ಮೇ 8ರಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಸಂಜೆ 5ರಿಂದ ಮೇ10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧ

ನಾಳೆ (ಮೇ.08) ಸಂಜೆಯಿಂದ ಬಹಿರಂಗ ಪ್ರಚಾರ ಮುಕ್ತಾಯವಾಗಲಿದ್ದು, ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ನಾಳೆ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ.

ಮೇ 8ರಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಸಂಜೆ 5ರಿಂದ ಮೇ10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:May 08, 2023 | 6:43 AM

ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election) ತೀವ್ರ ಜಿದ್ದಾಜಿದ್ದಿಯಿಂದ ಕೂಡಿದೆ. ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ಆರಂಭವಾಗುತ್ತದೆ. ಈ ಸಂಬಂಧ ರಾಜಕೀಯ ಪಕ್ಷಗಳು (Political Parties) ಅಬ್ಬರದ ಪ್ರಚಾರ ನಡೆಸಿವೆ. ಆದರೆ ನಾಳೆ (ಮೇ.08) ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆದರೆ ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ಸೋಮವಾರ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ. ಮತ ಎಣಿಕೆ ದಿನ ಬೆಳ್ಳಗೆ 6 ರಿಂದ ಮಧ್ಯರಾತ್ರಿ 12 ರವರೆಗೂ ಮದ್ಯ ಸಿಗುವುದಿಲ್ಲ.

ಈ ಬಳಿಕ ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಪರಿಗಣಿಸುತ್ತದೆ. ಈ ಅವಧಿಯಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಅಬ್ಬರದ ಪ್ರಚಾರಗಳೆಲ್ಲವು ಸಂಜೆ 6 ಗಂಟೆಗೆ ಮುಗಿಯಬೇಕು. ಮಂಗಳವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕೈಗೊಂಡು ಅಂದು ಸಂಜೆ 6 ಗಂಟೆ ಒಳಗೆ ಮುಗಿಸಬೇಕು. ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯವಾಗುತ್ತದೆ.

ಇದನ್ನೂ ಓದಿ: KSRTC: ಕರ್ನಾಟಕ ಚುನಾವಣೆ, ಮೇ 9 ಮತ್ತು 10 ರಂದು ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬಹಿರಂಗ ಪ್ರಚಾರ ಮುಗಿಸಿದ ಬಳಿಕ ಸ್ಟಾರ್​ ಪ್ರಚರಕರು, ಮುಖಂಡರು ಕ್ಷೇತ್ರ ತೊರೆಯಬೇಕು. ಕ್ಷೇತ್ರದಲ್ಲಿ ಸಂಬಂಧಪಡದ ವ್ಯಕ್ತಿಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಜೆಯ ಬಳಿಕ ಧ್ವನಿವರ್ಧಕಗಳನ್ನು ಬಳಕೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Sun, 7 May 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್