Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Mysuru Visit: ನಾಳೆ ಮೈಸೂರಿನ ಜಂಬೂ ಸವಾರಿ ಮಾರ್ಗದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಮೈಸೂರಿನಲ್ಲಿ ನರೇಂದ್ರ ಮೋದಿಯವರ ರೋಡ್ ಶೋ ಭಾನುವಾರ ಸಂಜೆ 5:45 ಕ್ಕೆ ಪ್ರಾರಂಭವಾಗಿ 6:30 ಕ್ಕೆ ಮುಕ್ತಾಯಗೊಳ್ಳಲಿದೆ. ನಗರದ ಗನ್ ಹೌಸ್‌ ವಿದ್ಯಾಪೀಠದಿಂದ ರೋಡ್‌ಶೋ ಆರಂಭಗೊಂಡು ಎಲ್‌ಐಸಿ ವೃತ್ತದಲ್ಲಿ ಕೊನೆಗೊಳ್ಳಲಿದೆ.

PM Modi Mysuru Visit: ನಾಳೆ ಮೈಸೂರಿನ ಜಂಬೂ ಸವಾರಿ ಮಾರ್ಗದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ನರೇಂದ್ರ ಮೋದಿ
Follow us
ಆಯೇಷಾ ಬಾನು
|

Updated on:Apr 29, 2023 | 12:43 PM

ಮೈಸೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ರಾಷ್ಟ್ರ ನಾಯಕರು ಬಿಡುವಿಲ್ಲದೆ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 30ರಂದು ಮೈಸೂರಿಗೆ ಆಗಮಿಸಲಿದ್ದಾರೆ. ಪ್ರಸಿದ್ಧ ಜಂಬೂ ಸವಾರಿ ಮಾರ್ಗದಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ ನಡೆಯಲಿದೆ. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಮತ್ತೊಮ್ಮೆ ಜಗಮಗಿಸುತ್ತಿದೆ. ಎರಡು ದಿನಗಳ ಕರ್ನಾಟಕ ಪ್ರವಾಸ ಮುಗಿಸಿ ದೆಹಲಿಗೆ ವಾಪಸಾಗುವ ಮೊದಲು ಮೈಸೂರಿನಲ್ಲಿ ನಡೆಯಲಿರುವ ರೋಡ್ ಶೋ ನರೇಂದ್ರ ಮೋದಿ ಅವರ ಕೊನೆಯ ಕಾರ್ಯಕ್ರಮವಾಗಿದೆ.

ಮೈಸೂರಿನಲ್ಲಿ ನರೇಂದ್ರ ಮೋದಿಯವರ ರೋಡ್ ಶೋ ಭಾನುವಾರ ಸಂಜೆ 5:45 ಕ್ಕೆ ಪ್ರಾರಂಭವಾಗಿ 6:30 ಕ್ಕೆ ಮುಕ್ತಾಯಗೊಳ್ಳಲಿದೆ. ನಗರದ ಗನ್ ಹೌಸ್‌ ವಿದ್ಯಾಪೀಠದಿಂದ ರೋಡ್‌ಶೋ ಆರಂಭಗೊಂಡು ಎಲ್‌ಐಸಿ ವೃತ್ತದಲ್ಲಿ ಕೊನೆಗೊಳ್ಳಲಿದೆ. 5.3 ಕಿಲೋಮೀಟರ್ ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಜನರು ರೋಡ್‌ಶೋನಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: PM Narendra Modi Speech: ಅಂಬೇಡ್ಕರ್​​ರನ್ನು ರಾಕ್ಷಸ, ರಾಷ್ಟ್ರದ್ರೋಹಿ ಎಂದಿದ್ದ ಕಾಂಗ್ರೆಸ್; ಮೋದಿ ಆರೋಪ

ಭಾನುವಾರ, ಹಳೇ ಮೈಸೂರು ಪ್ರದೇಶದ ರಾಮನಗರದ ಶೆಟ್ಟಿಹಳ್ಳಿಯಲ್ಲಿ ನರೇಂದ್ರ ಮೋದಿ ಕಾರ್ಯಕ್ರಮವನ್ನು ನಡೆಸಲಿದ್ದಾರೆ, ಅಲ್ಲಿ ಸುತ್ತಮುತ್ತಲಿನ 10 ಕ್ಷೇತ್ರಗಳಿಂದ ಸುಮಾರು 50,000 ಜನರು ಸೇರುವ ನಿರೀಕ್ಷೆಯಿದೆ. ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ರಾಮನಗರದಲ್ಲಿ ನಡೆದ ಕಾರ್ಯಕ್ರಮದ ನಂತರ ಪ್ರಧಾನಿಯವರು ರೋಡ್ ಶೋಗಾಗಿ ಮೈಸೂರಿಗೆ ತೆರಳಲಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಅವರ ಭದ್ರಕೋಟೆ ಎಂದು ಪರಿಗಣಿಸಲಾದ ರಾಮನಗರಕ್ಕೆ ಇದು ನರೇಂದ್ರ ಮೋದಿ ಅವರ ಮೊದಲ ಭೇಟಿಯಾಗಿದೆ.

ನರೇಂದ್ರ ಮೋದಿ ಅವರು ಏಪ್ರಿಲ್ 29 ರ ಶನಿವಾರದಿಂದ ಕರ್ನಾಟಕಕ್ಕೆ ಎರಡು ದಿನಗಳ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ತಮ್ಮ ಎರಡು ದಿನಗಳ ಭೇಟಿಯಲ್ಲಿ ಆರು ಸಾರ್ವಜನಿಕ ಸಭೆಗಳು ಮತ್ತು ಎರಡು ರೋಡ್ ಶೋ ನಡೆಸಲಿದ್ದಾರೆ. ಫೆಬ್ರವರಿಯಿಂದ ಕರ್ನಾಟಕಕ್ಕೆ ನರೇಂದ್ರ ಮೋದಿ ಅವರ ಒಂಬತ್ತನೇ ಭೇಟಿ ಇದಾಗಿದೆ.

ವಿಧಾನಸಭಾ ಚುನಾವಣೆ ಸಂಬಂಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:40 pm, Sat, 29 April 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !