Karnataka Assembly Elections 2023: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವೈರಲ್

Karnataka BJP Candidate List viral ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ರಂಗೇರಿದ್ದು, ಇದರ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಾಮಾಜಿ ಜಾಲತಾಣಗಳಲ್ಲಿ ವೈರಲ್​ ಆಗಿದೆ.

Karnataka Assembly Elections 2023: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವೈರಲ್
Follow us
|

Updated on:Apr 04, 2023 | 4:23 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 203) ತನ್ನ ಅಭ್ಯರ್ಥಿ ಆಯ್ಕೆಯಲ್ಲಿ ಬಿಜೆಪಿ ಸರಣಿ ಸಭೆಗಳನ್ನು ನಡೆಸುತ್ತಿದೆ. ಈಗಾಗಲೇ ಜಿಲ್ಲಾವರು ಕೋರ್​​ ಕಮಿಟಿ ಸಭೆಗಳ ಮೂಲಕ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಇಂದಿನಿಂದ ಎರಡು ದಿನ ನಡೆಯಲಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಎರಡು ದಿನಗಳ ಸಭೆಯ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ (BJP Candidates List) ಸಾಮಾಜಿ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿವೆ.

ಇದನ್ನೂ ಓದಿ: ಈ ಬಾರಿ ಕೆಲವು ಕ್ಷೇತ್ರಗಳಲ್ಲಿ ಹೊಸಬರಿಗೆ ಮಣೆ, ಏ.8ಕ್ಕೆ ಅಂತಿಮ ಪಟ್ಟಿ ಬಿಡುಗಡೆ: ಸಿಎಂ ಬೊಮ್ಮಾಯಿ

ಹೌದು..ಇನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ ಹೆಸರಿನಲ್ಲಿ ಯಾರೋ ಕಿಡಿಗೇಡಿಗಳು ಅಭ್ಯರ್ಥಿಗಳ ನಕಲಿ ಪಟ್ಟಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ಧಾರೆ. ಇನ್ನು ಪಟ್ಟಿ  ವೈರಲ್​ ಆಗುತ್ತಿರುವುದು  ಬಿಜೆಪಿ ನಾಯಕರ ಗಮನಕ್ಕೆ ಬಂದಿದ್ದು, ಕೂಡಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಟ್ವೀಟ್ ಮಾಡಿದ್ದು, ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ ಎಂದು ಕಿಡಿಕಾರಿದ್ದಾರೆ.

ಇನ್ನು ಬಿಜೆಪಿಯ ಅಧಿಕೃತ ಖಾತೆ ಮೂಲಕ ಟ್ವೀಟ್​ ಮಾಡಲಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವೈರಲ್ ಬಗ್ಗೆ ಕಾಂಗ್ರೆಸ್​ ವಿರುದ್ಧ ಆರೋಪಿಸಲಾಗಿದೆ. ಕಾಂಗ್ರೆಸ್ ಸುಳ್ಳಿನ ಫ್ಯಾಕ್ಟರಿಯಿಂದ ಮತ್ತೊಂದು ಸುಳ್ಳು. ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಯ್ಕೆಯ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಈ ಪಟ್ಟಿಯು ‘FAKE’ ಆಗಿರುತ್ತದೆ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಏಪ್ರಿಲ್ 8ರಂದು ಅಭ್ಯರ್ಥಿ ಪಟ್ಟಿ ಬಿಡುಗಡೆ

ಬೆಂಗಳೂರಿನ ಯಲಹಂಕ ರೆಸಾರ್ಟ್‌ನಲ್ಲಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆದಿದ್ದು,  ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಸಂಗ್ರಹಿಸಲಾದ ಆಕಾಂಕ್ಷಿಗಳ ಪಟ್ಟಿಯನ್ನು ಲ್ಟರ್ ಮಾಡಲಿದೆ.  ಪ್ರತಿ ಕ್ಷೇತ್ರಕ್ಕೆ ಮೂರು ಸಂಭಾವ್ಯ ಅಭ್ಯರ್ಥಿಗಳ ಹೆಸರು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ರವಾನೆಯಾಗಲಿದೆ.

ಈ ಸಭೆಯಲ್ಲಿ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ‌ ಬಿ.ಎಸ್. ಯಡಿಯೂರಪ್ಪ ರಾಜ್ಯಾಧ್ಯಕ್ಷ, ನಳೀನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಸಿಎಂಗಳಾದ ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಪಾಲ್ಗೊಂಡಿದ್ದು, ಏಪ್ರಿಲ್ 8ರಂದು ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ ಎಂದು ಸ್ವತಃ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Published On - 4:21 pm, Tue, 4 April 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ