Basavaraj Bommai Profile: ಶಿಗ್ಗಾಂವಿಯಲ್ಲಿ ಗೆಲುವು ಸಾಧಿಸಿದ ಬಸವರಾಜ ಬೊಮ್ಮಾಯಿ ವ್ಯಕ್ತಿಚಿತ್ರ
Basavaraj Bommai: ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ, ಹಾವೇರಿ ಜಿಲ್ಲೆಯ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ನೀಡಿತ್ತು.
ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ, ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ನೀಡಿತ್ತು. ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅರ್ಧಕ್ಕರ್ಧ ಮಂದಿ ಸೋಲು ಕಂಡಿದ್ದಾರೆ, ಇದೇ ಹೊತ್ತಿನಲ್ಲಿ ಬಸವರಾಜ್ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಿದರೂ, ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ವಿರುದ್ಧ 19,000 ಮತಗಳ ಅಂತರದಿಂದ ಜಯ ದಾಖಲಿಸಿದ್ದಾರೆ.
224 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆದಿದ್ದು, ಇಂದು ಮೇ 13 ರಂದು ಫಲಿತಾಂಶ ಪ್ರಕಟವಾಗಿದೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಸತತ ನಾಲ್ಕನೇ ಬಾರಿಗೆ ಬಸವರಾಜ ಬೊಮ್ಮಾಯಿ ಗೆಲುವಿನ ನಗೆ ಬೀರಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ 63,384 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಯಾಸೀರ್ ಖಾನ್ ಪಠಾಣ್ 44,394 ಮತಗಳನ್ನು ಪಡೆದಿದ್ದಾರೆ.
2013 ರಲ್ಲಿ 9,503 ಮತಗಳ ಅಂತರದಿಂದ ಸಿಎಂ ಬೊಮ್ಮಾಯಿ ಯಶಸ್ವಿಯಾಗಿ ಆಯ್ಕೆಯಾದರು ಮತ್ತು 2018 ರ ವಿಧಾನಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಖಾದ್ರಿ ವಿರುದ್ಧ 9,265 ಮತಗಳಿಂದ ಗೆದ್ದಿದ್ದರು.
ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ