Iqbal Hussain Profile: ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಜಯ ಗಳಿಸಿದ ಇಕ್ಬಾಲ್ ಹುಸೇನ್ ವ್ಯಕ್ತಿಚಿತ್ರ

Iqbal Hussain: ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಭರ್ಜರಿ ಜಯ ಸಾಧಿಸಿದ್ದಾರೆ. ಇಕ್ಬಾಲ್ ಒಟ್ಟು 87,690 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 76,975 ಮತಗಳನ್ನು ಗಳಿಸಿ ನಿರಾಸೆ ಅನುಭವಿಸಿದ್ದಾರೆ.

Iqbal Hussain Profile: ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಜಯ ಗಳಿಸಿದ ಇಕ್ಬಾಲ್ ಹುಸೇನ್ ವ್ಯಕ್ತಿಚಿತ್ರ
ಇಕ್ಬಾಲ್ ಹುಸೇನ್Image Credit source: Oneindia
Follow us
ನಯನಾ ರಾಜೀವ್
|

Updated on: May 13, 2023 | 3:02 PM

ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಭರ್ಜರಿ ಜಯ ಸಾಧಿಸಿದ್ದಾರೆ. ಇಕ್ಬಾಲ್ ಒಟ್ಟು 87,690 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 76,975 ಮತಗಳನ್ನು ಗಳಿಸಿ ನಿರಾಸೆ ಅನುಭವಿಸಿದ್ದಾರೆ.

ರಾಮನಗರದ ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ ಬಿದ್ದಿವೆ. ರಾಮನಗರ ಜಿಲ್ಲೆಯಲ್ಲಿ ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳಿವೆ. ಅವುಗಳೆಂದರೆ ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ. ಈ ಕ್ಷೇತ್ರಗಳಲ್ಲಿ ಬಿಜೆಪಿ ಅಷ್ಟು ಪ್ರಬಲವಾಗಿಲ್ಲ. ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿತ್ತು. ರಾಮನಗರವನ್ನು ಸಾಮಾನ್ಯವಾಗಿ ಜೆ‌ಡಿ‌ಎಸ್ ಭದ್ರಕೋಟೆ ಎಂತಲೇ ಬಿಂಬಿಸಲಾಗುತ್ತದೆ. ಇದೀಗ ನಾಲ್ಕರಲ್ಲಿ ಮೂರು ಕ್ಷೇತ್ರಗಳನ್ನು ವಶಪಡಿಸಿಕೊಂಡಿರುವ ಕಾಂಗ್ರೆಸ್ ಜೆಡಿಎಸ್ ಭದ್ರಕೋಟೆಯನ್ನು ಛಿದ್ರಗೊಳಿಸಿದೆ.

ರಾಮನಗರ ಜಿಲ್ಲೆಯಲ್ಲಿ ಬರುವ ಮಾಗಡಿ ವಿಧಾನಸಭಾ ಕ್ಷೇತ್ರವು ಕುಟುಂಬ ರಾಜಕಾರಣಕ್ಕೆ ನೆಲೆ ಒದಗಿಸಿದ ಕ್ಷೇತ್ರ ಎಂತಲೂ ಹೇಳಬಹುದು. ಇದೇ ಜಿಲ್ಲೆಯಲ್ಲಿ ಬರುವ ರಾಮನಗರ ವಿಧಾನಸಭಾ ಕ್ಷೇತ್ರ 1994ರಿಂದಲೂ ಜೆ‌ಡಿ‌ಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಎಚ್. ಡಿ. ದೇವೇಗೌಡರ ಕುಟುಂಬದ ಭದ್ರಕೋಟೆ ಆಗಿದ್ದು ಇದನ್ನು ಬೇದಿಸುವವರೇ ಇಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ (ರಾಮನಗರ ಹಾಗೂ ಚನ್ನಪಟ್ಟಣ) ಸ್ಪರ್ಧಿಸಿದ್ದ ದೇವೇಗೌಡರ ಪುತ್ರ ಎಚ್. ಡಿ. ಕುಮಾರಸ್ವಾಮಿ ಎರಡೂ ಕ್ಷೇತ್ರಗಳಲ್ಲಿ ವಿಜಯಶಾಲಿ ಆಗಿದ್ದರೂ. ಬಳಿಕ ರಾಮನಗರ ಕ್ಷೇತ್ರದಲ್ಲಿ ರಾಜೀನಾಮೆ ನೀಡಿ ಇದೇ ಕ್ಷೇತ್ರದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ನಿಲ್ಲಿಸಿ ಮತ್ತೆ ಗೆದ್ದಿದ್ದರು.

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಎ. ಇಕ್ಬಾಲ್ ಹುಸೇನ್, ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರಿಂದಾಗಿ ಎಚ್‌ಡಿ‌ಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಭಾರೀ ಮುಖಭಂಗ ಅನುಭವಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರ ಹಲವು ಕಾರಣಗಳಿಗೆ ಸುದ್ದಿಯಾಗುತ್ತಿದೆ. ಹಾಲಿ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದರು.

2019ರ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸಿ ಗೆಲುವು ಸವಿಯುವ ನಿರೀಕ್ಷೆಯಲ್ಲಿದ್ದಾರೆ. ಈ ಹಿಂದೆ ರಾಮನಗರದಿಂದ ಸ್ಪರ್ಧಿಸಿ ನಿಖಿಲ್ ತಂದೆ ಎಚ್.ಡಿ ಕುಮಾರಸ್ವಾಮಿ ಮತ್ತು ತಾತ ಎಚ್‌ಡಿ ದೇವೇಗೌಡರು ಗೆದ್ದು ಮುಖ್ಯಮಂತ್ರಿಯಾಗಿದ್ದರು.

ರಾಮನಗರದಿಂದ ನಿಖಿಲ್ ಕಣಕ್ಕಿಳಿಯುವುದು ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ನಿಂದ ಸಂಸದ ಡಿ.ಕೆ ಸುರೇಶ್ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು, ಆದರೆ ಈ ಎಲ್ಲಾ ಊಹಾ ಪೋಹಗಳಿಗೆ ತೆರೆ ಬಿದ್ದಿದ್ದು, ಕಾಂಗ್ರೆಸ್ ಚುನಾವಣಾ ಸಮಿತಿ ಇಕ್ಬಾಲ್ ಹುಸೇನ್ ಅವರ ಹೆಸರನ್ನು ಅಂತಿಮಗೊಳಿಸಿತ್ತು.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ