ಐಷಾರಾಮಿ ವಿಲ್ಲಾದಲ್ಲಿ ಮತದಾರರಿಗೆ ಹಂಚಲು ಇಟ್ಟಿದ್ದ ಕೋಟಿ ಕೋಟಿ ಹಣ ಪತ್ತೆ

ಮತದಾನಕ್ಕೆ ಐದು ದಿನವಷ್ಟೇ ಬಾಕಿ ಇದೆ. ಮತದಾರರ ಮನಗೆಲ್ಲೋಕೆ ಪ್ರಚಾರದ ನಡುವೆ ಝಣಝಣ ಕಾಂಚಾಣ ಸದ್ದು ಮಾಡುತ್ತಿದೆ. ಚಿನ್ನದನಾಡು ಕೋಲಾರದಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ಐಷಾರಾಮಿ ವಿಲ್ಲಾ ಮೇಲೆ ದಾಳಿ ಮಾಡಿ ಕೋಟಿ ಕೋಟಿ ಹಣ ಜಪ್ತಿ ಮಾಡಿದ್ದಾರೆ.

ಐಷಾರಾಮಿ ವಿಲ್ಲಾದಲ್ಲಿ ಮತದಾರರಿಗೆ ಹಂಚಲು ಇಟ್ಟಿದ್ದ ಕೋಟಿ ಕೋಟಿ ಹಣ ಪತ್ತೆ
ಕೋಟಿ ಕೋಟಿ ಹಣ ಜಪ್ತಿ
Follow us
ವಿವೇಕ ಬಿರಾದಾರ
|

Updated on: May 05, 2023 | 9:21 AM

ಕೋಲಾರ: ಮತದಾನಕ್ಕೆ ಐದು ದಿನವಷ್ಟೇ ಬಾಕಿ ಇದೆ. ಮತದಾರರ ಮನಗೆಲ್ಲೋಕೆ ಪ್ರಚಾರದ ನಡುವೆ ಝಣಝಣ ಕಾಂಚಾಣ ಸದ್ದು ಮಾಡುತ್ತಿದೆ. ಈ ಹಣ ಇನ್ನೇನು ಮತದಾರರ ಕೈ ಸೇರಬೇಕು ಅನ್ನುವಾಗಲೇ ಕೋಟಿ ಕೋಟಿ ಹಣ ಜಪ್ತಿಯಾಗಿದೆ. ಚಿನ್ನದ ನಾಡಿನಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ಐಷಾರಾಮಿ ವಿಲ್ಲಾ ಮೇಲೆ ದಾಳಿ ಮಾಡಿದ್ದು, ಬರೋಬ್ಬರಿ 4 ಕೋಟಿ ರೂ. ಹಣ ಜಪ್ತಿ ಮಾಡಿದ್ದಾರೆ.

ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲೆಂದು ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್​​ನ ವಿಲ್ಲಾ ಸುಮಾರು 4.05 ಕೋಟಿ ರೂಪಾಯಿ ಹಣ ಇಟ್ಟಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕೆಜಿಎಫ್ ಎಸ್ಪಿ ಧರಣಿದೇವಿ ನೇತೃತ್ವದ ತಂಡ ಕಾರ್ಯಾಚರಣೆಗೆ ಇಳಿದಿದ್ದು, ವಿಲ್ಲಾದ ರೂಮ್ ನಂಬರ್-279ನಲ್ಲಿ ಬೆಡ್​​ ಮೇಲೆ 500, 200, 2 ಸಾವಿರ ರೂ. ಮುಖಬೆಲೆಯ ಕಂತೆ ಕಂತೆ ಹಣ ಸಿಕ್ಕಿದೆ. ಬಂಗಾರಪೇಟೆ ಪಂಚಾಯಿತಿ ಹೆಸರು, ಬೂತ್​ಗಳ ಹೆಸರು ಬರೆದು ಎನ್ವಲಪ್ ಕವರ್​ಗಳಲ್ಲಿ ಹಣ ಇಟ್ಟಿದ್ದರು.

ರೂಮ್​ನಲ್ಲಿ ಒಟ್ಟು 2 ಕೋಟಿ ರೂ. ಹಣ ಪತ್ತೆಯಾಗಿದ್ದು, ಅಲ್ಲದೇ ವಿಲ್ಲಾದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಪರಿಶೀಲನೆ ನಡೆಸಿದಾಗ ಮೂರು ಗೋಣಿ ಚೀಲಗಳಲ್ಲಿ ತುಂಬಿಸಿ ಇಟ್ಟಿದ್ದ ಒಂದೂವರೆ ಕೋಟಿ ಹಣ ಪತ್ತೆಯಾಗಿದೆ. ಒಟ್ಟಾರೆ 4.5 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಅಧಿಕಾರಿಗಳು ದಾಳಿ ಮಾಡುವ ಮುಂಚೆಯೇ ಹಣ ತಂದಿಟ್ಟವರು ಎಸ್ಕೇಪ್ ಆಗಿದ್ದಾರೆ.

ಇನ್ನು ದಾಖಲೆಗಳ ಪರಿಶೀಲನೆ ನಡೆಸಿದಾಗ ಈ ವಿಲ್ಲಾ ಬೆಂಗಳೂರು ಮೂಲದ ಪೋನಿಕಾ ಕಾಪಾಡಿಯಾ ವೈಫ್ ಆಫ್ ಕರನ್ ಕಾಪಾಡಿಯಾ ಎಂಬುವರ ಹೆಸರಿನಲ್ಲಿದೆ. ರಮೇಶ್ ಯಾದವ್ ಎಂಬವರು ಬಾಡಿಗೆ ಪಡೆದಿದ್ದಾರೆ ಎಂಬುದು ಗೊತ್ತಾಗಿದೆ. ಕಾರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮುಖಂಡನದ್ದು ಎಂಬ ಮಾಹಿತಿ ಸಿಕ್ಕಿದ್ದು, ಪೊಲೀಸ್ರು ತನಿಖೆ ಕೈಗೊಂಡಿದ್ದಾರೆ.

ಒಟ್ಟಾರೆ ಮತದಾನದ ದಿನ ಹತ್ತಿರವಾಗ್ತಿದ್ದಂತೆ ಝಣ ಝಣ ಕಾಂಚಾಣದ ಸದ್ದು ಜೋರಾಗಿದೆ. ರಾಜಕೀಯ ಮುಖಂಡರು ಮತದಾರರನ್ನ ಬುಟ್ಟಿಗೆ ಹಾಕಿಕೊಳ್ಳೋಕೆ ಹಣದ ಮಳೆ ಸುರಿಸುತ್ತಿದ್ದಾರೆ.

– ರಾಜೇಂದ್ರಸಿಂಹ ಟಿವಿ9 ಕೋಲಾರ

ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ