ಬೆಂಗಳೂರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗ: ಇಲ್ಲಿದೆ ಜನನಾಯಕರ ಕೇಸ್ ಹಿಸ್ಟರಿ
ಬೆಂಗಳೂರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಗೊಂಡಿದೆ. ಚುನಾವಣಾ ನೀತಿ ಸಂಹಿತೆ ಅನ್ವಯ ತಮ್ಮ ಮೇಲಿನ ಪ್ರಕರಣಗಳನ್ನು ಪ್ರಕಟಿಸಬೇಕು. ಸ್ವತಃ ತಮ್ಮ ಮೇಲಿನ ಪ್ರಕರಣಗಳ ಕುರಿತು ಘೋಷಣೆ ಮಾಡಿಕೊಂಡಿರುವ ಅಭ್ಯರ್ಥಿಗಳ ಪ್ರಕರಣಗಳ ವಿವರ ಇಲ್ಲಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಬೆರಳೆಣಿಕೆ ಪ್ರಾರಂಭವಾಗಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಶ್ರೀಮಂತಿಕೆ ಮತ್ತು ಕ್ರಿಮಿನಲ್ ಹಿನ್ನೆಲೆಯನ್ನು ಘೋಷಣೆ ಮಾಡಿಕೊಂಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಅನ್ವಯ ತಮ್ಮ ಮೇಲಿನ ಪ್ರಕರಣಗಳನ್ನು ಪ್ರಕಟಿಸಬೇಕು. ಸ್ವತಃ ತಮ್ಮ ಮೇಲಿನ ಪ್ರಕರಣಗಳ ಕುರಿತು ಘೋಷಣೆ ಮಾಡಿಕೊಂಡಿರುವ ಅಭ್ಯರ್ಥಿಗಳ ಪ್ರಕರಣಗಳ ವಿವರ ರಿವೀಲ್ ಮಾಡಿದ್ದಾರೆ. ಬೆಂಗಳೂರು ವಿಧಾನಸಭಾ ಕ್ಷೇತ್ರಗಳ (Bengaluru Assembly Constituency) ಅಭ್ಯರ್ಥಿಗಳ ಕ್ರಿಮಿನಲ್ (Criminal) ಹಿನ್ನೆಲೆ ಬಹಿರಂಗಗೊಂಡಿದೆ. ಶಾಸಕ ರಾಮಲಿಂಗಾ ರೆಡ್ಡಿ ಮತ್ತು ಶಾಸಕಿ ಸೌಮ್ಯಾರೆಡ್ಡಿ ವಿರುದ್ಧ 11 ಪ್ರಕರಣಗಳು ದಾಖಲಾಗಿವೆ.
ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ದಾಖಲಾದ ಪ್ರಕರಣಗಳು
ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ 6 ಪ್ರಕರಣಗಳು ದಾಖಲಾಗಿವೆ. 2018ರಲ್ಲಿ 1 ಪ್ರಕರಣ, 4 ನೇ ಎಸಿಎಎಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. 2022ರಲ್ಲಿ 3 ಪ್ರಕರಣಗಳು ದಾಖಲಾಗಿವೆ. 2023ರಲ್ಲಿ 2 ಪ್ರಕರಣಗಳು ದಾಖಲಾಗಿವೆ.
ಪ್ರಕರಣಗಳ ವಿವರ
1) ಪಿಎಸ್ಐ ಹಗರಣ ಸಂಬಂಧ ಪ್ರತಿಭಟನೆ ವೇಳೆ ದಾಖಲಾದ ಪ್ರಕರಣ
2) ಸರ್ಕಾರದ ವಿರುದ್ಧದ ಪ್ರತಿಭಟನೆ
3) ಮೇಕೆದಾಟು ಪ್ರತಿಭಟನೆ ವೇಳೆ ದಾಖಲಾದ ಪ್ರಕರಣ
4) ಕ್ರಿಮಿನಲ್ ಮೊಕದ್ದಮೆ
ಶಾಸಕ ರಾಮಲಿಂಗಾರೆಡ್ಡಿ ವಿರುದ್ಧ 5 ಪ್ರಕರಣಗಳು
ಬಿಟಿಎಂ ಲೇಔಟ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ, ಶಾಸಕ ರಾಮಲಿಂಗಾರೆಡ್ಡಿ ವಿರುದ್ಧ 5 ಪ್ರಕರಣಗಳು ದಾಖಲಾಗಿವೆ. 2022ರಲ್ಲಿ 4 ಪ್ರಕರಣ ದಾಖಲಾಗಿವೆ. ಮೇಕೆದಾಟು ಪ್ರತಿಭಟನೆ ಸಂಬಂಧ 2 ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನಲ್ಲಿ NDMA ಆಕ್ಟ್ ಅಡಿ ಒಂದು ಪ್ರಕರಣ ದಾಖಲು, ಮೇಕೆದಾಟು ಪ್ರತಿಭಟನೆ ಸಂಬಂಧ ಪ್ರಕರಣ ದಾಖಲಾಗಿವೆ.
ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಬೈರತಿ ಬಸವರಾಜ್ ವಿರುದ್ಧ 3 ಪ್ರಕರಣಗಳು ದಾಖಲಾಗಿದ್ದು, ಲೋಕಾಯುಕ್ತದಲ್ಲಿ ತನಿಖಾ ಹಂತದಲ್ಲಿವೆ.
1) ವಂಚನೆ ಪ್ರಕರಣ ಸಂಬಂಧ ಲೋಕಾಯುಕ್ತದಲ್ಲಿ ಪ್ರಕರಣ ಬಾಕಿ
2) ಡಿಕ್ಲರೇಷನ್ ಆಪ್ ಡ್ಯೂಟಿ ಸಂಬಂಧ 2 ಪ್ರಕರಣ ದಾಖಲಾಗಿವೆ.
ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಒಂದು ಪ್ರಕರಣ ಬಾಕಿ ಇದೆ. 2004 ರಲ್ಲಿ ವಿಧಾನಸಭಾ ಚುನಾವಣೆ ವೇಳೆ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ.
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಕೇಶವ ಮೂರ್ತಿ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯ ಒಂದು ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿದೆ.
ಜಯನಗರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. 2021ರಲ್ಲಿ ಮಾನಹಾನಿ ಸಂಬಂಧ 1, 2023ರಲ್ಲಿ ಅತಿಕ್ರಮಣ ಪ್ರವೇಶ ಮತ್ತು ಸುಳ್ಳು ದಾಖಲಾತಿ ಮತ್ತು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಎಂದು 2 ಪ್ರಕರಣಗಳು ದಾಖಲಾಗಿವೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:57 am, Tue, 2 May 23