Siddaramaiah Profile: ವರುಣಾದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಸಿದ್ದರಾಮಯ್ಯ ಅವರ ವ್ಯಕ್ತಿಚಿತ್ರ
Siddaramaiah: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ಮತ ಎಣಿಕೆ ಮುಗಿದಿದ್ದು ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ಮತ ಎಣಿಕೆ ಮುಗಿದಿದ್ದು ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ. ಅವರ ವಿರುದ್ಧ ಬಿಜೆಪಿಯ ವಿ ಸೋಮಣ್ಣ ಹಿನ್ನೆಡೆ ಅನುಭವಿಸಿದ್ದಾರೆ. ರಾಜ್ಯದ ಪ್ರಮುಖ ವಿಧಾನಸಭಾ ಕ್ಷೇತ್ರವಾಗಿದ್ದ ವರುಣಾದಲ್ಲಿ ಸಿದ್ದರಾಮಯ್ಯ ಅವರ ಸ್ಪರ್ಧೆಯಿಂದ ರಾಜ್ಯದ ಗಮನ ಸೆಳೆದಿತ್ತು. ಕಳೆದ ಬಾರಿ ವರುಣಾದಿಂದ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. 2008 ಹಾಗೂ 2013ರಲ್ಲಿ ವರುಣಾದಲ್ಲಿ ಎರಡು ಬಾರಿ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು.
ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ಏನು ಬೇಕಾದರೂ ಮಾಡುತ್ತೇವೆ.ಕರ್ನಾಟಕದ ಹಿತದೃಷ್ಟಿಯಿಂದ ನನ್ನ ತಂದೆ ಸಿಎಂ ಆಗಬೇಕು ಎಂದು ಹೇಳಿದ್ದರು.
ವರುಣಾ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ವಿ.ಸೋಮಣ್ಣನವರಿಗೆ ಎರಡು ಕ್ಷೇತ್ರದಲ್ಲೂ ಮುಖಭಂಗವಾಗಿದೆ. ಎರಡರಲ್ಲೂ ಹಿನ್ನಡೆ ಅನುಭವಿಸಿದ್ದಾರೆ. ಲಿಂಗಾಯತ ಮತದಾರರು ಹೆಚ್ಚಿದ್ದಾರೆಂಬ ಕಾರಣಕ್ಕೆ ಎರಡು ಕ್ಷೇತ್ರಗಳಲ್ಲಿ ಸೋಮಣ್ಣನವರನ್ನು ಬಿಜೆಪಿ ಕಣಕ್ಕಿಳಿಸಿತ್ತು. ಆದರೆ ಜಾತಿ ಲೆಕ್ಕಾಚಾರಗಳು ತಲೆಕೆಳಗಾಗಿದ್ದು ಸಿದ್ದರಾಮಯ್ಯನವರು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳನ್ನು ವರುಣಾ ಮತದಾರರು ಗುರುತಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಪ್ರಭಾವಿ ನಾಯಕರಾಗಿ ಬೆಳೆದಿರುವ ಸಿದ್ದರಾಮಯ್ಯನವರನ್ನು ವರುಣಾ ಜನತೆ ಈವರೆಗೆ ಕೈಬಿಟ್ಟಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯಷ್ಟೇ ಇಲ್ಲಿ ಸದಾ ಸ್ಪರ್ಧೆ ಏರ್ಪಡುತ್ತಾ ಬಂದಿದೆ. ಜೆಡಿಎಸ್ ಪಕ್ಷ ಇಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ. 2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿಗೆ ಹಾರಿದ್ದ ಎಲ್.ರೇವಣ್ಣಸಿದ್ದಯ್ಯ ಅವರು ಸಿದ್ದರಾಮಯ್ಯನವರ ಪ್ರತಿಸ್ಪರ್ಧಿಯಾಗಿದ್ದರು.
ಆಡಳಿತ ವರ್ಗದ ಹಿನ್ನೆಲೆಯ ಎಲ್.ರೇವಣ್ಣ ಸಿದ್ದಯ್ಯನವರನ್ನು ಕ್ಷೇತ್ರದ ಜನತೆ ಕೈಹಿಡಿಯಲಿಲ್ಲ. 18,837 ಮತದಂತರದಲ್ಲಿ ಸಿದ್ದರಾಮಯ್ಯ (71,908) ಗೆದ್ದರು. 2013ರ ಚುನಾವಣೆಯ ವೇಳೆಗೆ ಬಿಜೆಪಿ ಒಡೆದುಹೋಗಿತ್ತು.
ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ