ಚುನಾವಣಾ ಫಲಿತಾಂಶದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀ? ಇಲ್ಲಿದೆ ನೋಡಿ

|

Updated on: May 12, 2023 | 3:31 PM

ಎರಡು ತಿಂಗಳ ಹಿಂದೆ ರಾಜ್ಯದ ರಾಜಕೀಯ ಭವಿಷ್ಯದ ಬಗ್ಗೆ ಕೋಡಿಮಠ ಶ್ರೀ ಶಿವಾನಂದ ಸ್ವಾಮೀಜಿಗಳು ನೀಡಿದ್ದ ಹೇಳಿಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ.

ಚುನಾವಣಾ ಫಲಿತಾಂಶದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀ? ಇಲ್ಲಿದೆ ನೋಡಿ
ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಜಿ
Follow us on

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಕ್ಷಣಕ್ಷಣಕ್ಕೂ ಕುತೂಹಲ ಹೆಚ್ಚಾಗುತ್ತಿದೆ. ಎಕ್ಸಿಟ್​​ಪೋಲ್​​ಗಳು ವಿವಿಧ ರೀತಿಯ ವರದಿ ನೀಡಿರುವ ಹಿನ್ನೆಲೆಯಲ್ಲಿ ಕಿತೂಹಲ ಹೆಚ್ಚಾಗಿದೆ. ಈ ಮಧ್ಯೆ, ಎರಡು ತಿಂಗಳ ಹಿಂದೆ ರಾಜ್ಯದ ರಾಜಕೀಯ ಭವಿಷ್ಯದ ಬಗ್ಗೆ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಜಿ ನೀಡಿದ್ದ ಹೇಳಿಕೆ (Kodi Mutt Seer Ppredictions) ಈಗ ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಸಮ್ಮಿಶ್ರ ಸರ್ಕಾರ ಅಧಿಕಾರ‌ ಮಾಡಲ್ಲ ಎಂದು ಜನವರಿಯಲ್ಲಿ ಶ್ರೀಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು. ಜತೆಗೆ, ಎರಡ್ಮೂರು ದೊಡ್ಡ ದೊಡ್ಡ ತಲೆಗಳು ಉರುಳುತ್ತವೆ ಎಂದೂ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭವಿಷ್ಯ ನುಡಿದಿದ್ದರು.

ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಚುನಾವಣೆವರೆಗೂ ಪಕ್ಷಾಂತರಗಳು ಇರುತ್ತವೆ. ಪಕ್ಷಗಳು ಕೂಡಿ ಹೋಗುವುದು ಕಷ್ಟ. ಚುನಾವಣೆವರೆಗೂ ಏನು ಹೇಳುವುದಕ್ಕೆ ಆಗುವುದಿಲ್ಲ. ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ‌‌‌. ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಫೆಬ್ರುವರಿಯಲ್ಲಿ ಕೋಡಿಮಠ ಶ್ರೀ ಹೇಳಿದ್ದರು.

ರಾಜಕೀಯ ಬೆಳವಣಿಗೆಗಳ ಬಗ್ಗೆ ಭವಿಷ್ಯ ನುಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೂ ಪ್ರತಿಕ್ರಿಯಿಸಿದ್ದರು. ಅವರು ಏನು ಪ್ರತಿಕ್ರಿಯೆ ನೀಡಿದ್ದರು ಎಂಬ ಮಾಹಿತಿ ಈ ಕೆಳಗಿನ ವಿಡಿಯೋದಲ್ಲಿದೆ ನೋಡಿ.

ಇದನ್ನೂ ಓದಿ: ಪಕ್ಷಾಂತರಗಳು ಇರುತ್ತವೆ, ರಾಜಕೀಯ ಪಕ್ಷಗಳು ಒಡೆಯುತ್ತವೆ, ಆದ್ರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ: ಕೋಡಿಶ್ರೀ ಮತ್ತೊಂದು ಭವಿಷ್ಯ

ಇದೀಗ ರಾಜ್ಯದಲ್ಲಿ ಚುನಾವಣಾ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿರುವ ಸಂದರ್ಭದಲ್ಲಿ ಕೋಡಿಮಠ ಶ್ರೀಗಳ ಹೇಳಿಕೆ ಮತ್ತೆ ಪ್ರಾಮುಖ್ಯತೆ ಪಡೆದಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Fri, 12 May 23