AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Exit Poll Result 2023 Date: ಇಂದೇ ಕರ್ನಾಟಕ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಸಮೀಕ್ಷೆ, ಸಮಯ ವಿವರ ಇಲ್ಲಿದೆ

Karnataka Opinion Poll Result 2023 Date, Time: ಇಂದೇ ಮತದಾನ ಮುಗಿಯುತ್ತಿದ್ದಂತೆಯೇ ಕರ್ನಾಟಕ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಸಮೀಕ್ಷೆ ಪ್ರಕಟವಾಗಲಿದ್ದು, ಸಮಯ ಹಾಗೂ ಇತರ ವಿವರಗಳನ್ನು ಇಲ್ಲಿ ನೀಡಲಾಗಿದೆ.

Exit Poll Result 2023 Date: ಇಂದೇ ಕರ್ನಾಟಕ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಸಮೀಕ್ಷೆ, ಸಮಯ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
| Edited By: |

Updated on:May 10, 2023 | 7:01 AM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪ್ರಕ್ರಿಯೆ (Karnataka Assembly Elections 2023) ಅಂತಿಮ ಹಂತ ತಲುಪಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಈಗಾಗಲೇ ಅಂತ್ಯಗೊಂಡಿದೆ. ಚುನಾವಣಾಪೂರ್ವ ಸಮೀಕ್ಷೆಗಳೂ ಈಗಾಗಲೇ ಪ್ರಕಟಗೊಂಡಿದ್ದು, ‘ಟಿವಿ9’ ಸಮೀಕ್ಷೆಯಲ್ಲಿ ಬಿಜೆಪಿಯು ರಾಜ್ಯದಲ್ಲಿ ಸರಳ ಬಹುಮತದ ಸನಿಹದ ಸ್ಥಾನಗಳನ್ನು ಪಡೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. 224 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದೆ. ಮತದಾನದ ದಿನ ನಡೆಯುವ ಸಮೀಕ್ಷಾ ವರದಿ ಅಥವಾ ಎಕ್ಸಿಟ್​​ಪೋಲ್ (Exit Poll)  ಇಂದೇ ಅಂದರೆ ಮೇ 10ರಂದು ಸಂಜೆ 6 ರಿಂದ 7 ಗಂಟೆಯ ಒಳಗಾಗಿ ಪ್ರಕಟಗೊಳ್ಳಲಿದೆ.

ರಾಜ್ಯದ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದ್ದು, ಜೆಡಿಎಸ್​ ಕೂಡ ಪೈಪೋಟಿ ನೀಡುತ್ತಿದೆ. ಈ ಬಾರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಕೂಡ ಅನೇಕ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉಳಿದಂತೆ ಎಸ್​​ಡಿಪಿಐ, ಎಐಎಂಐಎಂ ಸೇರಿ ಇತರ ಸ್ಥಳೀಯ ಪಕ್ಷಗಳು, ಪಕ್ಷೇತರರು ಕಣದಲ್ಲಿದ್ದಾರೆ.

‘ಟಿವಿ9’ ಸುದ್ದಿವಾಹಿನಿ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಿಜೆಪಿಯು ಸರಳ ಬಹುಮತದ ಸನಿಹ ತಲುಪಲಿದೆ ಎಂಬುದು ಇತ್ತೀಚೆಗೆ ತಿಳಿದುಬಂದಿತ್ತು. ಕೇಸರಿ ಪಕ್ಷವು ಒಟ್ಟಾರೆಯಾಗಿ 105ರಿಂದ 110 ಸ್ಥಾನ ಪಡೆಯಬಹುದು. ಕಾಂಗ್ರೆಸ್ ಪಕ್ಷವು 90 ರಿಂದ 97 ಸ್ಥಾನ ಗಳಿಸಬಹುದು. ಜೆಡಿಎಸ್ 19 ರಿಂದ 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು. ಇತರರು 5 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷಾ ವರದಿ ತಿಳಿಸಿತ್ತು.

ಇದನ್ನೂ ಓದಿ: TV9 Pre-poll Survey: ರಾಜ್ಯದಲ್ಲಿ ಸರಳ ಬಹುಮತದ ಸನಿಹದತ್ತ ಬಿಜೆಪಿ, ಕಾಂಗ್ರೆಸ್​ ಪೈಪೋಟಿ

ಇದಕ್ಕೂ ಮುನ್ನ ‘ಟಿವಿ9 ಕನ್ನಡ’ ಮತ್ತು ‘ಸಿವೋಟರ್’ ಸಹಭಾಗಿತ್ವದಲ್ಲಿ ನಡೆದಿದ್ದ ಚುನಾವಣಾಪೂರ್ವ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಹೇಳಲಾಗಿತ್ತು. ಪ್ರತಿಪಕ್ಷ ಕಾಂಗ್ರೆಸ್ ಶೇ 40 ರಷ್ಟು ಮತಹಂಚಿಕೆ ಪಡೆಯುವ ನಿರೀಕ್ಷೆಯಿದೆ. ಆಡಳಿತಾರೂಢ ಬಿಜೆಪಿ ಶೇ 33.9 ಮತ್ತು ಜೆಡಿಎಸ್ ಶೇ 18.8 ರಷ್ಟು ಮತ ಹಂಚಿಕೆ ಪಡೆಯಲಿದೆ ಎಂದು ಈ ಸಮೀಕ್ಷೆ ಹೇಳಿತ್ತು.

ಬಿಜೆಪಿಗೆ ಮೋದಿ ವರ್ಚಸ್ಸು, ಕಾಂಗ್ರೆಸ್​ಗೆ ಆಘಾತ ನೀಡಿದ ಬಜರಂಗಿ

ಅಂತಿಮ ಹಂತದಲ್ಲಿ ಬಿಜೆಪಿ ಪರ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಬಿರುಸಿನ ಪ್ರಚಾರ ಪಕ್ಷಕ್ಕೆ ಪ್ಲಸ್ ಆಗಿ ಪರಿಣಮಿಸಬಹುದು ಎಂಬ ಲೆಕ್ಕಾಚಾರ ಕೇಸರಿ ಪಕ್ಷದ ಪ್ರಮುಖರದ್ದಾಗಿದೆ. ಇನ್ನು ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾವ ಮಾಡಿರುವುದು ಕಾಂಗ್ರೆಸ್​ಗೆ ತುಸು ಹೊಡೆತ ನೀಡಬಹುದು ಎನ್ನಲಾಗುತ್ತಿದೆ.

ಮತದಾನದ ದಿನ ನಡೆಯುವ ಎಕ್ಸ್​ಟ್ ಪೋಲ್ ಅಥವಾ ಒಪೀನಿಯನ್ ಪೋಲ್ ಏನು ಭವಿಷ್ಯ ನುಡಿಯುತ್ತವೆ ಎಂಬುದನ್ನು ಕಾದುನೋಡಬೇಕಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Mon, 8 May 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ