Karnataka Assembly Election 2023: ಮೇ. 2 ರಂದು ಚಿತ್ರದುರ್ಗಕ್ಕೆ ಮೋದಿ ಭೇಟಿ, ಪ್ರಧಾನಿಗೆ ಮ್ಯಾಸ ಬೇಡರ ಧಿರಿಸಿನ ಮಾದರಿ ಸನ್ಮಾನ ?

ಪ್ರಧಾನಿ ನರೇಂದ್ರ ಮೋದಿಯವರು ನಾಳೆ (ಮೇ.02) ರಂದು ಕೋಟೆನಾಡು ಚಿತ್ರದುರ್ಗ ಆಗಮಿಸಲಿದ್ದಾರೆ.

Karnataka Assembly Election 2023: ಮೇ. 2 ರಂದು ಚಿತ್ರದುರ್ಗಕ್ಕೆ ಮೋದಿ ಭೇಟಿ, ಪ್ರಧಾನಿಗೆ  ಮ್ಯಾಸ ಬೇಡರ ಧಿರಿಸಿನ ಮಾದರಿ ಸನ್ಮಾನ ?
ಪ್ರಧಾನಿ ಮೋದಿ
Follow us
|

Updated on: May 01, 2023 | 10:05 AM

ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ಪ್ರಚಾರದ ಭರಾಟೆ ಜೋರಾಗಿಯೇ ನಡೆದಿದೆ. ಬಿಜೆಪಿ (BJP) ಕೇಂದ್ರ ನಾಯಕರು ರಾಜ್ಯದಲ್ಲಿ ರೌಂಡ್ಸ್​​ ಹಾಕುತ್ತಿದ್ದು, ನಾಲ್ಕು ದಿಕ್ಕಿನಲ್ಲೂ ಕಮಲವನ್ನು ಅರಳಿಸಲು ಟೊಂಕ ಕಟ್ಟಿ ನಿಂತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ರಾಜ್ಯ ಪ್ರವಾಸ ಮಾಡುತ್ತಿದ್ದು, ಏ.29 ಮತ್ತು 30 ರಂದು ಎರಡು ದಿನ ಕಲ್ಯಾಣ ಕರ್ನಾಟಕ (Kalyana Karnataka) ಮತ್ತು ಹಳೇ ಮೈಸೂರಿನಲ್ಲಿ ಅಬ್ಬರದ ಪ್ರಚಾರ ಮತ್ತು ರೋಡ್​ ಶೋ ನಡೆಸಿದರು. ವೇಳಾಪಟ್ಟಿ ಪ್ರಕಾರ ಇನ್ನು 6 ಬಾರಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಇದರಂತೆ ನಾಳೆ (ಮೇ.02) ರಂದು ಬೆಳಿಗ್ಗೆ 10:30ಕ್ಕೆ ಕೋಟೆನಾಡು ಚಿತ್ರದುರ್ಗಕ್ಕೆ (Chitradurga) ಆಗಮಿಸಲಿದ್ದಾರೆ. ನಗರದ ಜಯದೇವ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಮೊದಲು ಒನಕೆ ಓಬವ್ವ ಸ್ಟೇಡಿಯಂಗೆ ಆಗಮಿಸಲಿರುವ ಪ್ರಧಾನಿ ಮೋದಿಯವರು ಅಲ್ಲಿಂದ ಓಕಾರ್ ಮೂಲಕ ಜಯದೇವ ಕ್ರೀಡಾಂಗಣಕ್ಕೆ ಆಗಮಿಸುತ್ತಾರೆ. ಈ ಹಿನ್ನೆಲೆ ನಗರದಲ್ಲಿ ಪೊಲೀಸ್​ ಬಿಗಿ ಭದ್ರತೆ ಮಾಡಲಾಗಿದೆ.

ಚಿತ್ರದುರ್ಗದಲ್ಲಿ ವಾಹನಗಳ ಸಂಚಾರ ಮಾರ್ಗ ಬದಲಾವಣೆ

ಚಿತ್ರದುರ್ಗದಲ್ಲಿ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹೊಸ ಹೈವೇ ಮೂಲಕ ಬಸ್ ನಿಲ್ದಾಣಕ್ಕೆ ತೆರಳುವ ವಾಹನಗಳು, ಜೆಎಂಐಟಿ ವೃತ್ತ, ಹೊಸ ಬೈಪಾಸ್ ಮೂಲಕ ಸಂಚರಿಸುವಂತೆ ಟ್ರಾಫಿಕ್​ ಪೊಲೀಸರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರಿಂದ ಇಂದು ಭರ್ಜರಿ ಪ್ರಚಾರ: ಯಾರು ಎಲ್ಲೆಲ್ಲಿ? ಇಲ್ಲಿದೆ ಡಿಟೇಲ್ಸ್

ಅಲ್ಲದೇ ಪ್ರಧಾನಿ ಮೋದಿ ಸಮಾವೇಶದಲ್ಲಿ ಭಾಗಿಯಾಗುವವರು ಕಪ್ಪು ಬಟ್ಟೆ ಧರಿಸುವಂತಿಲ್ಲ, ಬೆಂಕಿಪೊಟ್ಟಣ,‌ ಲೈಟರ್ ತರುವಂತಿಲ್ಲ, ನೀರಿನ ಬಾಟಲ್, ಬ್ಯಾಗ್, ಸ್ಪೋಟಕ‌ ಸಾಮಗ್ರಿಗಳಿಗೆ ನಿರ್ಬಂಧಿಸಲಾಗಿದೆ. ಪ್ಲೇಕಾರ್ಡ್​ ಮತ್ತು ಅಪಾಯಕಾರಿ ವಸ್ತುಗಳನ್ನು ತರುವಂತಿಲ್ಲ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಸೂಚಿಸಿದೆ.

ಇನ್ನು ಬೃಹತ್ ಸಮಾವೇಶದಲ್ಲಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಜನ ಭಾಗಿಯಾಗಲಿದ್ದು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಬಿಜೆಪಿ ಪ್ರಚಾರ ಸಭೆಗೆ 75ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. 5 ಕಡೆ ವಾಹನಗಳ ಪಾರ್ಕಿಂಗ್​ಗೆ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ಬಂದವರಿಗೆ ಕುಡಿಯಲು ನೀರಿನ ವ್ಯವಸ್ಥೆ ಮಾಡಲಾಗಿದೆ.

ಚಿತ್ರದುರ್ಗದ 6ಕ್ಷೇತ್ರ, ದಾವಣಗೆರೆಯ 4ಕ್ಷೇತ್ರ ವ್ಯಾಪ್ತಿಯ ಸಮಾವೇಶ ನಡೆಯಲಿದ್ದು, 10 ಕ್ಷೇತ್ರದ ಅಭ್ಯರ್ಥಿಗಳ‌ ಪರ ಪ್ರಧಾನಿ ಮೋದಿ ಮತಯಾಚಿಸಲಿದ್ದಾರೆ. 2018 ರಲ್ಲಿ 10ದಲ್ಲಿ ಬಿಜೆಪಿ 8 ಮತಕ್ಷೇತ್ರಗಳಲ್ಲಿ ವಿಜಯಪತಾಕೆ ಹಾರಿಸಿತ್ತು.

ಕೋಟೆನಾಡಿನ ಬುಡಕಟ್ಟು ಸಂಸ್ಕೃತಿ ಬಿಂಬಿಸಲು ಜಿಲ್ಲಾ ಬಿಜೆಪಿ ನಾಯಕರು ಪ್ಲಾನ್ ಮಾಡಿಕೊಂಡಿದ್ದು, ಪ್ರಧಾನಿ ಮೋದಿಯವರಿಗೆ ಮ್ಯಾಸ ಬೇಡರ ಧಿರಿಸಿನ ಮಾದರಿ ಸನ್ಮಾನ ಮಾಡಲು ಯೋಜನೆ ರೂಪಿಸಿದ್ದಾರೆ. ಹಾಗೇ ತಮಟೆ ಬಾರಿಸಿ ಸಮಾವೇಶ ಉದ್ಘಾಟನೆಗೆ ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗುತ್ತಿ. ಅಲ್ಲದೇ ಪ್ರಧಾನಿ ಮೋದಿಯವರಿಗೆ ವೀರ ವನಿತೆ ಒನಕೆ ಓಬವ್ವ ವಿಗ್ರಹವನ್ನು ಗಿಫ್ಟ್ ನೀಡಲು‌‌ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಚಿತ್ರದುರ್ಗ-ದಾವಣಗೆರೆಯಲ್ಲಿ ಎಸ್ಸಿ-ಎಸ್ಟಿ ಮತಗಳು ನಿರ್ಣಾಯಕವಾಗಿವೆ. ದಾವಣಗೆರೆ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್, ಚಿತ್ರದುರ್ಗ ಎಂಎಲ್​ಸಿ ಕೆ.ಎಸ್.ನವೀನ್ ನೇತೃತ್ವದಲ್ಲಿ ಲಿಂಗಾಯತ ಮತಕ್ಕೆ ಗಾಳ ಹಾಕಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ 5.300ಕೋಟಿ ರೂ ನೀಡಲಾಗಿದೆ. ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಯೋಜನೆ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಸೇರಿ ಇತರೆ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್