ಅಶೋಕ್ ರೈ ಪುತ್ತೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದಾಗ ಅಶೋಕ್ ರೈ ಹೆಸರು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿತ್ತು. ಅರುಣ್ ಕುಮಾರ್ ಪುತ್ತಿಲ ಪುತ್ತೂರಿನಲ್ಲಿ ಪಕ್ಷೇತರನಾಗಿ ನಿಂತು ಸೋಲು ಅನುಭವಿಸಿದ್ದಾರೆ . ನಾಮಪತ್ರ ಹಿಂದಕ್ಕೆ ಪಡೆಯುವಂತೆ ಬಹಳಷ್ಟು ಒತ್ತಡವಿದ್ದರೂ, ಪುತ್ತಿಲ ಕಣದಿಂದ ಹಿಂದಕ್ಕೆ ಸರಿದಿರಲಿಲ್ಲ. ಪುತ್ತಿಲ ಅವರ ಸ್ಪರ್ಧೆಗೆ ಹಿಂದೂ ಸಂಘಟನೆಗಳ ವ್ಯಾಪಕ ಬೆಂಬಲವಾಗಿತ್ತು. ಬಿಜೆಪಿ ಮತಗಳನ್ನು ಪುತ್ತಿಲ ಒಡೆಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು.
ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರರಾಗಿ ಸ್ಪರ್ಧಿಸಿದ್ದರೂ, ಬಿಜೆಪಿಯ ಸ್ಟಾರ್ ಪ್ರಚಾರಕರ ಹೆಸರನ್ನು ಕಾನೂನು ಬಾಹಿರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಚುನಾವಣಾ ಏಜೆಂಟ್ ದೂರು ಕೊಟ್ಟಿದ್ದರು.
ಪುತ್ತೂರು ಕ್ಷೇತ್ರದಲ್ಲಿ ಒಟ್ಟು ಶೇ. 79.91 ಮತದಾನವಾಗಿತ್ತು. ಮೂಲ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರಾದ ಅರುಣ್ ಕುಮಾರ್ ಪುತ್ತಿಲ ಅವರು ಕಮಲದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಂಡಾಯ ಎದ್ದು ಪಕ್ಷೇತರರಾಗಿ ಸ್ಪರ್ಧಿಸಿದ್ದರು.
ಆಶಾ ತಿಮ್ಮಪ್ಪ ಗೌಡಯ್ಯ ಅವರು ಕಡಬ ತಾಲೂಕಿನ ಕುಂತೂರು ಗ್ರಾಮದವರು , ಈ ಹಿಂದೆ ಬೆಳ್ಳಾರೆ ಮತ್ತು ನೆಲ್ಯಾಡಿ ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಆಯ್ಕೆಯಾಗಿದ್ದರು, ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸಿದ್ದಾರೆ.
2018ರ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿದ್ದ ಸಂಜೀವ ಮಠಂದೂರು ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಶಕುಂತಲಾ ಶೆಟ್ಟಿ ವಿರುದ್ದ 19,477 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದರು. ಈ ಬಾರಿ ಮಠಂದೂರು ಮತ್ತು ಶಕುಂತಲಾ ಶೆಟ್ಟಿ ಇಬ್ಬರೂ ಆಯಾಯ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದರು.
ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:52 pm, Sat, 13 May 23