದ್ದು ಮೇ 10 ರಂದು ಮತದಾನ (Voting) ಹಾಗೂ ಮೇ 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಇನ್ನು ನಾಮಪತ್ರ (Nomination) ಸಲ್ಲಿಕೆ ಗುರುವಾರ (ಏ.13) ರಿಂದ ಪ್ರಾರಂಭವಾಗಿದ್ದು ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನಾಮಪತ್ರ ಸಲ್ಲಿಕೆಗೆ ಸಮಯ ನಿಗದಿ ಪಡಿಸಿದ್ದು, ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಲ್ಲಿಸಬಹುದಾಗಿದೆ. ಈ ಹಿನ್ನೆಲೆ ನಿನ್ನೆ ಮೊದಲ ದಿನ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯ 27 ಅಭ್ಯರ್ಥಿಗಳು, ಕಾಂಗ್ರೆಸ್ನ 26, ಎಎಪಿ 10, ಜೆಡಿಎಸ್ 12, 45 ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಸಾಂಕೇತಿಕವಾಗಿ ಜಿಲ್ಲೆಯ ಬೀಳಗಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ್ದರು. ಬೀಳಗಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ. ಬೀಳಗಿ ತಾಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಯಾಗಿರುವ ತಹಸೀಲ್ದಾರ್ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ಮುನ್ನ ಬೀಳಗಿ ಪಟ್ಟಣದ ಪ್ರಸಿದ್ದ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದರು. ನಿರಾಣಿಗೆ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ ಮತ್ತು ಸ್ಥಳೀಯ ಮುಖಂಡರು ಸಾಥ್ ನೀಡಿದ್ದರು.
ಇದನ್ನೂ ಓದಿ: ಬಿಜೆಪಿಗೆ ಮತ ಹಾಕದಂತೆ ಆಣೆ, ಪ್ರಮಾಣ ಆರೋಪ: ನೀತಿ ಸಂಹಿತೆ ಉಲ್ಲಂಘಣೆ ಅಡಿ ಸ್ವಾಮೀಜಿ ವಿರುದ್ಧ ದೂರು ದಾಖಲು
ಯಶವಂತಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸಚಿವ ಎಸ್.ಟಿ.ಸೋಮಶೇಖರ್ ಅವರು ನಾಮಪತ್ರ ಸಲ್ಲಿಸಿದರು. ಪತ್ನಿ ಶ್ರೀಮತಿ ರಾಧಾ, ಪುತ್ರ ನಿಶಾಂತ್, ಸೂಚಕ ಅನಿಲ್ ಚೆಳಗೆರೆ ಮತ್ತು ರಂಗರಾಜ್ ಜೊತೆ ಹೇರೋಹಳ್ಳಿಯ ಬಿಬಿಎಂಪಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದ್ದರು.
ಯಶವಂತಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸಚಿವ ಎಸ್.ಟಿ.ಸೋಮಶೇಖರ್ ಅವರು ನಾಮಪತ್ರ ಸಲ್ಲಿಸಿದರು. ಪತ್ನಿ ಶ್ರೀಮತಿ ರಾಧಾ, ಪುತ್ರ ನಿಶಾಂತ್, ಸೂಚಕ ಅನಿಲ್ ಚೆಳಗೆರೆ ಮತ್ತು ರಂಗರಾಜ್ ಜೊತೆ ಹೇರೋಹಳ್ಳಿಯ ಬಿಬಿಎಂಪಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದ್ದರು.
ಗೋಕಾಕ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮೊದಲು ದಿನವೇ ನಾಮಪತ್ರ ಸಲ್ಲಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ತೆರಳಿದ ಅವರು ಚುನಾವಣಾಧಿಕಾರಿ ಗೀತಾ ಕೌಜಲಗಿ ಅವರಲ್ಲಿ ನಾಮಪತ್ರ ನೀಡಿದ್ದರು.
ನರಗುಂದ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸಚಿವ ಸಿ.ಸಿ ಪಾಟೀಲ್ ಅವರು ನಾಮಪತ್ರ ಸಲ್ಲಿಸಿದರು. ಬಾಗಲಕೋಟೆ ಸಂಸದ ಗದ್ದಿಗೌಡರ್, ವಿಧಾನ ಪರಿಷತ್ ಸದಸ್ಯ ಸಂಕನೂರು ಮತ್ತು ಇತರ ಪ್ರಮುಖರು ಇದ್ದರು. ಕ್ಷೇತ್ರ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗಿದೆ.
ನರಗುಂದ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸಚಿವ ಸಿ.ಸಿ ಪಾಟೀಲ್ ಅವರು ನಾಮಪತ್ರ ಸಲ್ಲಿಸಿದರು. ಬಾಗಲಕೋಟೆ ಸಂಸದ ಗದ್ದಿಗೌಡರ್, ವಿಧಾನ ಪರಿಷತ್ ಸದಸ್ಯ ಸಂಕನೂರು ಮತ್ತು ಇತರ ಪ್ರಮುಖರು ಇದ್ದರು. ಕ್ಷೇತ್ರ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಯಿತು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:09 am, Fri, 14 April 23