AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಬಿಜೆಪಿ ಕೇಂದ್ರ ನಾಯಕರ ರಾಜ್ಯ ಪ್ರವಾಸ: ಉತ್ತರಕ್ಕೆ ಅಮಿತ್​ ಶಾ, ದಕ್ಷಿಣಕ್ಕೆ ಜಿಪಿ ನಡ್ಡಾ

ಇಂದು ಮಧ್ಯಾಹ್ನ 1:45ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ರೋಡ್​ಶೋದಲ್ಲಿ ಭಾಗಿಯಾಗಿ, ಸಂಜೆ 4.30ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಚಾರ ಮಾಡಲಿದ್ದಾರೆ.

Karnataka Assembly Election 2023: ಬಿಜೆಪಿ ಕೇಂದ್ರ ನಾಯಕರ ರಾಜ್ಯ ಪ್ರವಾಸ: ಉತ್ತರಕ್ಕೆ ಅಮಿತ್​ ಶಾ, ದಕ್ಷಿಣಕ್ಕೆ ಜಿಪಿ ನಡ್ಡಾ
ಜೆಪಿ ನಡ್ಡಾ, ಅಮಿತ್​ ಶಾ
ವಿವೇಕ ಬಿರಾದಾರ
|

Updated on:Apr 24, 2023 | 7:06 AM

Share

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ರಾಜ್ಯ ಬಿಜೆಪಿ (BJP) ಘಟಕ ಜನವಾಹಿನಿ ಹೆಸರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದಲ್ಲಿ ಪ್ರಚಾರ ಆರಂಭಿಸಿದೆ. ನಿನ್ನೆ (ಏ.23) ರಂದು ಬೆಂಗಳೂರಿನಿಂದ ಆರಂಭವಾದ ರೋಡ್​ ಶೋ 11 ವಿಧಾನಸಭಾ ಕ್ಷೇತ್ರಗಳನ್ನು ತಲುಪಿತು. ಈ ಮಧ್ಯೆಯೇ ಪಕ್ಷದ ಕೇಂದ್ರ ನಾಯಕರು ಕೂಡ ರಾಜ್ಯದಲ್ಲಿ ರೋಡ್​ ಶೋ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ಇಂದು (ಏ.24) ಮಧ್ಯಾಹ್ನ 1:45ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಬೆಂಗಳೂರಿಗೆ (Bengaluru) ಆಗಮಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟದಲ್ಲಿ ನಡೆಯುವ ರೋಡ್​ಶೋದಲ್ಲಿ ಭಾಗಿಯಾಗಿ, ಸಂಜೆ 4.30ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಚಾರ ಮಾಡಲಿದ್ದಾರೆ.

ಇದಾದ ನಂತರ ಸಂಜೆ 6.30ಕ್ಕೆ ದೇವನಹಳ್ಳಿಯಲ್ಲಿ ಬಿಜೆಪಿ ಮುಖಂಡರ ಜೊತೆ ಜೆ.ಪಿ.ನಡ್ಡಾ ಸಭೆ ನಡೆಸಿ, ರಾತ್ರಿ 9 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಹಿಂದಿರುಗುತ್ತಾರೆ.

ಇದನ್ನೂ ಓದಿ: 20 ವರ್ಷಗಳ ಬಳಿಕ ಕನಕಪುರದಲ್ಲಿ ಈ ರೀತಿಯ ಚುನಾವಣೆ ನಡೆಯುತ್ತಿದೆ ಎಂದ ಆರ್​ ಅಶೋಕ್

ಅಮಿತ್​ ಶಾ ರಾಜ್ಯ ಪ್ರವಾಸ

ನಿನ್ನೆ (ಏ.23) ರಾತ್ರಿ 9.30ಕ್ಕೆ ಹೈದರಾಬಾದ್​ನಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ರೇಸ್​ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ತಂಗಿದ್ದರು. ಇಂದು (ಏ.23) ಬೆಳಗ್ಗೆ 8.55ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಅವರು ಬೆಳಗ್ಗೆ 10.30ಕ್ಕೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆಯಲಿದ್ದಾರೆ. ಅಲ್ಲಿಂದ ಬೆಳಗ್ಗೆ 11.30ಕ್ಕೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಗೆ ತೆರಳಿ ಗುಂಡ್ಲುಪೇಟೆಯಲ್ಲಿ ರೋಡ್​ಶೋ ನಡೆಸಲಿದ್ದಾರೆ. ಮಧ್ಯಾಹ್ನ 2.25ಕ್ಕೆ ಹಾಸನ ಜಿಲ್ಲೆ ಆಲೂರಿಗೆ ಆಗಮಿಸಿ ಮತಬೇಟೆಯಾಡಲಿದ್ದಾರೆ. ಸಂಜೆ 4.40ಕ್ಕೆ ಹುಬ್ಬಳ್ಳಿಗೆ ತೆರಳಲಿರುವ ಅಮಿತ್​ ಶಾ ಅವರು ಸಂಜೆ 6.15ಕ್ಕೆ ನಗರದ ಖಾಸಗಿ ಹೋಟೆಲ್​ನಲ್ಲಿ ಪಕ್ಷದ ಮುಖಂಡರ ಜೊತೆ ಸಭೆ ನಡೆಸುತ್ತಾರೆ. ರಾತ್ರಿ ಖಾಸಗಿ ಹೋಟೆಲ್​ನಲ್ಲಿಯೇ ಅಮಿತ್​ ಶಾ ವಾಸ್ತವ್ಯ ಹೂಡಲಿದ್ದಾರೆ.

ಏ.25 ಅಮಿತ್​ ಶಾ ರಾಜ್ಯ ಪ್ರವಾಸ

ನಾಳೆ (ಏ.25) ರಂದು ಬೆಳಗ್ಗೆ 9.10ಕ್ಕೆ ಹುಬ್ಬಳ್ಳಿಯಿಂದ ಬಾಗಲಕೋಟೆ ಜಿಲ್ಲೆಯ ತೇರದಾಳಕ್ಕೆ ಪ್ರಯಾಣ ಬೆಳಸುವ ಅವರು 10.20ಕ್ಕೆ ತೇರದಾಳದ ಪ್ರಸಿದ್ಧ ಅಲ್ಲಮಪ್ರಭುಗಳ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ಬೆಳಗ್ಗೆ 11ಕ್ಕೆ ತೇರದಾಳದಲ್ಲಿ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾಗಿ, ಮಧ್ಯಾಹ್ನ 2ಕ್ಕೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯಲ್ಲಿ ನಡೆಯುವ ಬಿಜೆಪಿ ಸಾಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ.

ಸಂಜೆ 4.20ಕ್ಕೆ ಯಾದಗಿರಿಗೆ ತೆರಳುವ ಅವರು ನಗರದಲ್ಲಿ ರೋಡ್​ಶೋ ನಡೆಸಲಿದ್ದಾರೆ. ರಾತ್ರಿ 7.30ಕ್ಕೆ ಕಲಬುರಗಿ ನಗರದತ್ತ ಮುಖ ಮಾಡುವ ಅವರು ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರ ಜೊತೆ ಸಭೆ ಮಾಡಲಿದ್ದಾರೆ. ರಾತ್ರಿ 8.45ಕ್ಕೆ ಕಲಬುರಗಿಯಿಂದ ದೆಹಲಿಗೆ ಹಿಂದಿರುಗುತ್ತಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:06 am, Mon, 24 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ