Karnataka Assembly Elections 2023: ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಸಲ್ಲಿಸಿದ ಮನವಿಗಳೇನು?

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ನಿಯೋಗ ಬೆಂಗಳೂರಿಗೆ ಬಂದಿದ್ದು, ವಿಕಾಸಸೌಧದಲ್ಲಿ ಗುರುವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದೆ.

Karnataka Assembly Elections 2023: ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಸಲ್ಲಿಸಿದ ಮನವಿಗಳೇನು?
ಭಾರತೀಯ ಚುನಾವಣಾ ಆಯೋಗ
Follow us
Ganapathi Sharma
| Updated By: Digi Tech Desk

Updated on:Mar 09, 2023 | 6:19 PM

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿರುವಂತೆಯೇ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Rajiv Kumar) ನೇತೃತ್ವದ ನಿಯೋಗ ಬೆಂಗಳೂರಿಗೆ ಬಂದಿದ್ದು, ವಿಕಾಸಸೌಧದಲ್ಲಿ ಗುರುವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದೆ. ಈ ವೇಳೆ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಹಲವು ವಿಚಾರಗಳನ್ನು ಆಯೋಗದ ಮುಂದಿಟ್ಟಿವೆ. ಈ ವೇಳೆ ಮತಪಟ್ಟಿಯಿಂದ ಹೆಸರು ಕೈಬಿಟ್ಟಿರುವುದು, ಚಿಲುಮೆ ಸಂಸ್ಥೆಯ ಅಕ್ರಮ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ಆಯೋಗದ ಜತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಕಾಂಗ್ರೆಸ್ ನಾಯಕ ವಿ.ಎಸ್ ಉಗ್ರಪ್ಪ, ಕೈಬಿಟ್ಟ 33 ಲಕ್ಷ ಮತದಾರರನ್ನು ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದ್ದೇವೆ. ಚಿಲುಮೆ ಸಂಸ್ಥೆ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದೇವೆ. ಚಿಲುಮೆ ಸಂಸ್ಥೆ ಅಕ್ರಮದ ತನಿಖಾ ವರದಿಯನ್ನು ಬಹಿರಂಗಪಡಿಸಲು ಒತ್ತಾಯಿಸಿದ್ದೇವೆ. ಮತ ಸೆಳೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸತತವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯ ಸರ್ಕಾರವು ತರಾತುರಿಯಲ್ಲಿ ಟೆಂಡರ್ ಕರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ನೀತಿ ಸಂಹಿತೆ ಜಾರಿಗೊಳಿಸಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶ ಹಾಗೂ ಗುಜರಾತ್ ಸೇರಿದಂತೆ ಬಿಜೆಪಿ ಗೆಲುವು ಸಾಧಿಸಿದ ರಾಜ್ಯಗಳಲ್ಲಿ ಬಳಕೆ ಮಾಡಿದ್ದ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ರಾಜ್ಯದಲ್ಲಿ ಬಳಸಬಾರದು. 224 ಕ್ಷೇತ್ರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ಮಾಡಬೇಕು. ಸೂಕ್ಷ್ಮ ಮತಗಟ್ಟೆಯಯಲ್ಲಿ ಅರೆಸೇನಾ ಪಡೆಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಬೇಕು. ಮೂರು ವರ್ಷ ಒಂದೇ ಕಡೆ ಕೆಲಸ ಮಾಡಿದ ಅಧಿಕಾರಿಗಳನ್ನು ಬದಲಾವಣೆ ಮಾಡಬೇಕು ಎಂಬುದಾಗಿ ಮನವಿ ಮಾಡಲಾಗಿದೆ ಎಂದು ಉಗ್ರಪ್ಪ ತಿಳಿಸಿದ್ದಾರೆ. ಬೇಕಾಬಿಟ್ಟಿ ಜಾಹೀರಾತಿಗೆ ಕಡಿವಾಣ ಹಾಕುವಂತೆಯೂ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಮೂರು ದಿನಗಳ ಪ್ರವಾಸ

ರಾಜೀವ್ ಕುಮಾರ್ ನೇತೃತ್ವದ ನಿಯೋಗ ರಾಜ್ಯದಲ್ಲಿ ಮೂರು ದಿನಗಳ ಪ್ರವಾಸ ಹಮ್ಮಿಕೊಂಡಿದೆ. ನಿಯೋಗದಲ್ಲಿ ಚುನಾವಣಾ ಆಯುಕ್ತರಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಇದ್ದಾರೆ. ನಿಯೋಗವನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್‌ ಮೀನಾ ಅವರು ಸ್ವಾಗತಿಸಿದ್ದಾರೆ. ಈ ವೇಳೆ ಬಿಬಿಎಂಪಿ ಮುಖ್ಯ ಚುನಾವಣಾಧಿಕಾರಿ, ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ, ಡಿಜಿಪಿ ಮತ್ತು ಐಜಿ ಪ್ರವೀಣ್ ಸೂದ್, ಕರ್ನಾಟಕ ಅಪರ ಮುಖ್ಯ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ್, ರಾಜೇಂದ್ರ ಚೋಳನ್, ಬೆಂಗಳೂರು ‌ಗ್ರಾಮಾಂತರ ಜಿಲ್ಲಾಧಿಕಾರಿ ಲತಾ ಹಾಗೂ ಇತರರು ಇದ್ದರು.

ಇದನ್ನೂ ಓದಿ: Karnataka Assembly Poll 2023: ಕಾಂಗ್ರೆಸ್​ನಲ್ಲಿ ಜಾತಿವಾರು ಟಿಕೆಟ್​ ಲಾಬಿ ಶುರು, ಯಾವ ಸಮುದಾಯ ಎಷ್ಟು ಟಿಕೆಟ್​ಗೆ ಬೇಡಿಕೆ?

ನಾಳೆ (ಮಾರ್ಚ್​ 10) ನಿಯೋಗವು 34 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಚುನಾವಣೆಯ ಪೂರ್ವಭಾವಿ ತಯಾರಿ ಕುರಿತು ಸಭೆ ನಡೆಸಲಿದೆ. ಸಂಜೆ ಬೆಂಗಳೂರಿನ ಐಐಎಸ್‍ಸಿ ಆವರದಲ್ಲಿರುವ ಟಾಟಾ ಸಭಾಂಗಣದಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮತದಾರರ ಜಾಗೃತಿ ಕುರಿತ ವಿಶೇಷ ವಸ್ತುಪ್ರದರ್ಶನ, ಹ್ಯಾಕಥಾನ್ ಉದ್ಘಾಟಿಸಿದ ನಂತರ ಮತದಾರರ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಗಳಿಗೆ ಚಾಲನೆ ನೀಡಲಿದೆ. ಮಾರ್ಚ್ 11ರಂದು ಅಪರಾಹ್ನದ ನಂತರ ಮೂರು ದಿನಗಳ ತಮ್ಮ ಭೇಟಿಯ ಕುರಿತು ಪತ್ರಿಕಾಗೋಷ್ಠಿ ನಡೆಸಿ ನವದೆಹಲಿಗೆ ಪ್ರಯಾಣ ಬೆಳಸಲಿದೆ. ನಂತರ ರಾಜ್ಯದ ಚುನಾವಣೆ ದಿನಾಂಕ ಪ್ರಕಟಕ್ಕೆ ಸಂಬಂಧಿಸಿದ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.

ಇನ್ನಷ್ಟು ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:16 pm, Thu, 9 March 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು