Karnataka Assembly Elections 2023: ಲಕ್ಷ್ಮಣ ಸವದಿ ಕಾಂಗ್ರೆಸ್ಗೆ ಹೋಗ್ತಿರೋದು ದುಃಖ ತರಿಸಿದೆ, ಕಾಂಗ್ರೆಸ್ಗೆ ಅಭ್ಯರ್ಥಿಗಳು ಗತಿಯಿಲ್ಲ ಅಷ್ಟೇ! -ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು ಲಕ್ಷ್ಮಣ ಸವದಿ ಕಾಂಗ್ರೆಸ್ಗೆ ಹೋಗುತ್ತಿರುವುದು ದುಃಖ ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಅಥಣಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಲಕ್ಷ್ಮಣ್ ಸವದಿ(Lakshman Savadi) ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಕೂಡ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಚರ್ಚಿಸಲೆಂದೇ ಲಕ್ಷ್ಮಣ್ ಸವದಿ ಅವರು ಬೆಂಗಳೂರಿಗೆ ಆಗಮಿಸಿ ಡಿಕೆ ಶಿವಕುಮಾರ್, ರಂದೀಪ್ ಸುರ್ಜೇವಾಲ(Randeep Surjewala) ಚರ್ಚೆ ನಡೆಸಿದ್ದು ಇಂದು ಸಂಜೆ 4.30ರ ಬಳಗೆ ಕಾಂಗ್ರೆಸ್ ಸೇರುವ ನಿರೀಕ್ಷೆ ಇದೆ. ಇನ್ನು ಮತ್ತೊಂದೆಡೆ ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು ಲಕ್ಷ್ಮಣ ಸವದಿ ಕಾಂಗ್ರೆಸ್ಗೆ ಹೋಗುತ್ತಿರುವುದು ದುಃಖ ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಲಕ್ಷ್ಮಣ ಸವದಿ ಕಾಂಗ್ರೆಸ್ಗೆ ಹೋಗ್ತಿರೋದು ದುಃಖ ತರಿಸಿದೆ. ಲಕ್ಷ್ಮಣ ಸವದಿ ಜೊತೆ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಲಕ್ಷ್ಮಣ ಸವದಿಗೆ ಕಾಂಗ್ರೆಸ್ನಲ್ಲಿ ಭವಿಷ್ಯ ಕಾಣಿಸಿದೆ, ಹೋಗಿದ್ದಾರೆ. ಕಾಂಗ್ರೆಸ್ಗೆ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ಗತಿಯಿಲ್ಲ. ಅದಕ್ಕಾಗಿ ಬೇರೆ ಪಕ್ಷಗಳಿಂದ ಕೆಲವರನ್ನು ಸೇರಿಸಿಕೊಳ್ಳುತ್ತಿದ್ದಾರೆ. ಸಹಜವಾಗಿಯೇ ಆಡಳಿತ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿರುತ್ತಾರೆ. ಕಾರ್ಯಕರ್ತರು ಪಕ್ಷದ ಪರವಾಗಿದ್ದಾರೆ ಸಾಕು ಬಿಜೆಪಿ ಗೆಲ್ಲಲಿದೆ. ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದರು.
ಇದನ್ನೂ ಓದಿ: Karnataka Assembly Election 2023: ಎಂಎಲ್ಸಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವುದು ಪಕ್ಕಾ: ಡಿಕೆ ಶಿವಕುಮಾರ್
ಲಕ್ಷ್ಮಣ್ ಸವದಿ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಪಕ್ಕಾ ಆಗಿದೆ. ಇನ್ನು ಭಾಷಣವೊಂದರಲ್ಲಿ ಮಾತನಾಡಿದ ಸವದಿ, ಇಂದು ನನಗೆ ರಾಜಕೀಯ ಜೀವನ ಕೊಟ್ಟ ಪಕ್ಷಕ್ಕೆ ವಿದಾಯ ಹೇಳ್ತೆನಿ. ನನಗೆ ಬಿಜೆಪಿಯಲ್ಲಿ ಸಹಾಯ ಮಾಡಿದ ಎಲ್ಲಾ ನಾಯಕರಿಗೆ ಹೃದಯ ತುಂಬಿ ಧನ್ಯವಾದ ಹೇಳ್ತೆನಿ. ನನ್ನಾ ಗೆಲ್ಲಿಸಿ ಕಳ್ಸಿದ್ರೇ ಹಾರ ಹಾಕ್ಕೋತ್ತೆನಿ ಇಲ್ಲಾ ನನ್ನ ಹೆಣದ ಮೇಲೆ ಹಾರ ಹಾಕಿ ಎಂದು ಹಾರ ಶಾಲು ತಂದ ಕಾರ್ಯಕರ್ತರಿಗೆ ಲಕ್ಷ್ಮಣ ಸವದಿ ಭಾವುಕರಾಗಿ ನುಡಿದಿದ್ದಾರೆ. ಹಾಗೂ ಇಂದಿನಿಂದ ಹಾರ ಹಾಕಿಕೊಳ್ಳುವುದಿಲ್ಲ ಎಂದು ವೇದಿಕೆ ಮೇಲೆ ಶಪಥ ಮಾಡಿದ್ದಾರೆ. ಈ ವೇಳೆ ಅಥಣಿಯ ಜನರ ಸ್ವಾಭಿಮಾನಕ್ಕೆ ಜೈ ಎಂದು ಘೋಷಣೆ ಕೂಗಿ ಸವದಿ ಭಾಷಣ ಮುಗಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:57 pm, Fri, 14 April 23