ಗಾಂಧಿನಗರದಲ್ಲಿ ಅಲ್ಪ ಮತಗಳಿಂದ ಗೆದ್ದ ದಿನೇಶ್ ಗುಂಡೂರಾವ್: ಮರು ಎಣಿಕೆಗೆ ಮನವಿ
ಬೆಂಗಳೂರಿನ ಗಾಂಧಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಮತ್ತು ಸಪ್ತಗಿರಿ ಗೌಡ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ದಿನೇಶ್ ಗುಂಡುರಾವ್ ಗೆದ್ದಿದ್ದಾರೆ. ಆದ್ರೆ, ಇದೀಗ ಮರು ಎಣಿಕೆಗೆ ಮನವಿ ಮಾಡಲಾಗಿದೆ.
ಬೆಂಗಳೂರು: ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜಧಾನಿ ಬೆಂಗಳೂರಿನ ಹೃದಯ ಭಾಗ ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ದಿನೇಶ್ ಗುಂಡುರಾವ್ ಕೇವಲ 113 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಮತ್ತು ಸಪ್ತಗಿರಿ ಗೌಡ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ದಿನೇಶ್ ಗುಂಡುರಾವ್ ಗೆದ್ದಿದ್ದಾರೆ. ಆದರೆ, ಕಡಿಮೆ ಅಂತರದಲ್ಲಿ ಗೆದ್ದ ಹಿನ್ನಲೆ ಮತ್ತೆ ಮರು ಎಣಿಕೆ ಮಾಡುವಂತೆ ಬಿಜೆಪಿ ಅಭ್ಯರ್ಥಿ ಪ್ತಗಿರಿ ಗೌಡ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಮಕಾಡೆ ಮಲಗಿದ ಬಸವರಾಜ ಬೊಮ್ಮಾಯಿ ಸಂಪುಟದ ಘಟಾನುಘಟಿ ಸಚಿವರುಗಳು!
ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಒಟ್ಟು 53950 ಮತಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಗೌಡ ಅವರು ಒಟ್ಟು 53867 ಮತಗಳನ್ನು ಪಡೆದುಕೊಂಡಿದ್ದಾರೆ. ಇದರೊಂದಿಗೆ ಕಾಂಗ್ರೆಸ್ನ ದಿನೇಶ್ ಗುಂಡೂರಾವ್ ಅವರಿಗೆ ಕೇವಲ 113 ಮತಗಳಿಂದ ಗೆಲುವಾಗಿದೆ. ಬಹಳ ಕಡಿಮೆ ಅಂತರ ಇರುವುದರಿಂದ ಮತ್ತೊಮ್ಮೆ ಮತ ಎಣಿಕೆ ಮಾಡುವಂತೆ ಬಿಜೆಪಿ ಅಭ್ಯರ್ಥಿ ಮನವಿ ಮಾಡಿದ್ದಾರೆ.
ಜಿದ್ದಾಜಿದ್ದಿ ಇದ್ದ ಕ್ಷೇತ್ರ ಗಾಂಧಿನಗರ ಬಿಜೆಪಿಯ ಅಭ್ಯರ್ಥಿಯಾಗಿ ಮಾಜಿ ಸಚಿವ ರಾಮಚಂದ್ರ ಗೌಡ ಅವರ ಪುತ್ರ ಸಪ್ತಗಿರಿ ಗೌಡ ಸ್ಪರ್ಧಿಸಿದ್ರು. ಹಾಗೇ ಜೆಡಿಎಸ್ ಪಕ್ಷದಿಂದ ವಿ. ನಾರಾಯಣಸ್ವಾಮಿ, ಬಿಜೆಪಿ ಟಿಕೆಟ್ ವಂಚಿತ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದರು. ಅಲ್ಲದೆ ಆಮ್ ಆದಿ ಪಾರ್ಟಿಯ ಗೋಪಿನಾಥ್ ಸೇರಿ 15 ಸ್ಪರ್ಧಿಗಳು ಕಣದಲ್ಲಿ ಇದ್ದರು. ಹೀಗಾಗಿ ಭರ್ಜರಿ ಪೈಪೋಟಿ ನಡುವೆ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ 6ನೇ ಬಾರಿ ಗೆಲುವು ಸಾಧಿಸಿದ್ದಾರೆ. ಆದ್ರೆ, ಇದೀಗ ಮರು ಎಣಿಕೆಗೆ ಬಿಜೆಪಿ ಅಭ್ಯರ್ಥಿ ಮನವಿ ಮಾಡಿದ್ದು, ಇದಕ್ಕೆ ಅಧಿಕಾರಿಗಳ ಏನು ನಿರ್ಧಾರ ಮಾಡಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.
Published On - 2:37 pm, Sat, 13 May 23