ಬೆಂಗಳೂರು: ಇತ್ತೀಚಿಗೆ ರಾಷ್ಟ್ರೀಯ ಪಕ್ಷವಾಗಿ ಮಾನ್ಯತೆ ಪಡೆದ ಆಮ್ ಆದ್ಮಿ ಪಕ್ಷ (Aam Aadmi Party) ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) 140 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹಾಗೇ ದೆಹಲಿ ಮುಖ್ಯಮಂತ್ರಿ, ರಾಷ್ಟ್ರೀಯ ನಾಯಕ ಅರವಿಂದ್ ಕೇಜ್ರಿವಾಲ್ (Arvind Kejriwal) ಕಳೆದ ತಿಂಗಳು ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಣ್ಣೆನಗರಿ ದಾವಣಗೆರೆಗೆ ಭೇಟಿ ನೀಡಿ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಇವರ ಬೆನ್ನಲ್ಲೇ ಇಂದಿನಿಂದ 3 ದಿನಗಳ ಕಾಲ ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಎಎಪಿ (AAP) ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಲಿದ್ದಾರೆ.
ಇದನ್ನೂ ಓದಿ: ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿದ ಕೇಂದ್ರ ಚುನಾವಣಾ ಆಯೋಗ
ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿರುವ ಸಿಎಂ ಭಗವಂತ್ ಮಾನ್, ಮಧ್ಯಾಹ್ನ 1.30ಕ್ಕೆ ಗದಗ ಜಿಲ್ಲೆಯ ರೋಣದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ಸಿಎಂ ಭಗವಂತ್ ಮಾನ್ ಅವರ ಮತ್ತೊಂದು ರೋಡ್ ಶೋ ನಡೆಯಲಿದೆ. ನಾಳೆ (ಏ.19) ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ, ನಂತರ ಮಧ್ಯಾಹ್ನ 1 ಗಂಟೆಗೆ ಬಾಗಲಕೋಟೆ ಜಿಲ್ಲೆ ತೇರದಾಳದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತೇರದಾಳದಲ್ಲಿ ರೈತರ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ, ನಾಡಿದ್ದು ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಜೊತೆ ಬೆಂಗಳೂರಿನ ಎಎಪಿ ಅಭ್ಯರ್ಥಿಗಳ ಪರ ರೋಡ್ ಶೋ ಮಾಡುತ್ತಾರೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:57 am, Tue, 18 April 23