Karnataka Assembly Election 2023: ಮತದಾನದಲ್ಲಿ ಈ ಜಿಲ್ಲೆಯೇ ರಾಜ್ಯಕ್ಕೆ ಪ್ರಥಮ. ಕಾರಣವೇನು?

ಘಟಾನುಘಟಿ ರಾಜಕಾರಿಣಿಗಳು ಸ್ಪರ್ಧಿಸಿರುವ ಆ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಿಲು ಅಲ್ಲಿನ ಜಿಲ್ಲಾಡಳಿತ ವಿನೂತನ ಹಾಗೂ ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸಿತ್ತು. ಜಾಗೃತಿಯ ಫಲವೋ, ಇಲ್ಲ ಅಭ್ಯರ್ಥಿಗಳ ಆಮಿಷವೋ? ಜಿಲ್ಲೆಯ ಮತದಾನ ಪ್ರಮಾಣ ರಾಜ್ಯಕ್ಕೆ ಪ್ರಥಮವಾಗಿದೆ. ಅಷ್ಟಕ್ಕೂ ಆ ಜಿಲ್ಲೆ ಯಾವುದು ಅಂತೀರಾ? ಈ ಸ್ಟೋರಿ ನೋಡಿ.

Karnataka Assembly Election 2023: ಮತದಾನದಲ್ಲಿ ಈ ಜಿಲ್ಲೆಯೇ ರಾಜ್ಯಕ್ಕೆ ಪ್ರಥಮ. ಕಾರಣವೇನು?
ಚಿಕ್ಕಬಳ್ಳಾಪುರ ಮತಗಟ್ಟೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 12, 2023 | 9:31 AM

ಚಿಕ್ಕಬಳ್ಳಾಪುರ: 2023ರ ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Election 2023) ಯಲ್ಲಿ ಮತದಾರರನ್ನ ಮತಗಟ್ಟೆಗಳತ್ತ ಸೆಳೆಯಲು ಭಾರತೀಯ ಚುನಾವಣಾ ಆಯೋಗ ಈ ಸಲ ವಿನೂತನ ರೀತಿಯಲ್ಲಿ ಮತಗಟ್ಟೆಗಳ ಸಜ್ಜಗೊಳಿಸಿ ಮತದಾರರ ಆಕರ್ಷಣೆಗೆ ಯತ್ನಿಸಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ 5 ವಿಧಾನಸಭಾ ಕ್ಷೇತ್ರಗಳಲ್ಲಿ ಬರಪೂರ ಮತದಾನವಾಗಿದ್ದು. ಕೆಲವು ಬೂತ್​ಗಳಲ್ಲಿ ರಾತ್ರಿ 8 ಗಂಟೆಯವರೆಗೂ ಮತದಾನ ನಡೆದಿತ್ತು. ಇದರಿಂದ ಜಿಲ್ಲೆಯಾದ್ಯಂತ ಇರುವ 10,38,828 ಜನ ಮತದಾರರಲ್ಲಿ ಬರೊಬ್ಬರಿ 8,98,310 ಜನ ಮತದಾರರು ಮತ ಚಲಾಯಿಸಿದ್ದಾರೆ. ಇದರಿಂದ ಶೇಕಡಾ 85.83 ರಷ್ಟು ಮತದಾನವಾಗಿದ್ದು. ರಾಜ್ಯದಲ್ಲಿಯೇ ಅತೀ ಹೆಚ್ಚು ಮತದಾನವಾದ ಜಿಲ್ಲೆಗಳಲ್ಲಿ ಪ್ರಥಮ ಸ್ಥಾನದಲ್ಲಿದೆ. ಇದರಿಂದ ಜಿಲ್ಲಾ ಚುನಾವಣಾಧಿಕಾರಿ ಎನ್.ಎಂ.ನಾಗರಾಜ್ ಶ್ರಮಿಸಿದ ಅಧಿಕಾರಿ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.

ವಿನೂತನ ರೀತಿಯಲ್ಲಿ ಮತದಾನ ಜಾಗೃತಿ

ಇನ್ನು ಜಿಲ್ಲೆಯ ಗೌರೀಬಿದನೂರು, ಬಾಗೇಪಲ್ಲಿ, ಶಿಡ್ಲಘಟ್ಟ, ಚಿಂತಾಮಣಿ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಚಿಕ್ಕಬಳ್ಳಾಪುರ ಜಿಲ್ಲಾಢಳಿತ ಶ್ರಮಿಸಿತ್ತು. ಸ್ವತಃ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ, ಜಿಲ್ಲೆಯಾಧ್ಯಂತ ಮತದಾನದ ಬಗ್ಗೆ ಪ್ರಮಾಣವಚನ, ವಾಕಥಾನ್, ಬೈಕ್ ರ್ಯಾಲಿ, ರಂಗೋಲಿ ಸ್ಪರ್ಧೆ ಬೀದಿನಾಟಕ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಸಿಬ್ಬಂದಿಯನ್ನ ಬಳಸಿಕೊಂಡಿದ್ದರು. ಒಟ್ಟಾರೆ ಚಿಕ್ಕಬಳ್ಳಾಪುರ ಜಿಲ್ಲೆ ಮತದಾನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದೆ.

ವರದಿ: ಭೀಮನಗೌಡ ಟಿವಿ9 ಚಿಕ್ಕಬಳ್ಳಾಫುರ

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ