ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸೀಫ್ (ರಾಜು) ಸೇಠ್ ಗೆಲುವಿನ ಸಂಭ್ರಮದಲ್ಲಿ ಪಾಲ್ಗೊಂಡ ಕೆಲ ಕಿಡಿಗೇಡಿಗಳು "ಪಾಕಿಸ್ತಾನ್ ಜಿಂದಾಬಾದ್" ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ.
ಬೆಳಗಾವಿ: ಬೆಳಗಾವಿ (Belagavi) ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿ ಆಸೀಫ್ (ರಾಜು) ಸೇಠ್ ಗೆಲುವಿನ ಸಂಭ್ರಮದಲ್ಲಿ ಪಾಲ್ಗೊಂಡ ಕೆಲ ಕಿಡಿಗೇಡಿಗಳು “ಪಾಕಿಸ್ತಾನ್ ಜಿಂದಾಬಾದ್” ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಕಾಂಗ್ರೆಸ್ ಬೆಂಬಲಿಗರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗೆಲುವು ಸಂಭ್ರಮಿಸಿ, ಆದರೆ ಈ ರೀತಿಯ ಭಾರತ ವಿರೋಧಿ ಘೋಷಣೆಗಳು ಬೇಡ. ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಲವು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.
ಶನಿವಾರ (ಮೇ.13) ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರ ಹೊರಗೆ ಮಧ್ಯಾಹ್ನ ಆಸೀಫ್ ಸೇಠ್ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದರು. ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್ ಧ್ವಜ ಹಿಡಿದು ಬಂದ ಕೆಲವರು ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಮೂರು ಬಾರಿ ಘೋಷಣೆ ಮೊಳಗಿಸಿದ್ದರು. ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ತಾಕೀತು ಮಾಡಿದರು. ಈ ರೀತಿ ಬೇರೆ ಮಾತು ತೆಗೆದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.
Ye kis angle se tujhe “Asif Sait Zindabad” lag rha hai? https://t.co/WqpbCDjR8L pic.twitter.com/8wojYZurST
— BALA (@erbmjha) May 13, 2023
ಇದನ್ನೂ ಓದಿ: ಸೋಲಿನ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾಚಾರ್ಯ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಕ್ಷೇತ್ರದಲ್ಲಿ ಜಯಗಳಿಸಿದೆ. 66 ಕ್ಷೇತ್ರಗಳಲ್ಲಿ ಬಿಜೆಪಿಗೆಲುವು ಸಾಧಿಸಿದೆ. ಜೆಡಿಎಸ್ 19 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಇತರರು 4 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:44 am, Sun, 14 May 23