ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ತಂತ್ರಗಾರಿಕೆಗಳು ಫೇಲ್, ಜೆಡಿಎಸ್ ಭದ್ರಕೋಟೆ ಛಿದ್ರಗೊಳಿಸಿದ ಕಾಂಗ್ರೆಸ್

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದುಕೊಂಡಿದೆ. ಇನ್ನು ಕಾಂಗ್ರೆಸ್‌ನ ಪ್ರಚಂಡ ಬಹುಮತದಲ್ಲಿ ಹಳೇ ಮೈಸೂರಿನ 9 ಜಿಲ್ಲೆಗಳ ಪಾತ್ರ ದೊಡ್ಡದಿದೆ.

ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ತಂತ್ರಗಾರಿಕೆಗಳು ಫೇಲ್, ಜೆಡಿಎಸ್ ಭದ್ರಕೋಟೆ ಛಿದ್ರಗೊಳಿಸಿದ ಕಾಂಗ್ರೆಸ್
Follow us
|

Updated on: May 13, 2023 | 7:18 PM

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್​ ಸ್ಪಷ್ಟ ಬಹುಮತ ಪಡೆದುಕೊಂಡಿದ್ದು, ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ಕಂಪನ, ಕಿತ್ತೂರು ಕರ್ನಾಟಕದಲ್ಲೂ ಕೈಪಡೆಯದ್ದೇ ಅಬ್ಬರ. ಮಧ್ಯ ಕರ್ನಾಟಕ, ಮಲೆನಾಡು, ಹಳೇ ಮೈಸೂರು ಎಲ್ಲೇ ಹೋಗಿ ಇಡೀ ರಾಜ್ಯ ಸಂಪೂರ್ಣ ಕಾಂಗ್ರೆಸ್‌ ಮಯವಾಗಿದೆ. ಕಾಂಗ್ರೆಸ್‌ನ ಈ ದೊಡ್ಡ ಸುನಾಮಿ ನಡುವೆಯೂ ಕರಾವಳಿಯಲ್ಲಿ ಮಾತ್ರ ಕಮಲ ಅರಳಿದೆ. ಮುಖ್ಯವಾಗಿ ಹಳೇ ಮೈಸೂರು ಮೈಸೂರಿನಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆದ್ದರೆ ಮಾತ್ರ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಸರಳವಾಗಲಿದೆ ಎನ್ನುವುದು ಬಿಜೆಪಿಯ ಲೆಕ್ಕಾಚಾರವಾಗಿತ್ತು. 9 ಜಿಲ್ಲೆಗಳನ್ನು ಒಳಗೊಂಡ ಹಳೇ ಮೈಸೂರು ಭಾಗದಲ್ಲಿ 57 ಸ್ಥಾನಗಳ ಪೈಕಿ ಕನಿಷ್ಠ 30 ಕ್ಷೇತ್ರಗಳನ್ನು ಗೆಲ್ಲಬೇಕು ಎಂಬುವುದು ಬಿಜೆಪಿಯ ತಂತ್ರಗಾರಿಕೆಯಾಗಿತ್ತು. ಹಾಗಾಗಿ ಬಿಜೆಪಿ ಹೈಕಮಾಂಡ್​ ಹಳೇ ಮೈಸೂರು ಭಾಗಕ್ಕೆ ಹೆಚ್ಚಿನ ಹೊತ್ತು ಕೊಟ್ಟಿತ್ತು. ಆದ್ರೆ, ಮತದಾರರ ಬಿಜೆಪಿ ಕೈ ಹಿಡಿದಿಲ್ಲ.

ಇದನ್ನೂ ಓದಿ: ಟಿಕೆಟ್ ಸಿಗದೇ ಬಂಡೆದ್ದು ಬೇರೆ-ಬೇರೆ ಪಕ್ಷಕ್ಕೆ ಹೋಗಿದ್ದ ಜಂಪಿಂಗ್ ಸ್ಟಾರ್ಸ್ ಗೆದ್ರಾ? ಸೋತ್ರಾ? ಇಲ್ಲಿದೆ ವಿವರ

ಹಳೇ ಮೈಸೂರಿನಲ್ಲಿ ಪಕ್ಷಗಳ ಸಾಧನೆ

ಕಾಂಗ್ರೆಸ್‌ನ ಪ್ರಚಂಡ ಬಹುಮತದಲ್ಲಿ ಹಳೇ ಮೈಸೂರಿನ 9 ಜಿಲ್ಲೆಗಳ ಪಾತ್ರ ದೊಡ್ಡದಿದೆ. 57 ಕ್ಷೇತ್ರಗಳ ಪೈಕಿ 36 ರಲ್ಲಿ ಕಾಂಗ್ರೆಸ್‌ ಗೆದ್ದಿದೆ. ಅದರಲ್ಲೂ ಸಿದ್ದರಾಮಯ್ಯ ತವರು ಮೈಸೂರಿನಲ್ಲಿ 8, ತುಮಕೂರಲ್ಲಿ 7, ಹಾಗೂ ಮಂಡ್ಯದಲ್ಲಿ 5 ಸೀಟ್‌ ಬಾಚಿಕೊಂಡಿದೆ. ಭದ್ರಕೋಟೆಯಲ್ಲಿ ಜೆಡಿಎಸ್‌ ಗೆದ್ದಿದ್ದು 14 ಕ್ಷೇತ್ರ ಸ್ಥಾನ ಮಾತ್ರ. ಜೆಡಿಎಸ್‌ಗೆ ಹಾಸನದಲ್ಲಿ 4 ಸ್ಥಾನ ಬಂದ್ರೆ, ಕಳೆದ ಬಾರಿ ಕ್ಲೀನ್‌ ಸ್ವೀಪ್‌ ಮಾಡಿದ್ದ ಮಂಡ್ಯದಲ್ಲಿ ಜೆಡಿಎಸ್‌ಗೆ ಸಿಕ್ಕಿದ್ದು 1 ಸ್ಥಾನ ಮಾತ್ರ. ಇನ್ನು ಮೋದಿ ಕರೆಸಿ ಅಬ್ಬರದ ಪ್ರಚಾರ ನಡೆಸಿದ್ದ ಬಿಜೆಪಿಗೆ ಸಿಕ್ಕಿದ್ದು 5 ಸ್ಥಾನ ಮಾತ್ರ.

ಎಷ್ಟೇ ಪ್ರಯತ್ನಗಳು ನಡೆದರೂ ಹೊಸ ಪ್ರಯೋಗಗಳು, ಅನವಶ್ಯಕ ನಡೆಗಳಿಂದ ಮೈಸೂರು ಭಾಗದಲ್ಲಿ ಬಿಜೆಪಿ ನೆಲಕಚ್ಚಿದೆ. ತಿಂಗಳಿಗೆ ಎರಡು-ಮೂರು ಬಾರಿ ರೋಡ್‌ ಶೋ, ಸಮಾವೇಶಗಳ ಮೂಲಕ ಕನ್ನಡಿಗರನ್ನು ಓಲೈಸಲು ಪ್ರಧಾನಿ ನರೇಂದ್ರ ಮೋದಿ ತಂತ್ರಗಳು ತಲೆಕೆಳಗಾಗಿವೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಜೆಪಿ ತನ್ನಲ್ಲಿರುವ ಬಲಶಾಲಿ ಅಭ್ಯರ್ಥಿಗಳನ್ನೇ ಅನೇಕ ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಸಿದ್ದರೂ ಬಿಜೆಪಿಗೆ ಗೆಲ್ಲಲು ಸಾಧ್ಯವಾಗಿಲ್ಲ.

ಹಳೇ ಮೈಸೂರು ಭಾಗವಾಗಿರುವ ಮೈಸೂರು, ಮಂಡ್ಯ ಚಾಮರಾಜನಗರ, ಕೊಡಗು, ಹಾಸನ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು. ಕೋಲಾರ ಜಿಲ್ಲೆಗಳಲ್ಲಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದೆ. ಅದರಲ್ಲೂ ಮುಖ್ಯವಾಗಿ ಡಾ.ಕೆ ಸುಧಾಕರ್​ ನಂತಹ ಘಟಾನುಘಟಿ ನಾಯಕರಿಗೆ ಸೋಲಾಗಿದೆ. ಹಳೇ ಮೈಸೂರಿನ ಒಟ್ಟು 57 ಕ್ಷೇತ್ರಗಳಲ್ಲಿ ಬಿಜೆಪಿ 12, ಕಾಂಗ್ರೆಸ್ 17, ಜೆಡಿಎಸ್ 26, ಇತರರು ಎರಡು ಸ್ಥಾನವನ್ನು (ಮುಳಬಾಗಲು, ಕೊಳ್ಳೇಗಾಲ) ಗೆದ್ದಿದ್ದರು.

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್