Karnataka Polls 2023: ನಾಳೆ ಮತದಾನ, ರಾಜ್ಯಾದ್ಯಂತ ಎಷ್ಟು ಮತಗಟ್ಟೆಗಳಿವೆ? ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ? ಇಲ್ಲಿದೆ ವಿವರ

|

Updated on: May 09, 2023 | 11:06 AM

ರಾಜ್ಯದಲ್ಲಿ ವಿಧಾನಸಭೆ ಎಲೆಕ್ಷನ್​ ಫೈನಲ್​ ಹಂತ ತಲುಪಿದ್ದು, ಮತದಾನಕ್ಕೂ ಕೌಂಟ್​ಡೌನ್​​ ಶುರುವಾಗಿದೆ. ಅತ್ತ ಚುಣಾವಣಾ ಅಧಿಕಾರಿಗಳು ವೋಟಿಂಗ್​​ಗೆ ಸಿದ್ಧತೆ ಮಾಡಿಕೊಂಡಿದೆ. ಹಾಗಾದ್ರೆ, ರಾಜ್ಯದಲ್ಲಿ ಮತಗಟ್ಟೆಗಳು ಎಷ್ಟು? ಭದ್ರತೆ ಹೇಗಿದೆ? ಇಲ್ಲಿದೆ ವಿವರ

Karnataka Polls 2023: ನಾಳೆ ಮತದಾನ, ರಾಜ್ಯಾದ್ಯಂತ ಎಷ್ಟು ಮತಗಟ್ಟೆಗಳಿವೆ? ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ? ಇಲ್ಲಿದೆ ವಿವರ
ಕರ್ನಾಟಕ ಚುನಾವಣೆ
Follow us on

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Elections 2023) ಜಿದ್ದಾಜಿದ್ದಿನ ಅಖಾಡದಲ್ಲಿ ಕಳೆದ 15 ದಿನಗಳಿಂದ ಸಾಗಿದ ಬಿರುಸಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು, ಕಣದಲ್ಲಿರುವ ಅಭ್ಯರ್ಥಿಗಳಿಂದ ಇಂದು(ಮಂಗಳವಾರ) ಮನೆ ಮನೆ ಪ್ರಚಾರ ನಡೆಯಲಿದ್ದು, ನಾಳೆ ಅಂದರೆ ಬುಧವಾರಶ(ಮೇ 10) ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅತ್ತ ಚುಣಾವಣಾ ಅಧಿಕಾರಿಗಳು ಸಹ ವೋಟಿಂಗ್​​ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯೂ ಸಹ ಕಟ್ಟೆಚ್ಚರ ವಹಿಸಿದ್ದು, ರಾಜ್ಯಾದ್ಯಂತ ಮತದಾನಕ್ಕೆ ಒಟ್ಟು 1.56 ಲಕ್ಷ ಪೊಲೀಸರು ಬಿಗಿ ಭದ್ರತೆಗೆ ನಿಯೋಜಿತರಾಗಿದ್ದಾರೆ.

ಇದನ್ನೂ ಓದಿ: Karnataka Polls 2023: ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆ ಹೇಗಿರುತ್ತೆ? ಮತದಾರ ಏನ್ಮಾಡ್ಬೇಕು? ಇಲ್ಲಿದೆ ವಿವರ

ರಾಜ್ಯದ 224 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ 2 ಸಾವಿರದ 615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಲ್ಲರ ಭವಿಷ್ಯವನ್ನು ನಾಳೆ ಮತದಾರ ಪ್ರಭು ಬರೆಯಲಿದ್ದಾನೆ. ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 11,631 ಸೂಕ್ಷ್ಮ ಮತಗಟ್ಟೆಗಳ ಸ್ಥಾಪಿಸಲಾಗಿದ್ದು, 617 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 75,603 ಬ್ಯಾಲೆಟ್ ಯೂನಿಟ್ ಗಳಿದ್ದು, 70,300 ಕಂಟ್ರೋಲ್ ಯೂನಿಟ್‌ಗಳಿವೆ. 76,202 ವಿವಿ ಪ್ಯಾಟ್ ಯೂನಿಟ್‌ಗಳಿವೆ.

ಭದ್ರತೆಗಾಗಿ ಒಟ್ಟು 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ. 304 ಡಿವೈಎಸ್ಪಿಗಳು, 991 ಪಿಐಗಳು, 2610 ಪಿಎಸ್‌ಐಗಳು, 5803 ಎಎಸ್‌ಐಗಳು, 46,421 ಪೊಲೀಸರು, 27,990 ಗೃಹ ರಕ್ಷಕರು ಸೇರಿದಂತೆ 84,119 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಹೊರ ರಾಜ್ಯಗಳಿಂದ 8500 ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ಪಡೆಯಲಾಗಿದೆ. ಕೇಂದ್ರ ಹಾಗೂ ರಾಜ್ಯ ಭದ್ರತಾ ಪಡೆ ಸೇರಿದಂತೆ 8,500 ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದ್ದು, ಒಟ್ಟಾರೆ 1.56 ಲಕ್ಷ ಪೊಲೀಸರು ಮತದಾನದ ದಿನ ಬಂದೋಬಸ್ತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಅವುಗಳಲ್ಲಿ ಬಿಎಎಸ್ ಎಫ್ 108, ಸಿಐಎಸ್ಎಫ್ 75, ಐಟಿಬಿಪಿ 70, ಆರ್ ಪಿಎಫ್-35, ಎಸ್ಎಸ್ ಬಿ 75 ಹಾಗೂ ರಾಜ್ಯದ 224 ಕೆಎಸ್ಆರ್ ಪಿ ತುಕಡಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ನಿಯೋಜನೆಗೊಂಡ ಸಿಬ್ಬಂದಿ, 58, 282 ಮತಗಟ್ಟೆಗಳ ಬಳಿ ನಿಯೋಜಿಸಲಾಗಿದೆ. ಇನ್ನು 11,617 ಸೂಕ್ಷ್ಮ ಮತಗಟ್ಟೆಗಳ ಬಳಿ ಸಿಆರ್ ಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ವಿಶೇಷವಾಗಿ 2930 ಪೊಲೀಸ್ ಮೊಬೈಲ್ ಸೆಕ್ಟರ್ ಗಳ ಕಾರ್ಯಾಚರಣೆ ನಡೆಸಲಿದ್ದಾರೆ. ಒಂದು ಮೊಬೈಲ್ ಸೆಕ್ಟರ್ 20 ಮತಗಟ್ಟೆಗಳನ್ನು ಕವರ್ ಮಾಡಲಿದೆ. ಮೊಬೈಲ್ ಸೆಕ್ಟರ್ ಗಳ ಮೇಲ್ವಿಚಾರಣೆಗೆ 749 ಸೂಪರ್‌ ವೈಸರ್ ಗಳು ನಿಯೋಜನೆ ಮಾಡಲಾಗಿದೆ. 700 ಫೈಯಿಂಗ್ ಸ್ಕ್ವಾಡ್, 700 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಾಗಿ ಕ್ಲಿಕ್ ಮಾಡಿ

Published On - 10:13 am, Tue, 9 May 23