ಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸುವ ಗ್ಯಾರಂಟಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ, ಪ್ರಣಾಳಿಕೆ ಫುಲ್ ವೈರಲ್

ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಪ್ರಣಾಳಿಕೆಗಳನ್ನು ಘೋಷಣೆ ಮಾಡಿದ್ದು, ಇದರಲ್ಲಿ ಕೆಲ ಭರವಸೆಗಳು ಸಾಕಷ್ಟು ಸದ್ದು ಮಾಡುತ್ತಿವೆ. ಅದರಂತೆ ಪಕ್ಷೇತರ ಅಭ್ಯರ್ಥಿಯೊಬ್ಬರು ಬಿಡುಗಡೆ ಮಾಡಿದ ಪ್ರಣಾಳಿಕೆ ಭಾರೀ ಸುದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸುವ ಗ್ಯಾರಂಟಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ, ಪ್ರಣಾಳಿಕೆ ಫುಲ್ ವೈರಲ್
ಪಕ್ಷೇತರ ಅಭ್ಯರ್ಥಿ ಪ್ರಣಾಳಿಕೆ
Follow us
|

Updated on: May 04, 2023 | 1:35 PM

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಅಲ್ಲದೇ ಮತದಾರರನ್ನು ಸೆಳೆಯಲು ತಮ್ಮ ಪಕ್ಷದ ಪ್ರಣಾಳಿಕೆಗಳಲ್ಲಿ(Manifesto) ವಿವಿಧ ಭರವಸೆಗಳನ್ನು ನೀಡಿವೆ. ಕಾಂಗ್ರೆಸ್​ ಸಹ ಹಲವು ಗ್ಯಾರಂಟಿಗಳು ಘೋಷಿಸಿದೆ. ಆದ್ರೆ, ಬಜರಂಗ ದಳ ನಿಷೇಧಿಸುವುದಾಗಿ ಹೇಳಿದ್ದು, ಭಾರೀ ಆಕ್ರೋಶಕ್ಕೆ ಕಾರವಾಗಿದೆ. ಇದರ ಮಧ್ಯೆ ಬೆಳಗಾವಿ (Belagavi) ಜಿಲ್ಲೆಯ ಅರಭಾವಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯ ಪ್ರಣಾಳಿಕೆಯಲ್ಲಿನ independent Candidate Manifesto) ಒಂದು ಭರವಸೆ ಎಲ್ಲರ ಹುಬ್ಬೇರಿಸಿ ನೋಡುವಂತೆ ಮಾಡಿದೆ.

ಇದನ್ನೂ ಓದಿ: Bajrang Dal Row: ಸುದ್ದಿಗೋಷ್ಠಿಯಲ್ಲೇ ಕಾಂಗ್ರೆಸ್​ ಪ್ರಣಾಳಿಕೆ ಪ್ರತಿಯನ್ನು ಸುಟ್ಟುಹಾಕಿದ ಈಶ್ವರಪ್ಪ

ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲೀಕ ಕುಳ್ಳೂರ ವಧು-ವರರ ಮದುವೆ ಭಾಗ್ಯವನ್ನು ಘೋಷಣೆ ಮಾಡಿದ್ದಾರೆ. ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ. ಪಕ್ಷೇತರ ಅಭ್ಯರ್ಥಿಗಳ ಈ ಪ್ರಣಾಳಿಕೆ ಸಾಕಷ್ಟು ಸದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇನ್ನೊಂದು ಅಚ್ಚರಿ ಹಾಗೂ ವಿಶೇಷ ಏನಂದರೆ ಗುರುಪುತ್ರ ಕುಳ್ಳೂರ ಹಾಗೂ ಪುಂಡಲೀಕ ಕುಳ್ಳೂರ ಇಬ್ಬರೂ ಸಹೋದರರು. ಆದ್ರೆ, ಗುರುಪುತ್ರ ಕೆಂಪಣ್ಣ ಕುಳ್ಳೂರ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದದ್ದರೆ, ಪುಂಡಲೀಕ ಕುಳ್ಳೂರ ಗೋಕಾಕ್ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದಾರೆ. ಇದೀಗ ಇವರಿಬ್ಬರ ಪ್ರಣಾಳಿಕೆಯ ಸಾರ್ವಜನಿಕರ ಹುಬ್ಬೇರಿಸಿದೆ. ಅಲ್ಲದೇ ಟ್ರಾಲ್ ಪೇಜ್​ಗಳು ಸಹ ಇದನ್ನು ಇಟ್ಟುಕೊಂಡು ನಾನಾ ರೀತಿಯಲ್ಲಿ ಟ್ರಾಲ್ ಮಾಡುತ್ತಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ