Karnataka Assembly Election: ವೋಟಿಂಗ್ ಆರಂಭದಲ್ಲೇ ರಾಜ್ಯದ ಹಲವೆಡೆ ಗಲಾಟೆ; ಎಲ್ಲೆಲ್ಲಿ?

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಇಂದು ಅದ್ದೂರಿಯಾಗಿ ನಡೆಯುತ್ತದೆ. ಎಲ್ಲರೂ ಉತ್ಸಾಹದಿಂದ ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದಾರೆ. ಈ ಮಧ್ಯೆ ರಾಜ್ಯದ ಕೆಲವು ಮತಗಟ್ಟೆಗಳಲ್ಲಿ ಗಲಾಟೆಗಳು ನಡೆದಿವೆ. ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.

Karnataka Assembly Election: ವೋಟಿಂಗ್ ಆರಂಭದಲ್ಲೇ ರಾಜ್ಯದ ಹಲವೆಡೆ ಗಲಾಟೆ; ಎಲ್ಲೆಲ್ಲಿ?
ಪ್ರಾತಿನಿಧಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 10, 2023 | 10:07 AM

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election) ಮತದಾನ ಪ್ರಕ್ರಿಯೆ ಇಂದು ಅದ್ದೂರಿಯಾಗಿ ನಡೆಯುತ್ತದೆ. ಎಲ್ಲರೂ ಉತ್ಸಾಹದಿಂದ ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದಾರೆ. ಈ ಮಧ್ಯೆ ಹೆಬ್ಬಾಳ, ಆರ್ ಟಿ ನಗರ ಜೆಡಿಎಸ್ ಅಭ್ಯರ್ಥಿ ಬೆಂಬಲಿಗ ಹಾಗೂ ಕಾಂಗ್ರೆಸ್ ಅಭ್ಯರ್ಥಿ ನಡುವೆ ಮಾತಿನ ಚಕಮಕಿ ನಡೆದಿದೆ. ಹೌದು ಮತಗಟ್ಟೆ ಮುಂದೆ ನಿಂತ ಮತದಾರರ ಬಳಿ ಜೆಡಿಎಸ್​ಗೆ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದು, ಈ ಮನವಿ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್ ರೊಚ್ಚಿಗೆದ್ದಿದ್ದಾರೆ. ‘ವೋಟು ಇಲ್ಲದಿದ್ರು ಮತಗಟ್ಟೆಗೆ ಪ್ರವೇಶಿಸಿದ್ದೀರಾ, ಜೊತೆಗೆ ಇಲ್ಲಿ ಮತ ಕೇಳಿ ಕಾನೂನು ಉಲ್ಲಂಘಿಸುತ್ತಿದ್ದೀರಾ? ಇಲ್ಲಿ ಬಂದು ರೌಡಿಸಂ ಮಾಡಬೇಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಆರ್ ಟಿ ನಗರದ ಪ್ರೆಸಿಡೆನ್ಸಿ ಸ್ಕೂಲ್​ನ ಮತಗಟ್ಟೆ 174 ರ ಮುಂದೆ ಗಲಾಟೆ ಮಾಡಿದ್ದಾರೆ. ಈ ವೇಳೆ ಆಯ್ತು ಹೋಗ್ತಿನಿ ಎಂದು ಜೆಡಿಎಸ್ ಬೆಂಬಲಿಗ ಮತಗಟ್ಟೆಯಿಂದ ಹೊರ ನಡೆದಿದ್ದಾರೆ.

ಯಶವಂತಪುರದ ರೋಟರಿ ಮತಗಟ್ಟೆಯಲ್ಲಿ ಗಲಾಟೆ

ಬೆಂಗಳೂರಿನ ಯಶವಂತಪುರದ ರೋಟರಿ ಮತಗಟ್ಟೆಯಲ್ಲಿ ಮತದಾನ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮತದಾರರು ಮತಗಟ್ಟೆ ಅಧಿಕಾರಿಗಳ ವಿರುದ್ಧ ಮತದಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಎಲ್ಲಾ ಕೆಲಸ ಬಿಟ್ಟು ‌ಇಲ್ಲೇ ಇರೋದಕ್ಕೆ ಅಗುತ್ತಾ. ಬೇಗ ಬೇಗ ಮಾಡಿಸಿ ಎಂದು ನಾಗದೇವನಹಳ್ಳಿ ಮತಗಟ್ಟೆಯಲ್ಲಿ‌ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:Amulya: ಮುಂಜಾನೆಯೇ ಮತದಾನದ ಮಾಡಿದ ನಟಿ ಅಮೂಲ್ಯ-ಜಗದೀಶ್ ದಂಪತಿ

ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ವಾಮಾಚಾರದ ಆರೋಪ

ಬಾಗಲಕೋಟೆ: ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ವಾಮಾಚಾರದ ಆರೋಪ ಕೇಳಿಬಂದಿದೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ದ ಚೌಡಾಪುರ ಗ್ರಾಮದ ಮತಗಟ್ಟೆ ಬಳಿ ರಾತ್ರಿ ವಾಮಾಚಾರಕ್ಕೆ ಬಂದಿದ್ದು, ಒಂದು ಚೀಲದಲ್ಲಿ ವಾಮಾಚಾರದ ವಸ್ತುಗಳನ್ನ ತಂದಿದ್ದ ಎನ್ನಲಾಗಿದೆ. ಈ ವೇಳೆ ಗ್ರಾಮದ ಕೆಲವರು ನೋಡಿ. ವಾಮಾಚಾರ ಮಾಡಿಸಲು ಬಂದಿದ್ದವರನ್ನ ತರಾಟೆಗೆ ತೆಗೆದುಕೊಂಡು ಕಳಿಸಿದ್ದಾರೆ. ಗೋವಿಂದ ಕಾರಜೋಳ ಅವರಿಗೆ ಮತಗಳು ಬಾರದಿರಲಿ ಎಂದು ವಾಮಚಾರ ಮಾಡಿಸಲು ಬಂದಿದ್ರು ಎನ್ನುವ ಆರೋಪವನ್ನ ಗ್ರಾಮಸ್ಥರು ಮಾಡುತ್ತಿದ್ದಾರೆ.

ಗೌಪ್ಯ ಮತದಾನದ ನಿಯಮ ಉಲ್ಲಂಘನೆ

ಬಾಗಲಕೋಟೆ: ಜಿಲ್ಲೆಯ ತೇರದಾಳ ಮತಕ್ಷೇತ್ರದಲ್ಲಿ ಮತದಾರರೊಬ್ಬರು ಮತದಾನ ಮಾಡಿ ಫೋಟೋ ಹರಿಬಿಟ್ಟ ಘಟನೆ ನಡೆದಿದೆ. ಕೈ ಅಭ್ಯರ್ಥಿ ಸಿದ್ದು ಕೊಣ್ಣೂರಿಗೆ ವೋಟ್ ಹಾಕಿ, ಫೋಟೋ ತೆಗೆದುಕೊಂಡಿರುವ ಮತದಾರ. ಬಳಿಕ ವೋಟ್ ಹಾಕಿದ ಫೋಟೊ ವೈರಲ್ ಮಾಡಿದ್ದಾನೆ. ಸದ್ಯ ಫೋಟೊ ವೈರಲ್ ಮಾಡಿರುವವರ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಬಿಜೆಪಿ , ಕಾಂಗ್ರೆಸ್ ಕಾರ್ತಕರ್ತರ ನಡುವೆ ಮಾರಾಮಾರಿ

ಬಳ್ಳಾರಿ ಗ್ರಾಮಾಂತರ ಕ್ಷೇತ್ರ ದ ಸಂಜೀವರಾಯನಕೋಟೆ ಗ್ರಾಮದಲ್ಲಿ ಬಿಜೆಪಿ , ಕಾಂಗ್ರೆಸ್ ಕಾರ್ತಕರ್ತರ ನಡುವೆ ಮಾರಾಮಾರಿಯಾಗಿದೆ. ಈ ವೇಳೆ ಕಾಂಗ್ರೆಸ್ ಮುಖಂಡ ಉಮೇಶ್ ಗೌಡ ತಲೆಗೆ ಗಾಯವಾಗಿದೆ. ಇತ್ತಿಚೆಗೆ ಇವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು.  ಮತದಾನಕ್ಕೆ ತೆರಳುವೆ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿ. ಈ ವೇಳೆ ಉಮೇಶ್ ಗೌಡ ಅವರಿಗೆ ತಲೆಗೆ ಕಲ್ಲೇಟು ಬಿದ್ದಿದೆ. ತಲೆಯಲ್ಲಿ ರಕ್ತ ಸುರಿದು, ಗಾಯವಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಪೋಲಿಸರ ಬಂದಿದ್ದಾರೆ.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:27 am, Wed, 10 May 23

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!