ಬಹಿರಂಗ ಪ್ರಚಾರಕ್ಕೆ ಇಂದು ಅಂತ್ಯ: ಮನೆ ಮನೆಗೆ ತೆರಳಿ ಮತಯಾಚನೆ, ಮದ್ಯ ಮಾರಾಟ ನಿಷೇಧ

ಇಂದು (ಮೇ.08) ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಈ ಸಂಬಂಧ ಸಂಜೆ 5ರ ಬಳಿಕ ಸಭೆ, ಸಮಾರಂಭ, ಉತ್ಸವ, ರ‍್ಯಾಲಿ ಮತ್ತು ಧ್ವನಿ ವರ್ಧಕಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ.

ಬಹಿರಂಗ ಪ್ರಚಾರಕ್ಕೆ ಇಂದು ಅಂತ್ಯ: ಮನೆ ಮನೆಗೆ ತೆರಳಿ ಮತಯಾಚನೆ, ಮದ್ಯ ಮಾರಾಟ ನಿಷೇಧ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:May 08, 2023 | 7:40 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಅಖಾಡ ರಂಗೇರಿದೆ. ಎಲ್ಲಾ ಪಕ್ಷಗಳ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ (Campaign) ನಡೆಸುತ್ತಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಸಮಾವೇಶ, ರೋಡ್​ ಶೋ ನಡೆಸಿದರು. ಇಂದು (ಮೇ.08) ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ (Open Campaign) ತೆರೆ ಬೀಳಲಿದೆ. ಈ ಸಂಬಂಧ ಸಂಜೆ 5ರ ಬಳಿಕ ಸಭೆ, ಸಮಾರಂಭ, ಉತ್ಸವ, ರ‍್ಯಾಲಿ ಮತ್ತು ಧ್ವನಿ ವರ್ಧಕಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಕ್ಷೇತ್ರದಲ್ಲಿ ಅಭ್ಯರ್ಥಿ ಹೊರತುಪಡಿಸಿ ಬೇರೆ ನಾಯಕರು ಬರುವಂತಿಲ್ಲ. ಆದರೆ ಮನೆ ಮನೆಗೆ ತೆರಳಿ ಅಭ್ಯರ್ಥಿ ಸೇರಿ 6 ಜನರು ಮಾತ್ರ ಪ್ರಚಾರ ಮಾಡಲು ಅವಕಾಶವಿದೆ.

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್

ಇಂದು ಸಂಜೆ 6 ಗಂಟೆಯಿಂದ ಇನ್ನು ಮೂರು ದಿನ ರಾಜ್ಯದಲ್ಲಿ ಮದ್ಯ ಸಿಗುವುದಿಲ್ಲ. ಇಂದು ಸಂಜೆ 6 ಗಂಟೆಯಿಂದ ಮೇ 11 ರ ಬೆಳಗ್ಗೆ 6 ಗಂಟೆಯವರೆಗೂ ಮದ್ಯ ಮಾರಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 8 , 9 , 10 ರಂದು ಡ್ರೈ ಡೇ ಆಚಾರಿಸುವಂತೆ ಮದ್ಯ ಮಾರಾಟದ ಅಂಗಡಿ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಅಲ್ಲದೇ ಮತ ಎಣಿಕೆಗೂ ಸಮಸ್ಯೆಯಾಗದಂತೆ ಮೇ 13 ರ ಬೆಳಗ್ಗೆ 6 ಗಂಟೆಯಿಂದ ಮೇ.14 ರ ಬೆಳ್ಳಗ್ಗೆ 6 ಗಂಟೆವರೆಗೂ ಮದ್ಯ ನಿರ್ಬಂಧಿಸಲಾಗಿದೆ. ಇದರಿಂದ ಇಂದು ಮದ್ಯದಂಗಡಿಗಳಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಮದ್ಯದ ಬೆಲೆಯು ದುಪ್ಪಟ್ಟಾಗಿದ್ದು, ಬೀಯರ್ ಬೆಲೆಯು ಶೇ 15 ರಿಂದ ಶೇ 20 ರಷ್ಟು ಏರಿಕೆಯಾಗಿದೆ.

ಇದನ್ನೂ ಓದಿ: ಮೇ 9,10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ: ಆಯೋಗ ಆದೇಶ

ಬಹಿರಂಗ ಪ್ರಚಾರ ಮುಗಿದ ಬಳಿಕ ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಪರಿಗಣಿಸುತ್ತದೆ. ಈ ಅವಧಿಯಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಅಬ್ಬರದ ಪ್ರಚಾರಗಳೆಲ್ಲವು ಸಂಜೆ 6 ಗಂಟೆಗೆ ಮುಗಿಯಬೇಕು. ಮಂಗಳವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕೈಗೊಂಡು ಅಂದು ಸಂಜೆ 6 ಗಂಟೆ ಒಳಗೆ ಮುಗಿಸಬೇಕು. ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯವಾಗುತ್ತದೆ.

ಬಹಿರಂಗ ಪ್ರಚಾರ ಮುಗಿಸಿದ ಬಳಿಕ ಸ್ಟಾರ್​ ಪ್ರಚರಕರು, ಮುಖಂಡರು ಕ್ಷೇತ್ರ ತೊರೆಯಬೇಕು. ಕ್ಷೇತ್ರದಲ್ಲಿ ಸಂಬಂಧಪಡದ ವ್ಯಕ್ತಿಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಜೆಯ ಬಳಿಕ ಧ್ವನಿವರ್ಧಕಗಳನ್ನು ಬಳಕೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.

ಮತಾದನಾಕ್ಕೆ 2 ದಿನ ಬಾಕಿ ಉಳಿದಿದೆ. ಮೇ.10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:39 am, Mon, 8 May 23