ಕಾಂಗ್ರೆಸ್​ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ

|

Updated on: May 14, 2023 | 7:44 AM

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಆಸೀಫ್​​ (ರಾಜು) ಸೇಠ್​​ ಗೆಲುವಿನ ಸಂಭ್ರಮದಲ್ಲಿ ಪಾಲ್ಗೊಂಡ ಕೆಲ ಕಿಡಿಗೇಡಿಗಳು "ಪಾಕಿಸ್ತಾನ್​​ ಜಿಂದಾಬಾದ್​" ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ.

ಕಾಂಗ್ರೆಸ್​ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ
ಪಾಕಿಸ್ತಾನ ಜಿಂದಾಬಾದ್ ಕೂಗಿದ ಕಿಡಿಗೇಡಿಗಳು
Follow us on

ಬೆಳಗಾವಿ: ಬೆಳಗಾವಿ (Belagavi) ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ (Congress)​ ಅಭ್ಯರ್ಥಿ ಆಸೀಫ್​​ (ರಾಜು) ಸೇಠ್​​ ಗೆಲುವಿನ ಸಂಭ್ರಮದಲ್ಲಿ ಪಾಲ್ಗೊಂಡ ಕೆಲ ಕಿಡಿಗೇಡಿಗಳು “ಪಾಕಿಸ್ತಾನ್​​ ಜಿಂದಾಬಾದ್​” ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಕಾಂಗ್ರೆಸ್ ಬೆಂಬಲಿಗರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗೆಲುವು ಸಂಭ್ರಮಿಸಿ, ಆದರೆ ಈ ರೀತಿಯ ಭಾರತ ವಿರೋಧಿ ಘೋಷಣೆಗಳು ಬೇಡ. ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಲವು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ಶನಿವಾರ (ಮೇ.13) ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರ ಹೊರಗೆ ಮಧ್ಯಾಹ್ನ ಆಸೀಫ್ ಸೇ‌ಠ್​​ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದರು. ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್‌ ಧ್ವಜ ಹಿಡಿದು ಬಂದ ಕೆಲವರು ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಮೂರು ಬಾರಿ ಘೋಷಣೆ ಮೊಳಗಿಸಿದ್ದರು. ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ತಾಕೀತು ಮಾಡಿದರು. ಈ ರೀತಿ ಬೇರೆ ಮಾತು ತೆಗೆದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಸೋಲಿನ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾಚಾರ್ಯ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಕ್ಷೇತ್ರದಲ್ಲಿ ಜಯಗಳಿಸಿದೆ. 66 ಕ್ಷೇತ್ರಗಳಲ್ಲಿ ಬಿಜೆಪಿಗೆಲುವು ಸಾಧಿಸಿದೆ. ಜೆಡಿಎಸ್ 19 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಇತರರು 4 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:44 am, Sun, 14 May 23