ಬಿಜೆಪಿ ಅಭ್ಯರ್ಥಿ ಪಟ್ಟಿ, ವಿಜಯೇಂದ್ರ ಸ್ಪರ್ಧಿಸುವ ಕ್ಷೇತ್ರದ ಗೊಂದಲಗಳಿಗೆ ತೆರೆ ಎಳೆದ ಯಡಿಯೂರಪ್ಪ

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ ಸೇರಿದಂತೆ ಬಿವೈ ವಿಜಯೇಂದ್ರ ಸ್ಪರ್ಧಿಸುವ ಕ್ಷೇತ್ರದ ಗೊಂದಲಗಳಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ಪಟ್ಟಿ, ವಿಜಯೇಂದ್ರ ಸ್ಪರ್ಧಿಸುವ ಕ್ಷೇತ್ರದ ಗೊಂದಲಗಳಿಗೆ ತೆರೆ ಎಳೆದ ಯಡಿಯೂರಪ್ಪ
Vijayendra-Yediyurappa
Follow us
ರಮೇಶ್ ಬಿ. ಜವಳಗೇರಾ
|

Updated on: Apr 03, 2023 | 12:47 PM

ಶಿವಮೊಗ್ಗ: ಕರ್ನಾಟಕ ವಿಧಾನಸಭೆ (Karnataka Assembly Elections 2023)ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೊದಲ ಪಟ್ಟಿ ರಿಲೀಸ್ ಮಾಡಿ ಬಿಜೆಪಿ ವಿರುದ್ಧ ತೊಡೆ ತಟ್ಟಿವೆ. ಇದೀಗ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆಗಳ ಮೇಲೆ ಸಭೆ ಮಾಡುತ್ತಿದೆ. ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ(BS Yediyurappa) ಇಂದು(ಏಪ್ರಿಲ್ 03) ಶಿಕಾರಿಪುರದಲ್ಲಿ ಪ್ರತಿಕ್ರಿಯಿಸಿದ್ದು, ಇನ್ನೆರಡು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಈಗಾಗಲೇ ಎರಡು ದಿನಗಳ ಕಾಲ ಕೋರ್ ಕಮಿಟಿ ಸಭೆ ಆಗಿದೆ. ಶಿವಮೊಗ್ಗ, ಬೆಳಗಾವಿ ಜಿಲ್ಲೆಯ ಟಿಕೆಟ್ ಗೊಂದಲಕ್ಕೆ ತೆರೆ ಬೀಳುತ್ತೆ. ಜನರ ಅಪೇಕ್ಷೆಯಂತೆ ಶಿಕಾರಿಪುರ ಕ್ಷೇತ್ರದಲ್ಲಿ ವಿಜಯೇಂದ್ರ(BY Vijayendra) ಸ್ಪರ್ಧೆ ಮಾಡುತ್ತಾರೆ. ಅತಿ ಹೆಚ್ಚು ಮತಗಳ ಅಂತರದಲ್ಲಿ ವಿಜಯೇಂದ್ರ ಗೆಲುವು ಸಾಧಿಸುತ್ತಾರೆ ಎಂದು ಹೇಳಿದರು. ಈ ಮೂಲಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಯಾವ ಬಿಡುಗಡೆಯಾಗುತ್ತೆ ಹಾಗೂ ವಿಜಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಗೊಂದಲಗಳಿಗೆ ತೆರೆ ಎಳೆದರು.

ಇದನ್ನೂ ಓದಿ: Karnataka Assembly Elections 2023: ಬಿಜೆಪಿ ಜಿಲ್ಲಾವಾರು ಕೋರ್‌ ಕಮಿಟಿ ಸಭೆ ಅಂತ್ಯ: ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ

ಇನ್ನು ಇದೇ ವೇಳೆ ಶಿಕಾರಿಪುರದಲ್ಲಿ ಟಿವಿ9ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಪಕ್ಷದ ಸೂಚನೆಯಂತೆ ನಾನು ಶಿಕಾರಿಪುರ ದಲ್ಲಿ ಸ್ಪರ್ಧೆ ಮಾಡುತ್ತಿರುವೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ . ಇಂದಿನ ಶಿಕಾರಿಪುರ ದ ಸಭೆ ಮೊದಲನೆಯದ್ದು ಅಲ್ಲ. ಕಳೆದ ಎರಡು ತಿಂಗಳಿನಿಂದ ನಾನು ನಿರಂತರವಾಗಿ ಸಭೆ ನಡೆಸುತ್ತಿರುವೆ. ಈ ಮೂಲಕ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯೇಂದ್ರ ಅವರನ್ನು ವರುಣಾದಿಂದ ಕಣಕ್ಕಿಳಿಸಲು ಈಗಾಗಲೇ ಒತ್ತಡವಿದೆ, ವರುಣಾದಿಂದ ಒತ್ತಡವಿದ್ದರೂ ಶಿಕಾರಿಪುರದಿಂದ ಸ್ಪರ್ಧಿಸಬೇಕು ಎಂದು ಬಹಳ ಹಿಂದೆಯೇ ಹೇಳಿದ್ದೆ, ಹಾಗಾಗಿ ವಿಜಯೇಂದ್ರ ವರುಣಾದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಕೆಲ ದಿನಗಳ ಹಿಂದೆಯೇ ಯಡಿಯೂರಪ್ಪ ಸ್ಪಷ್ಟಪಡಿಸಿದ್ದರು. ಇದೀಗ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಇದರೊಂದಿಗೆ ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡಲ್ಲ ಎಂದು ಕಡ್ಡಿ ಮುರಿದಂತೆ ಮಾತನಾಡಿದ್ದಾರೆ.

ಇನ್ನಷ್ಟು ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ