Ramesh Jarkiholi Profile: ಆಡಳಿತ ವಿರೋಧಿ ಅಲೆಯಲ್ಲೂ ಗೆದ್ದು ಬೀಗಿದ ಬೆಳಗಾವಿ ಸಾಹುಕಾರ ರಮೇಶ್​ ಜಾರಕಿಹೊಳಿ ವ್ಯಕ್ತಿ ಚಿತ್ರ

Ramesh Jarkiholi: ಗೋಕಾಕ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಭಾರಿ ಗೆಲುವು ಸಾಧಿಸಿದ್ದಾರೆ.  ಕರ್ನಾಟಕದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರ ಹಾಗೂ ಜನರು ಕಾತುರದಿಂದ ಫಲಿತಾಂಶದ ನಿರೀಕ್ಷೆಯನ್ನಿಟ್ಟುಕೊಂಡಿರುವ ಕ್ಷೇತ್ರಗಳಲ್ಲಿ ಬೆಳಗಾವಿಯ ಗೋಕಾಕ್ ಕ್ಷೇತ್ರ ಕೂಡ ಒಂದಾಗಿತ್ತು.

Ramesh Jarkiholi Profile: ಆಡಳಿತ ವಿರೋಧಿ ಅಲೆಯಲ್ಲೂ ಗೆದ್ದು ಬೀಗಿದ  ಬೆಳಗಾವಿ ಸಾಹುಕಾರ ರಮೇಶ್​ ಜಾರಕಿಹೊಳಿ ವ್ಯಕ್ತಿ ಚಿತ್ರ
ರಮೇಶ್ ಜಾರಕಿಹೊಳಿ
Follow us
ನಯನಾ ರಾಜೀವ್
|

Updated on: May 13, 2023 | 1:11 PM

ಗೋಕಾಕ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ.  ಕರ್ನಾಟಕದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರ ಹಾಗೂ ಜನರು ಕಾತುರದಿಂದ ಫಲಿತಾಂಶದ ನಿರೀಕ್ಷೆಯನ್ನಿಟ್ಟುಕೊಂಡಿರುವ ಕ್ಷೇತ್ರಗಳಲ್ಲಿ ಬೆಳಗಾವಿಯ ಗೋಕಾಕ್ ಕ್ಷೇತ್ರ ಕೂಡ ಒಂದಾಗಿತ್ತು. ಈ ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬದ ಪ್ರಭಾವವೇ ಹೆಚ್ಚಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ರಮೇಶ್‌ ಜಾರಕಿಹೊಳಿ ಈ ಬಾರಿಯೂ ಗೆಲುವು ಸಾಧಿಸುವ ನಿಟ್ಟಿನಲ್ಲಿ ವ್ಯಾಪಕ ಪ್ರಯತ್ನ ನಡೆಸಿದ್ದರು.

ಜಾರಕಿಹೊಳಿ ಅವರು ಕರ್ನಾಟಕ ವಿಧಾನಸಭೆಯ ಆರು ಬಾರಿ ಸದಸ್ಯರಾಗಿದ್ದಾರೆ. ಜೂನ್ 2016 ರಲ್ಲಿ, ಅವರು ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರಕ್ಕೆ ಕ್ಯಾಬಿನೆಟ್ ಸಚಿವರಾಗಿ ಸೇರ್ಪಡೆಗೊಂಡರು. ಅವರು ಸಣ್ಣ ಪ್ರಮಾಣದ ಕೈಗಾರಿಕೆಗಳ ಸಚಿವಾಲಯದ ಬಂಡವಾಳವನ್ನು ಹೊಂದಿದ್ದರು. 2019 ರಲ್ಲಿ ಪಕ್ಷಾಂತರ ವಿರೋಧಿ ಕಾನೂನಿನ ಪ್ರಕಾರ ಅವರನ್ನು ವಿಧಾನಸಭೆಯಿಂದ ಅನರ್ಹಗೊಳಿಸಲಾಯಿತು, ಆದರೆ ಡಿಸೆಂಬರ್ 2019 ರಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ವಿಧಾನಸಭೆಗೆ ಮರು ಆಯ್ಕೆಯಾದರು

1985ರಿಂದಲೂ ರಾಜಕಾರಣದಲ್ಲಿರುವ ರಮೇಶ್‌ ಜಾರಕಿಹೊಳಿ ಇದುವರೆಗೂ 7 ಬಾರಿ ಚುನಾವಣೆ ಎದುರಿಸಿದ್ದು, ಈಗ ಎಂಟನೇ ಬಾರಿ ಚುನಾವಣೆ ಎದುರಿಸಲು ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಮೊದಲ ಚುನಾವಣೆಯಲ್ಲಿ ಕೇವಲ 4000 ಮತಗಳ ಅಂತರದಿಂದ ಸೋತಿದ್ದ ರಮೇಶ್ ಜಾರಕಿಹೊಳಿ, 1989 ಹಾಗೂ 1994ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದಿಲ್ಲ.

ಆದರೆ, 1999ರಲ್ಲಿ ಗೋಕಾಕ್‌ನಿಂದ ಮತ್ತೆ ಸ್ಪರ್ಧಿಸಲು ಶುರು ಮಾಡಿದ ರಮೇಶ್‌ ಜಾರಕಿಹೊಳಿ ಇದುವರೆಗೂ ಗೋಕಾಕ್‌ನಲ್ಲಿ ಸೋಲು ಕಂಡಿಲ್ಲ. ಉಪಚುನಾವಣೆ ಸೇರಿ ಇದುವರೆಗೂ 6 ಚುನಾವಣೆಯಲ್ಲಿ ರಮೇಶ್‌ ಜಾರಿಹೊಳಿ ಗೆಲುವು ಕಂಡಿದ್ದಾರೆ. ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ 2,38,221 ಮತದಾರರಿದ್ದು, ಈ ಪೈಕಿ 1,16,816 ಪುರುಷ, 1,20,085 ಮಹಿಳಾ ಮತದಾರರಿದ್ದಾರೆ.

ಹಾಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್‌ನ ಮಹಾಂತೇಶ ಕಡಾಡಿ ವಿರುದ್ಧ ಕಣಕ್ಕಿಳಿದಿದ್ದಾರೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆಲುವು ಕಂಡಿದ್ದ ರಮೇಶ್‌ ಜಾರಕಿಹೊಳಿ 2019ರಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಬಂದಿದ್ದರು.

ಈ ಮೂಲಕ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾಗಿದ್ದರು. 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಮೇಶ್‌ ಜಾರಕಿಹೊಳಿ ಗೆಲುವು ಸಾಧಿಸಿದ್ದರು. ಈಗ ಎರಡನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾ ಆಖಾಡ ಪ್ರವೇಶಿಸಿದ್ದಾರೆ.

2018 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿ ಅಶೋಕ್ ನಿಂಗಯ್ಯಸ್ವಾಮಿ ಪೂಜಾರಿ ಮತ್ತು ಜೆಡಿಎಸ್‌ನ ಕರೆಪ್ಪ ಲಕ್ಕಪ್ಪ ತಳವಾರ ಅವರ ವಿರುದ್ಧ ಗೆದ್ದು ಭೀಗಿದ್ದರು.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ