ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ವಿರುದ್ಧ ಕಣಕ್ಕಿಳಿದು ಗೆದ್ದು ಬೀಗಿದ್ದಾರೆ. ಇದನ್ನು ‘ಗುರು-ಶಿಷ್ಯ’ ಸ್ಪರ್ಧೆ ಎಂದು ಪರಿಗಣಿಸಲಾಗಿತ್ತು. ಶೆಟ್ಟರ್ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ತಮ್ಮ ಸಾಂಪ್ರದಾಯಿಕ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಅವರನ್ನು ಸೋಲಿಸಲು ಮತ್ತು ಸಂಘಟನೆಯೇ ಸರ್ವೋಚ್ಚ ಎಂಬ ಸಂದೇಶವನ್ನು ರವಾನಿಸಲು ಬಿಜೆಪಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲಿ ಶೆಟ್ಟರ್ ಒಬ್ಬರು. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಜತೆಗಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದ್ದು, ಸುದೀರ್ಘ ಕಾಲ ಬಿಜೆಪಿಯಲ್ಲಿದ್ದ ಅವರು ಪಕ್ಷ ತ್ಯಜಿಸಿದ್ದರು.
2018 ರಲ್ಲಿ ಅವರು ಕಲಘಟಗಿಯಿಂದ ಟಿಕೆಟ್ ಪಡೆದು ನಾಮಪತ್ರ ಸಲ್ಲಿಸಿದ ನಂತರ ಪಕ್ಷವು ಹಿಂತೆಗೆದುಕೊಳ್ಳುವಂತೆ ಹೇಳಿತು, ಆಗ ನಾನು ಯಾವುದೇ ಮುಜುಗರವಿಲ್ಲದೇ ವಾಪಸ್ ತೆಗೆದುಕೊಂಡೆ ಎಂದು ಹೇಳಿದ್ದರು.
ಜಗದೀಶ್ ಶೆಟ್ಟರ್ 1994ರಿಂದಲೂ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಶಾಸಕ, ಮಂತ್ರಿ, ಮುಖ್ಯಮಂತ್ರಿ ಹುದ್ದೇಗೇರಿದವರು ಜಗದೀಶ್ ಶೆಟ್ಟರ್. ಟಿಕೆಟ್ ನೀಡದ ಒಂದೇ ಕಾರಣಕ್ಕಾಗಿ ಬಿಜೆಪಿ ಜೊತೆಗಿನ ದೀರ್ಘಕಾಲದ ಸಂಬಂಧ ಮುರಿದುಕೊಂಡು ಕಾಂಗ್ರೆಸ್ ಸೇರಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಜಗದೀಶ್ ಶೆಟ್ಟರ್ ಅವರು ಹಲವು ದಶಕಗಳ ಕಾಲದ ಬಿಜೆಪಿ ಜೊತೆಗಿನ ಸಂಬಂಧವನ್ನು ಕಳೆದುಕೊಂದು ಕಾಂಗ್ರೆಸ್ ಸೇರಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಇನ್ನು ಮಹಾಂತ ಒಡೆಯರ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:40 pm, Sat, 13 May 23