ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

|

Updated on: Apr 20, 2023 | 3:37 PM

ಏಪ್ರಿಲ್ 17ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಾವಿರಾರು ಕಾರ್ಯಕರ್ತರೊಂದಿಗೆ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಇದೀಗ ಕನಕಪುರದಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.

ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ
ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ
Follow us on

ರಾಮನಗರ: ಸಂಸದ ಡಿಕೆ ಸುರೇಶ್ (DK Suresh) ಅವರು ಕಾಂಗ್ರೆಸ್  (Congress) ಅಭ್ಯರ್ಥಿಯಾಗಿ ಕನಪುರ ವಿಧಾನಸಭಾ ಕ್ಷೇತ್ರಕ್ಕೆ (kanakpura Assembly constituency) ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ಡಿಕೆ ಶಿವಕುಮಾರ್​ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿದ್ದರು. ಇದೀಗ ಇಂದು(ಏಪ್ರಿಲ್​ 20) ಡಿಕೆ ಸುರೇಶ್​ ಸಹ ನಾಮಪತ್ರ ಸಲ್ಲಿಸಿದ್ದಾರೆ. ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಪ್ರತಿನಿಧಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಸಹ ಅವರು ಮೊನ್ನೇ ಏಪ್ರಿಲ್ 17ರಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದರು. ಆದ್ರೆ, ಇಂದು ಅವರ ಸಹೋದರ ಡಿಕೆ ಸುರೇಶ್ ಸಹ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ: ರಾಜ್ಯ ಚುನಾವಣಾ ಅಖಾಡದಲ್ಲಿ ಬಿಗ್ ಟ್ವಿಸ್ಟ್: ನಾಮಪತ್ರ ಸಲ್ಲಿಸಲು ಹೋಗುತ್ತಿದ್ದೇನೆ ಎಂದ ಡಿಕೆ ಸುರೇಶ್

ಡಿಕೆ ಶಿವಕುಮಾರ್​ ಅವರು ಸಲ್ಲಿಸಿರುವ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾವಾಗಿ ಡಿಕೆ ಸುರೇಶ್ ಸಹ ಇಂದು ಕನಕಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಂತೋಷ್​ಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ಟಿವಿ9ಗೆ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯಿಸಿದ್ದು, ಬಿಜೆಪಿಯ ಕುತಂತ್ರಕ್ಕೆ ತಕ್ಕ ಉತ್ತರ ಕೊಡಬೇಕಿದೆ. ಹೀಗಾಗಿ ಕೆಲವೊಂದು ಮಾಹಿತಿ ಆಧಾರದ ಮೇಲೆ ನಾಮಪತ್ರ ಸಲ್ಲಿಸಿದ್ದೇನೆ. ಬಿಜೆಪಿಯಿಂದ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ. ಚುನಾವಣಾಧಿಕಾರಿಗಳು ಸಹ ಸರ್ಕಾರದ ಅಧೀನದಲ್ಲೇ ಇದ್ದಾರೆ ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಅವರ ನಾಮಪತ್ರ ತಿರಸ್ಕರಿಸುವ ಆತಂಕ ವ್ಯಕ್ತಪಡಿಸಿದರು.

ನನಗೆ ಸೇಡಿನ ರಾಜಕಾರಣ, ದ್ವೇಷದ ರಾಜಕಾರಣ ಗೊತ್ತಿಲ್ಲ. ಮೇ 10ರಂದು ಕನಕಪುರ ಜನ ಎಲ್ಲದಕ್ಕೂ ಉತ್ತರ ಕೊಡುತ್ತಾರೆ. ಸದ್ಯಕ್ಕೆ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಆದ್ರೆ, ಕೊನೆ ಕ್ಷಣದಲ್ಲಿ ನಾನು ಸ್ಪರ್ಧಿಸುತ್ತೇನೋ ಅಥವಾ ನನ್ನ ಅಣ್ಣ ಸ್ಪರ್ಧಿಸುತ್ತಾರೋ ಎಂದು ಕಾದುನೋಡಿ ಎಂದರು.

ಇಂದು ಬೆಳಗ್ಗೆ ಅಷ್ಟೇ ಡಿಕೆ ಸುರೇಶ್ ಅವರು ನಾಮಪತ್ರ ಸಲ್ಲಿಸುವುದಾಗಿ ಹೇಳಿಕೆ ನೀಡಿದ್ದರು. ಆದ್ರೆ, ಯಾವ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವುದು ಮಾತ್ರ ಗುಟ್ಟುಬಿಟ್ಟು ಕೊಡದೇ ನಿಗೂಢವಾಗಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಕೆ ಸುರೇಶ್ ಕುಮಾರ್ ಅವರು ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿತ್ತು.  ಆರ್ ಅಶೊಕ್ ಅವರನ್ನು ಬಿಜೆಪಿ ಕನಕಪುರದಿಂದ ಕಣಕ್ಕಿಳಿಸಿದ್ದು, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್​ ಸಹ ಅಶೋಕ್​ ವಿರುದ್ಧ ಡಿಕೆ ಸುರೇಶ್ ಅವರನ್ನು  ಪದ್ಮನಾಭನಗರದಲ್ಲಿ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆಸಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ರಘುನಾಥ್ ನಾಯ್ಡು ಅವರು ನಾಮಪತ್ರ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:28 pm, Thu, 20 April 23