DK Shivakumar Profile: ಕನಕಪುರದಲ್ಲಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ ಡಿಕೆ ಶಿವಕುಮಾರ್ ವ್ಯಕ್ತಿಚಿತ್ರ

|

Updated on: May 13, 2023 | 4:10 PM

DK Shivakumar: ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ರಣತಂತ್ರ ರೂಪಿಸಿದರೂ ಯಾವುದೇ ಪ್ರಯೋಜನವಾಗಿಲ್ಲ, ಡಿಕೆ ಶಿವಕುಮಾರ್ ಆರ್ ಅಶೋಕ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

DK Shivakumar Profile: ಕನಕಪುರದಲ್ಲಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ ಡಿಕೆ ಶಿವಕುಮಾರ್ ವ್ಯಕ್ತಿಚಿತ್ರ
ಡಿಕೆ ಶಿವಕುಮಾರ್
Follow us on

ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ರಣತಂತ್ರ ರೂಪಿಸಿದರೂ ಯಾವುದೇ ಪ್ರಯೋಜನವಾಗಿಲ್ಲ, ಡಿಕೆ ಶಿವಕುಮಾರ್ ಆರ್ ಅಶೋಕ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಅಶೋಕ್ ಮುಂದಾಳತ್ವದಲ್ಲೇ ಕನಕಪುರ ಕೋಟೆ ಗೆಲ್ಲಲು ಬಿಜೆಪಿ ಸಿದ್ಧವಾಗಿತ್ತು. ಹೀಗಾಗಿ 2023ರ ಚುನಾವಣೆಯಲ್ಲಿ ದೆಹಲಿಯಲ್ಲೇ ಕನಕಪುರ ರಾಜಕೀಯ ಲೆಕ್ಕಾಚಾರ ಹಾಕಲಾಗಿತ್ತು.

ಮೇ 10ರಂದು ನಡೆದ ಮತದಾನದ ದಿನ ರಾಜ್ಯದ 37,777 ಪ್ರದೇಶದಲ್ಲಿ ಹಾಕಲಾಗಿದ್ದ 58,545 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ರಾಜ್ಯದ 224 ಕ್ಷೇತ್ರಗಳ ಮತ ಯಂತ್ರಗಳನ್ನು ಚುನಾವಣಾ ಸಿಬ್ಬಂದಿ ಭದ್ರವಾಗಿ ಇಟ್ಟಿದ್ದು, ಸ್ಟ್ರಾಂಗ್‌ ರೂಂಗಳಲ್ಲಿ ಮೂರನೇ ಹಂತದ ಭದ್ರತೆಯನ್ನು ಮಂತ ಯಂತ್ರಗಳಿಗೆ ಒದಗಿಸಲಾಗಿದೆ. 224 ಕ್ಷೇತ್ರಗಳ ಮತ ಎಣಿಕೆ ಕಾರ್ಯ 36 ಕೇಂದ್ರಗಳಲ್ಲಿ ಏಕಕಾಲದಲ್ಲಿ ನಡೆಯಲಿದ್ದು, ಸಾವಿರಾರು ಸಿಬ್ಬಂದಿ ಚುನಾವಣಾ ಎಣಿಕೆ ವೇಳೆ ಕಾರ್ಯ ನಿರ್ವಹಿಸಿದ್ದರು.

ಮೇ 10ರಂದು ರಾಮನಗರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿತ್ತು. ಈ ಪೈಕಿ ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ಮತದಾನ ನಡೆದಿತ್ತು.

ಕನಕಪುರ ಕ್ಷೇತ್ರದಲ್ಲಿ ಚುನಾವಣೆಗೆ ನಿಂತಿದ್ದ ಆರ್ ಅಶೋಕ್ ವಿರುದ್ಧ ಡಿಕೆ ಶಿವಕುಮಾರ್ ಅವರು ಬರೋಬ್ಬರಿ 1 ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದು, ಆ ಮೂಲಕ ಡಿಕೆಶಿ ವಿರುದ್ಧ ತೊಡೆ ತಟ್ಟಿದ್ದ ಬಿಜೆಪಿ ಹೈಕಮಾಂಡ್‌ಗೆ ಕನಕಪುರ ಕ್ಷೇತ್ರದ ಜನರೇ ಆ ಕಡೆ ತಲೆಯೂ ಹಾಕದಂತೆ ಸೋಲಿನ ರುಚಿ ತೋರಿಸಿದ್ದಾರೆ.

ಒಟ್ಟು 2,20,391 ಮತದಾರರನ್ನು ಹೊಂದಿರುವ ಕನಕಪುರ ಕ್ಷೇತ್ರದಲ್ಲಿ 1,09, 876 ಪುರುಷರು, 1,10,500 ಮಹಿಳಾ ಮತದಾರದ್ದರೆ, ಜಾತಿ ಲೆಕ್ಕಾಚಾರದಲ್ಲಿ ಒಕ್ಕಲಿಗರ 99,567 ವೋಟ್ ಇಲ್ಲಿದೆ. ದಲಿತ ಸಮುದಾಯದ 44 ಸಾವಿರ ಮತಗಳು, ಮುಸ್ಲಿಮರ 22,500, ಲಿಂಗಾಯತರ 18,500 ಮತಗಳು ಇವೆ. ಇನ್ನುಳಿದಂತೆ ಕುರುಬರು 5,600, ತಿಗಳರು 10,500, ಕ್ರೈಸ್ತರು 2,507, ಬೆಸ್ತರು 6000 ಹಾಗೂ ಇತರೆ ಸಮುದಾಯದ 9400 ಮತದಾರರಿದ್ದಾರೆ.

 

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ