ಇಂದಿನಿಂದ 3 ದಿನಗಳ ಕಾಲ ಪಂಜಾಬ್ ಸಿಎಂ ಭಗವಂತ್ ಮಾನ್​ ರಾಜ್ಯ ಪ್ರವಾಸ: ಇಂದು ಹುಬ್ಬಳ್ಳಿಯಲ್ಲಿ ರೋಡ್​ ಶೋ

ಇಂದಿನಿಂದ 3 ದಿನಗಳ ಕಾಲ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್​ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಎಎಪಿ ಅಭ್ಯರ್ಥಿಗಳ ಪರ ರೋಡ್ ಶೋ ‌ನಡೆಸಲಿದ್ದಾರೆ.

ಇಂದಿನಿಂದ 3 ದಿನಗಳ ಕಾಲ ಪಂಜಾಬ್ ಸಿಎಂ ಭಗವಂತ್ ಮಾನ್​ ರಾಜ್ಯ ಪ್ರವಾಸ: ಇಂದು ಹುಬ್ಬಳ್ಳಿಯಲ್ಲಿ ರೋಡ್​ ಶೋ
ಪಂಜಾಬ್ ಸಿಎಂ ಭಗವಂತ್ ಮಾನ್
Follow us
ವಿವೇಕ ಬಿರಾದಾರ
|

Updated on:Apr 18, 2023 | 6:58 AM

ಬೆಂಗಳೂರು: ಇತ್ತೀಚಿಗೆ ರಾಷ್ಟ್ರೀಯ ಪಕ್ಷವಾಗಿ ಮಾನ್ಯತೆ ಪಡೆದ ಆಮ್ ಆದ್ಮಿ ಪಕ್ಷ (Aam Aadmi Party) ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) 140 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹಾಗೇ ದೆಹಲಿ ಮುಖ್ಯಮಂತ್ರಿ, ರಾಷ್ಟ್ರೀಯ ನಾಯಕ ಅರವಿಂದ್​ ಕೇಜ್ರಿವಾಲ್ (Arvind Kejriwal)​ ಕಳೆದ ತಿಂಗಳು ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಣ್ಣೆನಗರಿ ದಾವಣಗೆರೆಗೆ ಭೇಟಿ ನೀಡಿ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಇವರ ಬೆನ್ನಲ್ಲೇ ಇಂದಿನಿಂದ 3 ದಿನಗಳ ಕಾಲ ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್​ (Bhagwant Mann) ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಎಎಪಿ (AAP) ಅಭ್ಯರ್ಥಿಗಳ ಪರ ರೋಡ್ ಶೋ ‌ನಡೆಸಲಿದ್ದಾರೆ.

ಇದನ್ನೂ ಓದಿ: ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿದ ಕೇಂದ್ರ ಚುನಾವಣಾ ಆಯೋಗ

ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿರುವ ಸಿಎಂ ಭಗವಂತ್ ಮಾನ್, ಮಧ್ಯಾಹ್ನ 1.30ಕ್ಕೆ ಗದಗ ಜಿಲ್ಲೆಯ ರೋಣದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ಸಿಎಂ ಭಗವಂತ್ ಮಾನ್ ಅವರ ಮತ್ತೊಂದು ರೋಡ್‌ ಶೋ ನಡೆಯಲಿದೆ. ನಾಳೆ (ಏ.19) ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ, ನಂತರ ಮಧ್ಯಾಹ್ನ 1 ಗಂಟೆಗೆ ಬಾಗಲಕೋಟೆ ಜಿಲ್ಲೆ ತೇರದಾಳದಲ್ಲಿ ರೋಡ್​ ಶೋ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತೇರದಾಳದಲ್ಲಿ ರೈತರ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ, ನಾಡಿದ್ದು ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಜೊತೆ ಬೆಂಗಳೂರಿನ ಎಎಪಿ ಅಭ್ಯರ್ಥಿಗಳ ಪರ ರೋಡ್​ ಶೋ ಮಾಡುತ್ತಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:57 am, Tue, 18 April 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್