ಹಳೇ ಮೈಸೂರು ಭಾಗ ಗೆಲ್ಲಲು ಬಿಜೆಪಿಯ ತಂತ್ರಗಳೇನು? ಕಾಂಗ್ರೆಸ್ – ಜೆಡಿಎಸ್‌ನ ಪ್ರತಿತಂತ್ರಗಳೇನು? ಇಲ್ಲಿದೆ ವಿವರ

ಪ್ರತಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚನೆಯಲ್ಲಿ ಹಳೇ ಮೈಸೂರು ಭಾಗ ಪ್ರಮುಖ ಪಾತ್ರವಹಿಸುತ್ತಿದೆ. ಹೀಗಾಗಿ ಈ ಬಾರಿ ಮೂರು ಪಕ್ಷಗಳು ಈ ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಇನ್ನಿಲ್ಲದ ತಂತ್ರಗಳನ್ನು ಮಾಡಿವೆ.

ಹಳೇ ಮೈಸೂರು ಭಾಗ ಗೆಲ್ಲಲು ಬಿಜೆಪಿಯ ತಂತ್ರಗಳೇನು? ಕಾಂಗ್ರೆಸ್ - ಜೆಡಿಎಸ್‌ನ ಪ್ರತಿತಂತ್ರಗಳೇನು? ಇಲ್ಲಿದೆ ವಿವರ
Follow us
ರಮೇಶ್ ಬಿ. ಜವಳಗೇರಾ
|

Updated on:May 08, 2023 | 3:32 PM

ಬೆಂಗಳೂರು:  ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ರಂಗೇರಿದ್ದು, ಮತಯಾಚನೆ ಕ್ಲೈಮ್ಯಾಕ್ಸ್ ಘಟ್ಟಕ್ಕೆ ತಲುಪಿದೆ. ಅಬ್ಬರದ ಪ್ರಚಾರಕ್ಕೆ ಇಂದೇ ತೆರೆಬೀಳಲಿದೆ. ಇನ್ನೆರಡು ದಿನದಲ್ಲಿ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಮತದಾರರ ಮನಗೆಲ್ಲಲು ಎಲ್ಲಾ ರಾಜಕೀಯ ಪಕ್ಷಗಳು ಕೊನೆ ಹಂತದ ಕಸರತ್ತು ನಡೆಸಿವೆ…ಹೌದು ರಾಜ್ಯ ವಿಧಾನಸಭೆ ಚುನಾವಣೆ ನಿರ್ಣಾಯಕ ಹಂತಕ್ಕೆ ತಲುಪಿದೆ. ಬುಧವಾರ ಮತದಾನ ನಡೆಯಲಿದ್ದು, ಎರಡು ದಿನ ಮುಂಚಿತವಾಗಿ ಅಂದ್ರೆ ಇಂದೇ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದ್ದು, ನಾಳೆಯಿಂದ ಮನೆ ಮನೆ ಪ್ರಚಾರ ಮಾಡಬೇಕಿದೆ. ಪ್ರಮುಖವಾಗಿ ಈ ಬಾರಿ ಹಳೇ ಮೈಸೂರನ್ನು ತೆಕ್ಕೆಗೆ ತೆಗೆದುಕೊಳ್ಳಲು ಮೂರು ಪಕ್ಷಗಳು ಮಾಸ್ಟರ್ ಪ್ಲ್ಯಾನ್ ಮಾಡಿವೆ. ಹಳೇ ಮೈಸೂರು ಭಾಗದಲ್ಲಿ ಗೆಲ್ಲಲು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಕಾರ್ಯತಂತ್ರಗಳನ್ನು ರೂಪಿಸಿವೆ.

ಇದನ್ನೂ ಓದಿ: ಮತದಾನಕ್ಕೆ 2 ದಿನ ಬಾಕಿ ಇರುವಾಗಲೇ ಬಿಜೆಪಿ, ಕಾಂಗ್ರೆಸ್​ಗೆ​ ಬಿಗ್ ಶಾಕ್, ಶಿರಹಟ್ಟಿ ಕ್ಷೇತ್ರದಲ್ಲಿ ರಾಜಕೀಯ ತಲ್ಲಣ

ರಾಮನಗರ, ಮಂಡ್ಯ, ಮೈಸೂರು, ಚಾಮರಾನಗರ,  ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು  ಜಿಲ್ಲೆಗಳನ್ನು ಒಳಗೊಂಡು ಹಳೇ ಮೈಸೂರು ಭಾಗ ಎಂದು ಕರೆಯಲಾಗುತ್ತೆ. ಈ ಭಾಗದಲ್ಲಿ ಒಟ್ಟು 66 ವಿಧಾನಭಾ ಕ್ಷೇತ್ರಗಳಿದ್ದು. ಇದರಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಪಕ್ಷ ಹೆಚ್ಚಾಗಿ ಅಧಿಕಾರಿಕ್ಕೆ ಬರುತ್ತದೆ. ಹೌದು..ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿರುವುದು ಇತಿಹಾಸ ಇದೆ. ಈ ಸಮುದಾಯ ಶೇ. 17 ರಷ್ಟಿರುವ ಲಿಂಗಾಯತ ಸಮಾಜದ ನಂತರದ ಸ್ಥಾನದಲ್ಲಿ ಜನಸಂಖ್ಯೆ ಆಧಾರದಲ್ಲಿ ಬರುತ್ತದೆ. ಉತ್ತರ ಕರ್ನಾಟಕ ಸೇರಿದಂತೆ ಲಿಂಗಾಯತರು ಬಲಿಷ್ಠರಾಗಿರುವ ಪ್ರದೇಶಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಈ ಮತದಾರರನ್ನು ನಂಬಿಕೊಂಡಿವೆ. ಆದರೆ, ಒಕ್ಕಲಿಗರು ಹೆಚ್ಚಿರುವ ಹಳೆ ಮೈಸೂರು ಭಾಗ ಜೆಡಿಎಸ್‌ ತೆಕ್ಕೆಯಲ್ಲಿದ್ದು, ಈ ಬಾರಿ ಒಕ್ಕಲಿಗ ಕೋಟೆಯೊಳಗೆ ರಥ ನುಗ್ಗಿಸಲು ಬಿಜೆಪಿ ವಿಶೇಷ ತಂತ್ರಗಾರಿಕೆ ಹೆಣೆದಿದೆ.

ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿದ ಬಿಜೆಪಿ

ಬಿಜೆಪಿ ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಒಟ್ಟು 66 ಸ್ಥಾನಗಳಲ್ಲಿ ಕನಿಷ್ಠ 30ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಮಾಡಿದೆ. ಅದರಲ್ಲೂ ಮಂಡ್ಯ ಹಾಗೂ ಮೈಸೂರು ಭಾಗದಲ್ಲಿ ಹೆಚ್ಚು ಕಮಲ ಅರಳಿಸಲು ಖುದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪ್ರಚಾರ ಮಾಡಿ ಹೋಗಿದ್ದಾರೆ. ಚಿತ್ರದುರ್ಗದಲ್ಲಿ ತನ್ನ ಪ್ರಾಬಲ್ಯ ಮುಂದುವರಿಸುವುದು ಜೊತೆಗೆ ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಸನದಲ್ಲಿ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದಕ್ಕೆ ರಣತಂತ್ರ ಮಾಡಿದೆ. ರಾಮನಗರ ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರದಲ್ಲಿ ಖಾತೆ ತೆರೆಯುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ.

ಕಾಂಗ್ರೆಸ್ ತಂತ್ರಗಾರಿಕೆ

ಕಾಂಗ್ರೆಸ್ ಸಹ ಹಳೇ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿದೆ. ಅದರಲ್ಲೂ ಮೈಸೂರು ಮಂಡ್ಯ ಹಾಸನ ಚಾಮರಾಜನಗರ ರಾಮನಗರ ಹಾಗೂ ಕೋಲಾರದಲ್ಲಿ ಶತಾಯಗತಾಯ ಅತಿ ಹೆಚ್ಚು ಸ್ಥಾನ ಗಳಿಸಲೇಬೇಕೆಂದು ಮಾಸ್ಟರ್ ಪ್ಲ್ಯಾನ್ ಮಾಡಿದೆ. ಅದಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಹಗಲು ರಾತ್ರಿ ಶ್ರಮ ವಹಿಸುತ್ತಿದ್ದಾರೆ. ಇದರ ಜೊತೆಗೆ ತುಮಕೂರು ಬೆಂಗಳೂರು ಗ್ರಾಮಾಂತರ ಹಾಗೂ ಚಿತ್ರದುರ್ಗದಲ್ಲೂ ಕೈ ಬಲಪಡಿಸುವ ಪ್ರಯತ್ನ ನಿರಂತರವಾಗಿ ನಡೆದಿದೆ.

ಜೆಡಿಎಸ್ ರಣತಂತ್ರ ಹೇಗಿದೆ?

ಎರಡು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ಹಳೇ ಮೈಸೂರು ಭಾಗದಲ್ಲಿ ಕಳೆದ ಬಾರಿಗಿಂತ ಹೆಚ್ಚು ಸ್ಥಾನವನ್ನು ಗಳಿಸುವುದಕ್ಕೆ ಜೆಡಿಎಸ್ ಎಲ್ಲಾ ರೀತಿಯಾದಂತಹ ಪ್ರಯತ್ನವನ್ನು ಮುಂದುವರೆಸಿದೆ. ಇನ್ನು ಈ ಚುನಾವಣೆ ಜೆಡಿಎಸ್ ಪಾಲಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಅದಕ್ಕಾಗಿಯೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಾಲಿಗೆ ಚಕ್ರ ಕಟ್ಟಿಕೊಂಡು ಪಂಚರತ್ನ ಯಾತ್ರೆಯನ್ನ ನಡೆಸಿದ್ದರು. ಇದೀಗ ದೊಡ್ಡಗೌಡರು ಮಂಡ್ಯದಲ್ಲಿ 7ಕ್ಕೆ 7 ಸ್ಥಾನ ಗೆಲ್ಲುವ ಶಪಥ ಮಾಡಿದ್ದಾರೆ. ಉಳಿದಂತೆ ಮೈಸೂರು ಹಾಸನ ರಾಮನಗರ ಬೆಂಗಳೂರು ಗ್ರಾಮಾಂತರದಲ್ಲಿ ತಮ್ಮ ಪ್ರಾಬಲ್ಯ ಮುಂದವರಿಸುವುದು. ಕೋಲಾರ ತುಮಕೂರಿನಲ್ಲಿ ಕಳೆದು ಹೋಗಿರುವ ಹಿಡಿತವನ್ನು ಮತ್ತೆ ಸಾಧಿಸುವುದು ಜೆಡಿಎಸ್ ಗುರಿಯಾಗಿದೆ. ಈ ಮೂಲಕ ಜೆಡಿಎಸ್ ಹಳೇ‌ ಮೈಸೂರು ಭಾಗದಲ್ಲೇ ಅತಿ ಹೆಚ್ಚು ಸ್ಥಾನಗಳಿಸುವುದಕ್ಕೆ ಎಲ್ಲಾ ರಣತಂತ್ರಗಳನ್ನು ಮಾಡುತ್ತಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Mon, 8 May 23

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?