ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Elections 2023) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲು ತಂತ್ರ-ಪ್ರತಿತಂತ್ರಗಳನ್ನು ರೂಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಎಲ್ಲಾ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಬಾರಿ ಬಿಜೆಪಿಯ ಹಲವು ಹಿರಿಯ ನಾಯಕರಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಹಲವು ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಪ್ರತಿಯೊಂದು ಕ್ಷೇತ್ರದ ಅಭ್ಯರ್ಥಿಗಳು ಆಯಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಿಜೆಪಿ ಮಾಡಿರುವ ಟಿಕೆಟ್ ಹಂಚಿಕೆಯಲ್ಲಿ ಯಾವ ಜಾತಿಯವರಿಗೆ ಎಷ್ಟು ಟಿಕೆಟ್ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.
ಬಿಜೆಪಿ 224 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅದರಲ್ಲಿ 12 ಮಹಿಳಾ ಆಭ್ಯರ್ಥಿಗಳಾಗಿದ್ದು, 212 ಪುರುಷ ಅಭ್ಯರ್ಥಿಗಳಾಗಿದ್ದಾರೆ. ಅದೇ ರೀತಿಯಾಗಿ ಜಾತಿ ಆಧಾರವಾಗಿ ವಿತರಣೆ ಮಾಡಿದ್ದು, ಸಾಮಾನ್ಯ ವರ್ಗ: 132, ಅಲ್ಪಸಂಖ್ಯಾತರು (ಜೈನ್): 1, ಓಬಿಸಿ: 36, ಎಸ್ಸಿ; 37, ಎಸ್ಟಿ: 18 ಟಿಕೆಟ್ ಹಂಚಿಕೆ ಮಾಡಲಾಗಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಹಣಿಯಲು ವರುಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ, ವಿ ಸೋಮಣ್ಣ ಪರ ಪ್ರಚಾರ
ವೃತ್ತಿವಾರು ವಿಂಗಡಣೆ:
ಇದನ್ನೂ ಓದಿ: Karnataka Assembly Elections 2023: ಚುನಾವಣೆಗೆ ಮತದಾರರು ಗಮನ ಸೆಳೆದ ವಿಷಯಗಳೇನು?
ಬಿಜೆಪಿ ಘೋಷಣೆ ಮಾಡಿರುವ ಟಿಕೆಟ್ ಹಂಚಿಕೆಯಲ್ಲಿ ಯಾವ ಜಾತಿಯವರಿಗೆ ಎಷ್ಟು ಟಿಕೆಟ್ ನೀಡಲಾಗಿದೆ ಎಂಬ ವಿವರ ಹೀಗಿದೆ.
ಬಿಜೆಪಿ ಸದ್ಯ ಹಲವು ಹಿರಿಯ ನಾಯಕರಿಗೆ ಟಿಕೆಟ್ ನಿರಾಕರಿಸಿದೆ. ಜೊತೆಗೆ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿ ಈ ಭಾರಿ 24 ಹಾಲಿ ಶಾಸಕರ ಬದಲಾವಣೆ ಮಾಡಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 5:04 pm, Thu, 20 April 23