AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election Results 2023: ಮತ ಎಣಿಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ? ಇಲ್ಲಿದೆ ವಿವರ

ಮತ ಎಣಿಕೆಯ ಕೊಠಡಿಗಳಲ್ಲಿ ಯಾರೆಲ್ಲ ಇರುತ್ತಾರೆ? ಫಲಿತಾಂಶ ಘೋಷಣೆ ಪ್ರಕ್ರಿಯೆ ಹೇಗಿರುತ್ತದೆ? ಇತ್ಯಾದಿ ವಿಚಾರಗಳ ಕುರಿತಾದ ವಿಸ್ತಾರವಾದ ಮಾಹಿತಿ ಇಲ್ಲಿದೆ.

Karnataka Election Results 2023: ಮತ ಎಣಿಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 11, 2023 | 4:07 PM

Share

ರಾಜ್ಯ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಮತಯಂತ್ರಗಳನ್ನು ಸ್ಟ್ರಾಂಗ್ ರೂಮ್​​ನಲ್ಲಿ ಭದ್ರವಾಗಿ ಇರಿಸಲಾಗಿದೆ. ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಹಲವು ಸುತ್ತುಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು, ಅಂಚೆ ಮತಗಳ ಲೆಕ್ಕ ಹಾಕಲಾಗುತ್ತದೆ. ಕೋಟ್ಯಂತರ ಮತದಾರರನ್ನು ಹೊಂದಿರುವ ಕರ್ನಾಟದಲ್ಲಿಯೂ ಮತ ಎಣಿಕೆ ಎಂಬುದು ಅಷ್ಟು ಸುಲಭವಲ್ಲ. ಇದು ಒಂದು ಸಂಕೀರ್ಣ ಕಾರ್ಯವಿಧಾನವಾಗಿದ್ದು ಅದು ಹೆಚ್ಚಿನ ನಿಖರತೆಯ ಅಗತ್ಯವಿರುತ್ತದೆ. ಮತ ಎಣಿಕೆಯ ಕೊಠಡಿಗಳಲ್ಲಿ ಯಾರೆಲ್ಲ ಇರುತ್ತಾರೆ? ಫಲಿತಾಂಶ ಘೋಷಣೆ ಪ್ರಕ್ರಿಯೆ ಹೇಗಿರುತ್ತದೆ? ಇತ್ಯಾದಿ ವಿಚಾರಗಳ ಕುರಿತಾದ ವಿಸ್ತಾರವಾದ ಮಾಹಿತಿ ಇಲ್ಲಿದೆ.

ಮತ ಎಣಿಕೆಯ ಸ್ಥಳ ಆಯ್ಕೆ ಹೇಗೆ?

  • ವಿಧಾನಸಭಾ ಕ್ಷೇತ್ರದ ನಿರ್ದಿಷ್ಟ ಒಂದು ಸ್ಥಳದಲ್ಲಿ ಮತ ಎಣಿಕೆ ಮಾಡಲಾಗುತ್ತದೆ
  • ಬಹು ವಿಧಾನಸಭಾ ಕ್ಷೇತ್ರಗಳೊಂದಿಗೆ ಸೀಟುಗಳ ಸಂಖ್ಯೆಯೂ ಹೆಚ್ಚಾಗಿದ್ದರೆ, ಮತಗಳ ಸಂಖ್ಯೆಯನ್ನು ಆಧರಿಸಿ ಹೆಚ್ಚಿನ
  • ಎಣಿಕೆ ಕೇಂದ್ರಗಳನ್ನು ನೀಡಲಾಗುತ್ತದೆ
  • ಮತ ಎಣಿಕೆ ಮಾಡುವ ಸ್ಥಳವನ್ನು ರಿಟರ್ನಿಂಗ್ ಆಫೀಸರ್ ಅಥವಾ ಚುನಾವಣಾಧಿಕಾರಿ (RO) ಘೋಷಿಸುತ್ತಾರೆ
  • ಅಸಿಸ್ಟೆಂಟ್ ರಿಟರ್ನಿಂಗ್ ಆಫೀಸರ್ ಅಥವಾ ಸಹಾಯಕ ಚುನಾವಣಾಧಿಕಾರಿ (ARO) ಅವರು ಅನೇಕ ಕೇಂದ್ರಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ

ಮತ ಎಣಿಕೆ ಹೇಗೆ ನಡೆಯುತ್ತದೆ?

  • ಬಹು ಟೇಬಲ್‌ಗಳನ್ನು ಹೊಂದಿರುವ ದೊಡ್ಡ ಸಭಾಂಗಣದಲ್ಲಿ ಮತಗಳನ್ನು ಎಣಿಸಲಾಗುತ್ತದೆ
  • ಜನಸಂದಣಿ ಹೆಚ್ಚಾಗುವ ಅವಕಾಶವಿದ್ದಲ್ಲಿ ಚುನಾವಣಾ ಆಯೋಗ (ಇಸಿ) ಹೆಚ್ಚಿನ ಸಂಖ್ಯೆಯ ಕೊಠಡಿಗಳನ್ನು ಒದಗಿಸುತ್ತದೆ
  • ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ
  • ಹೆಚ್ಚಾಗಿ, ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳನ್ನು ಮತ ಎಣಿಕೆ ಕೇಂದ್ರಗಳಾಗಿ ಬಳಸಲಾಗುತ್ತದೆ

ಹೇಗಿರಲಿದೆ ಎಣಿಕೆ ಪ್ರಕ್ರಿಯೆ?

  • ಚುನಾವಣಾಧಿಕಾರಿ (RO) ಅವರ ಮೇಲ್ವಿಚಾರಣೆಯಲ್ಲಿ ಎಣಿಕೆ ಪ್ರಾರಂಭವಾಗುತ್ತದೆ
  • ಎಣಿಕೆ ಸಿಬ್ಬಂದಿಯನ್ನು ನೇಮಿಸಿದ ನಂತರ ಮೂರು-ಹಂತದ ಎಣಿಕೆ ಪ್ರಕ್ರಿಯೆಯು ಸಾಮಾನ್ಯವಾಗಿ ನಡೆಯುತ್ತವೆ
  • ಚುನಾವಣಾ ಏಜೆಂಟರೊಂದಿಗೆ ಅಭ್ಯರ್ಥಿಗಳಿಗೂ ತಮ್ಮ ಮತ ಎಣಿಕೆ ಏಜೆಂಟರ ಜೊತೆ ಎಣಿಕೆ ಕೇಂದ್ರದಲ್ಲಿರಲು ಅವಕಾಶ ನೀಡಲಾಗುತ್ತದೆ
  • ಮೊದಲ ಹಂತದಲ್ಲಿ ಅಂಚೆಮತಗಳ ಎಣಿಕೆ ಮಾಡಲಾಗುತ್ತದೆ. 30 ನಿಮಿಷಗಳ ನಂತರ ವಿದ್ಯುನ್ಮಾನ ಮತಯಂತ್ರದ ಮತಗಳ ಎಣಿಕೆ ಪ್ರಾರಂಭವಾಗುತ್ತದೆ

ಮತ ಎಣಿಕೆಯ ಸಮಯದ ವಿವರ

  • ಅಧಿಕೃತ ಎಣಿಕೆ ಸಮಯ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗುತ್ತದೆ
  • ಚುನಾವಣಾಧಿಕಾರಿಗಳು ಮತ್ತು ಮತ ಎಣಿಕೆ ಏಜೆಂಟರನ್ನು ರಾಜಕೀಯ ಪಕ್ಷಗಳು ನೇಮಿಸಿದ್ದು, ಅಭ್ಯರ್ಥಿಗಳು ಬೆಳಗ್ಗೆ 5 ಗಂಟೆಯ ಮೊದಲು ಕೇಂದ್ರಗಳನ್ನು ತಲುಪುತ್ತಾರೆ
  • ಬೆಳಿಗ್ಗೆ 6 ಗಂಟೆಯೊಳಗೆ ಎಣಿಕೆ ಟೇಬಲ್‌ಗಳಲ್ಲಿ ತಮ್ಮ ಸ್ಥಾನಗಳನ್ನು ಪಡೆದುಕೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!