ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Election) ಹಿನ್ನೆಲೆ ಪ್ರಮುಖ ಮೂರು ಪ್ರಕ್ಷಗಳಿಂದ ಪ್ರಚಾರ ಜೋರಾಗಿಯೇ ನಡೆದಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಹೈಕಮಾಂಡ್ ನಾಯಕರು ಒಬ್ಬರ ಹಿಂದೆ ಒಬ್ಬರಂತೆ ರಾಜ್ಯ ಆಗಮಿಸುತ್ತಿದ್ದಾರೆ. ಇಲ್ಲಿಯವರೆಗೆ ಬಿಜೆಪಿಯ ಕೇಂದ್ರ ನಾಯಕರಾದ ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amith Shah), ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ಆಗಮಿಸುತ್ತಿದ್ದರು. ಆದರೆ ಈಗ ಇವರೊಡನೆ ವಿವಿಧ ರಾಜ್ಯದ ಸಿಎಂ, ಡಿಸಿಎಂ ಮತ್ತು ಕೇಂದ್ರ ಸಚಿವರು ಆಗಮಿಸುತ್ತಿದ್ದಾರೆ. ಹೌದು ಇಂದು (ಏ.25) ಮಂಡ್ಯ (Mandya) ಮತ್ತು ವಿಜಯಪುರ (Vijayapura) ಜಿಲ್ಲೆಗೆ ಹಿಂದೂ ಫೈಯರ್ ಬ್ರ್ಯಾಂಡ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adithynatrh) ಅವರು ಆಗಮಿಸಲಿದ್ದಾರೆ.
ಬೆಳಗ್ಗೆ ಲಖನೌನಿಂದ ಮೈಸೂರಿಗೆ ಆಗಮಿಸುವ ಸಿಎಂ ಯೋಗಿ ಆದಿತ್ಯನಾಥ್ ಅವರು, 11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ 2.40ಕ್ಕೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಸವೇಶ್ವರರ ದರ್ಶನ ಪಡೆದು ಮಧ್ಯಾಹ್ನ 3.05ಕ್ಕೆ ಬಸವನಬಾಗೇವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಪರ ಪ್ರಚಾರ ಮಾಡಲಿದ್ದಾರೆ.
ಇದಾದ ನಂತರ ಸಂಜೆ 4.50ಕ್ಕೆ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡು ಇಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ್ ಪರ ಮತಯಾಚಿಸಲಿದ್ದಾರೆ. ಸಮಾವೇಶ ಮುಗಿದ ಬಳಿಕ ಉತ್ತರ ಪ್ರದೇಶದ ಲಖನೌಗೆ ನಿರ್ಗಮಿಸುತ್ತಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಬೆಳಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಬೆಳಗಾವಿ ಜಿಲ್ಲೆಯ ಕಾಗವಾಡದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಿ, ನಮತರ ಮಧ್ಯಾಹ್ನ 1.15ಕ್ಕೆ ಬೈಲಹೊಂಗಲದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಬಳಿಕ ಸಂಜೆ 4 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆಯುವ ಸಮಾವೇಶದಲ್ಲಿ ಮತಯಾಚನೆ ಮಾಡಲಿದ್ದಾರೆ.
ಇದನ್ನೂ ಓದಿ: TV9 Kannada CVoter survey: ಅತಂತ್ರ ವಿಧಾನಸಭೆಯತ್ತ ರಾಜ್ಯ; ಟಿವಿ9, ಸಿವೋಟರ್ ಸಮೀಕ್ಷೆ
ಇಂದು ಕಲಬುರಗಿ ಜಿಲ್ಲೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ 11 ಗಂಟೆಗೆ ಕಲಬುರಗಿಯಲ್ಲಿ ಪ್ರಬುದ್ಧರ ಜೊತೆ ಸಂವಾದ ನಡೆಸಲಿದ್ದಾರೆ.
ಬಳಿಕ 3 ಗಂಟೆಗೆ ಅಳಂದದಲ್ಲಿ ನಡೆಯುವ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಆ ಬಳಿಕ ಸಂಜೆ 4 ಗಂಟೆಗೆ ಕಲಬುರಗಿ ನಗರದಲ್ಲಿ ಮನೆ ಮನೆ ಸಂಪರ್ಕ ಮಾಡಲಿದ್ದಾರೆ.
ರಾಜ್ಯದಲ್ಲಿ ಇಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ದುಮುಖಲಿಸರುವ ಇವರು, ಬೆಳಗ್ಗೆ 11.30ಕ್ಕೆ ಹುಕ್ಕೇರಿಯಲ್ಲಿನ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ 2.30ಕ್ಕೆ ಗೋಕಾಕ್ನಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ, ಸಂಜೆ 4 ಗಂಟೆಗೆ ರಾಮದುರ್ಗದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗುತ್ತಾರೆ.
ಇಂದು ವಿಜಯಪುರ ಜಿಲ್ಲೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಚಾರ ನಡೆಸಲಿದ್ದಾರೆ. ಸಿದ್ದೇಶ್ವರ ಆಶ್ರಮಕ್ಕೆ ಭೇಟಿ ನೀಡಿ, ನಂತರ ಬೆಳಗ್ಗೆ 11 ಗಂಟೆಗೆ ವಿಜಯಪುರ ಬಿಜೆಪಿ ಕಚೇರಿಯಲ್ಲಿ ದೇವೇಂದ್ರ ಫಡ್ನವಿಸ್ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕನಮಡಿ ಧರಿದೇವರ ದೇವಸ್ಥಾನಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬಬಲೇಶ್ವರದಲ್ಲಿ ದೇವೇಂದ್ರ ಫಡ್ನವಿಸ್ ಪ್ರಚಾರ ಸಭೆ ನಡೆಸಲಿದ್ದಾರೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:19 am, Wed, 26 April 23