AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಚುನಾವಣಾ ಬಿಸಿ: ರಕ್ತ ಸಿಗದೇ ಆಸ್ಪತ್ರೆಗಳಲ್ಲಿ ರೋಗಿಗಳ ಪರದಾಟ

ನೀತಿ ಸಂಹಿತೆ ಜಾರಿಯಾದಗಿನಿಂದ ಹೆಚ್ಚಿನ ರಕ್ತದಾನ ಶಿಬರಗಳೇ ನಡೆದಿಲ್ಲ. ರಕ್ತದಾನ ಶಿಬಿರ ಆಯೋಜನೆಗೆ ನೀತಿ ಸಂಹಿತೆ ಅಡ್ಡಿಪಡಿಸಿದೆ. ಇದರಿಂದ ರೋಗಿಗಳು ರಕ್ತ ಸಿಗದೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಚುನಾವಣಾ ಬಿಸಿ:  ರಕ್ತ ಸಿಗದೇ ಆಸ್ಪತ್ರೆಗಳಲ್ಲಿ ರೋಗಿಗಳ ಪರದಾಟ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Apr 27, 2023 | 7:15 AM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ(Karnataka Assembly Elections 2023) ಎಫೆಕ್ಟ್ ಬ್ಲಡ್ ಬ್ಯಾಂಕ್​ಗಳ(Blood Banks) ಮೇಲೂ ತಟ್ಟಿದೆ. ರಕ್ತದಾನಿಗಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದ್ದು, ರಕ್ತಕ್ಕೆ ಬೇಡಿಕೆ ಹೆಚ್ಚಾಗಿದೆ. ಬ್ಲಡ್ ಬ್ಯಾಂಕ್​ನಲ್ಲಿಯೂ ಸಮಯಕ್ಕೆ ಸರಿಯಾಗಿ ಬ್ಲಡ್ ಸಿಗದೆ ರೋಗಿಗಳು ಪರದಾಡುವಂತಾಗಿದೆ. ರಕ್ತಕ್ಕಾಗಿ ಬ್ಲಡ್ ಬ್ಯಾಂಕ್​ಗಳಿಗೆ ಅಲೆಯುವಂತಾಗಿದೆ.

ಹೌದು.. ಚುನಾವಣೆ ನೀತಿ ಸಂಹಿತೆ ಜಾರಿಯಾದಗಿನಿಂದ ಹೆಚ್ಚಿನ ರಕ್ತದಾನ ಶಿಬರಗಳೇ ನಡೆದಿಲ್ಲ. ರಾಜಕೀಯ ನಾಯಕರು, ಗಣ್ಯರು ಪ್ರಚಾರದಲ್ಲಿ ತೊಡಗಿದ್ದಾರೆ.‌ ಮೊದಲು ಕೆಲ ಕಾರ್ಯಕ್ರಮದ ಹೆಸರಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡುತ್ತಿದ್ದರು. ಈಗ ಈ ನೀತಿ ಸಂಹಿತೆಯಿಂದಾಗಿ ಕಾರ್ಯಕ್ರಮಕ್ಕೆ ತಡೆಬಿದ್ದಿದ್ದು, ರಕ್ತದಾನ ಶಿಬಿರ ಆಯೋಜನೆಗೆ ನೀತಿ ಸಂಹಿತೆ ಅಡ್ಡಿಪಡಿಸಿದೆ. ಇದರಿಂದ ರೋಗಿಗಳು ರಕ್ತ ಸಿಗದೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕಿಳಿದ ಮಹಾರಾಷ್ಟ್ರ ಡಿಸಿಎಂ: ಗಡಿ ವಿವಾದದ ಬಗ್ಗೆ ಸಾಫ್ಟ್​​ ಕಾರ್ನರ್

ಇನ್ನು ಸಿನಿಮಾ ನಟ-ನಟಿಯರು ಕೂಡ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಅಷ್ಟೇ ಅಲ್ಲದೆ, ಸಂಘ-ಸಂಸ್ಥೆಗಳು ಹಾಗೂ ಕಾರ್ಯಕರ್ತರು ಕೂಡ ಚುನಾವಣ ಪ್ರಚಾರದಲ್ಲಿ ತೊಡಗಿದ್ದಾರೆ. ಆದ್ದರಿ೦ದ ರಕ್ತದಾನ ಶಿಬಿರ ಆಯೋಜನೆಯಾಗುತ್ತಿಲ್ಲ. ಬೆಂಗಳೂರಿನ ರಾಷ್ಟೋತ್ಥಾನ ಸಂಸ್ಥೆಯ ರಕ್ತ ನಿಧಿಯಲ್ಲಿ ತಿಂಗಳಿಗೆ ಸರಾಸರಿ 2 ಸಾವಿರಕ್ಕೂ ಹೆಚ್ಚು ಯುನಿಟ್ ರಕ್ತ ಸಂಗ್ರಹವಾಗುತ್ತಿತ್ತು, ಕಳೆದ ಒಂದು ತಿಂಗಳಿನಲ್ಲಿ ಈ ಸಂಖ್ಯೆ ಅರ್ಧಕ್ಕೆ ಅರ್ಧ ಕುಸಿದಿದೆ. ಕೇವಲ 900 ಯೂನಿಟ್ ರಕ್ತ ಸಂಗ್ರಹವಾಗಿದೆಯಂತೆ. ಅಲ್ಲದೆ ತಿಂಗಳಿಗೆ 30 ರಿಂದ 40 ಶಿಬಿರ ಮಾಡ್ತಿದ್ದ ಸಂಸ್ಥೆ ಈ ತಿಂಗಳು 15ನ್ನೂ ಮುಟ್ಟಿಲ್ಲಂತೆ. ಆಸ್ಪತ್ರೆಯಿಂದ ಬರ್ತಿರುವ ಬೇಡಿಕೆಯನ್ನ ಪೂರೈಸಲು ಕಷ್ಟವಾಗ್ತಿದೆ ಅಂತ ರಾಷ್ಟೋತ್ಥಾನ ಸಂಸ್ಥೆಯವರು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ನಿತ್ಯ 2,500 ಯುನಿಟ್‌ಗಳಷ್ಟು ರಕ್ತಕ್ಕೆ ಬೇಡಿಕೆ ಇದೆ. ಸದ್ಯಕ್ಕೆ ಬೆಂಗಳೂರಿನಲ್ಲಿ 300 ರಿಂದ 400 ಯುನಿಟ್ ಮಾತ್ರ ರಕ್ತ ಸಂಗ್ರಹವಿದೆ. ಕೆಂಪು ರಕ್ತಕಣಕ್ಕೆ ಬೇಡಿಕೆ ಇದೆ. ಅಲ್ಲದೆ, ನೆಗೆಟಿವ್ ಗ್ರೂಪ್ ರಕ್ತವೇ ಇಲ್ಲದಂತಾಗಿದೆಯಂತೆ. ಹೀಗಾಗಿ ರೋಗಿಗಳು ರಕ್ತಕ್ಕಾಗಿ ಅಲೆಯುವಂತಾಗಿದೆ. ಒಟ್ನಲ್ಲಿ, ಸ್ವಯಂಪ್ರೇರಿತ ರಕ್ತದಾನಿಗಳ ಸಂಖ್ಯೆಯಲ್ಲಿ ಇಳಿಮುಖವಾಗಿರುವ ಕಾರಣ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳಿಗೆ ರಕ್ತದ ಅಗತ್ಯತೆ ಹೆಚ್ಚಿದೆ. ಹೀಗಾಗಿ ಜನ ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಅಮಾಯಕರ ಪ್ರಾಣ ಉಳಿಸಬೇಕಿದೆ.

ವರದಿ: ಪೂರ್ಣಿಮಾ ಟಿವಿ9, ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ