Karnataka Elections Result 2023 Highlights: ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಸಜ್ಜು

ಆಯೇಷಾ ಬಾನು
| Updated By: Rakesh Nayak Manchi

Updated on:May 11, 2023 | 11:04 PM

ಕರ್ನಾಟಕ ವಿಧಾನಸಭಾ ಚುನಾವಣೆ 2023 ಲೈವ್​: ಮತದಾನ ಮುಗಿದ ಬೆನ್ನಲ್ಲೇ ರಾಜಕಾರಣಿಗಳು ರಿಲಾಕ್ಸ್ ಮೂಡಿಗೆ ಜಾರಿದ್ದು ಒಳಗೊಳಗೆ ಅನೇಕ ಸಂಜುಗಳನ್ನು ಮಾಡಲಾಗುತ್ತಿದೆ. ರಾಜಕೀಯದಲ್ಲಾಗುತ್ತಿರುವ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಪಡೆಯಿರಿ.

Karnataka Elections Result 2023 Highlights: ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಸಜ್ಜು
ಸಾಂದರ್ಭಿಕ ಚಿತ್ರ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಯಶಸ್ವಿಯಾಗಿ ಮತದಾನ ನಡೆದಿದೆ. ಮತದಾನ ಮುಗಿಯುತ್ತಿದ್ದಂತೆ ರಾಜಕೀಯ ನಾಯಕರು ರಿಲಾಕ್ಸ್ ಮೂಡ್​ಗೆ ಜಾರಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಸಿಂಗಪೂರ್​ಗೆ ಹಾರಿದ್ದು ಅನೇಕರು ರಿಸಾರ್ಟ್ ಹಾಗೂ ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿದ್ದಾರೆ. ಇನ್ನು ಮತ್ತೊಂದೆಡೆ ಹತ್ತಾರು ಸಂಸ್ಥೆಗಳು ಸಮೀಕ್ಷೆ ನಡೆಸಿದ್ದು, ಹಲವು ಸಮೀಕ್ಷೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆ ಅಂತಾ ಹೇಳಿದ್ರೆ, ಕೆಲವು ಬಿಜೆಪಿಗೆ ಅಧಿಕಾರದ ಗದ್ದುಗೆ ಅಂತಾ ಹೇಳಿವೆ. ಇದ್ರ ನಡುವೆ ನಾಲ್ಕು ಪ್ರಮುಖ ಸಮೀಕ್ಷೆಗಳಲ್ಲಿ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಬರುತ್ತೆ ಅಂತಾ ಭವಿಷ್ಯ ನುಡಿದಿವೆ. 224 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು 113 ಮ್ಯಾಜಿಕ್‌ ನಂಬರ್‌ ಬೇಕು. ಆದ್ರೆ ಯಾವು ಪಕ್ಷ ಕೂಡಾ ಈ ನಂಬರ್‌ ತಲುಪಲ್ಲ ಅಂತಾ ನಾಲ್ಕು ಸಮೀಕ್ಷೆಗಳು ಹೇಳ್ತಿವೆ. ಮತದಾನದ ನಂತರ ರಾಜಕೀಯ ವಲಯದಲ್ಲಾಗುತ್ತಿರುವ ಬೆಳವಣಿಗೆಯ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಡಿಜಿಟಲ್ ಲೈವ್ ನೋಡಿ.

LIVE NEWS & UPDATES

The liveblog has ended.
  • 11 May 2023 09:23 PM (IST)

    Karnataka Elections Result 2023 Live: EVM ಒಡೆದು ಹಾಕಿದ ಯುವಕನ ವಿರುದ್ಧ ಪ್ರಕರಣ ದಾಖಲು

    ಮೈಸೂರು: ಮತದಾನಕ್ಕೆ ಬಂದು ಮತಯಂತ್ರವನ್ನೇ ಒಡೆದು ಹಾಕಿದ್ದ ವ್ಯಕ್ತಿ ವಿರುದ್ಧ ವಿಜಯನಗರ ಠಾಣೆಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಘಟನೆ ಬಗ್ಗೆ ಚುನಾವಣಾ ಆಯೋಗಕ್ಕೆ ಮೈಸೂರು ಜಿಲ್ಲಾಡಳಿತ ವರದಿ ಸಲ್ಲಿಸಿದೆ. ಚಾಮುಂಡೇಶ್ವರಿ ಕ್ಷೇತ್ರದ ಹೂಟಗಳ್ಳಿಯಲ್ಲಿ ನಿನ್ನೆ ನಡೆದಿದ್ದ ಘಟನೆ ಇದಾಗಿದೆ. ಮತಯಂತ್ರದಲ್ಲಿ 543 ಮತ ಚಲಾವಣೆಯಾಗಿತ್ತು. ನಂತರ ಇವಿಎಂ ಬದಲಾಯಿಸಿ ಮತದಾನ ಮುಂದುವರಿಸಲಾಗಿತ್ತು. ಈ ವೇಳೆ ಶಿವಮೋರ್ತಿ ಎಂಬಾತ ಅಧಿಕಾರಿ ಬಳಿ ಇದ್ದ ಮತಯಂತ್ರ ಕಸಿದು ಒಡೆದುಹಾಕಿದ್ದ. ಘಟನೆಯ ದೃಶ್ಯಾವಳಿಗಳು ಮತಗಟ್ಟೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

  • 11 May 2023 08:53 PM (IST)

    Karnataka Elections Result 2023 Live: ಅತಂತ್ರ ಫಲಿತಾಂಶ ಭೀತಿ; ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಳ್ಳಲು ದಳಪಪತಿ ಕಸರತ್ತು

    ರಾಜ್ಯದಲ್ಲಿ ಅತಂತ್ರ ಫಲಿತಾಂಶ ಸಾಧ್ಯತೆ ಹಿನ್ನೆಲೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಮನೆಯಲ್ಲಿ ಕೂತು ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಗೆಲ್ಲುವ ಅಭ್ಯರ್ಥಿಗಳಿಗೆ ದೂರವಾಣಿ ಕರೆ ಮಾಡಿ ಫಲಿತಾಂಶದ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಬೇರೆ ಪಕ್ಷದವರು ಜೆಡಿಎಸ್ ಅಭ್ಯರ್ಥಿ ಸಂಪರ್ಕ ಸಾಧ್ಯತೆ ಹಿನ್ನೆಲೆ ಗೆಲ್ಲುವ ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.

  • 11 May 2023 07:46 PM (IST)

    Karnataka Elections Result 2023 Live: ಆಪರೇಷನ್ ಹಸ್ತದ ಬಗ್ಗೆ ಕಾಂಗ್ರೆಸ್ ನಾಯಕರಿಂದ ಗಂಭೀರ ಪ್ಲ್ಯಾನಿಂಗ್

    ಬೆಂಗಳೂರು: ಆಪರೇಷನ್ ಹಸ್ತದ ಬಗ್ಗೆ ಕಾಂಗ್ರೆಸ್ ನಾಯಕರಿಂದ ಗಂಭೀರ ಪ್ಲ್ಯಾನಿಂಗ್ ಮಾಡಿಕೊಳ್ಳಲಾಗುತ್ತಿದೆ. ಫಲಿತಾಂಶ ಬರುವ ವೇಳೆಗೆ ಸಿದ್ಧತೆ ಮಾಡಿಕೊಳ್ಳಲು ಕಾಂಗ್ರೆಸ್‌ ನಿರ್ಧಾರ ಮಾಡಿದೆ. ಈ ಬಗ್ಗೆ ಖುದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಕೆಲವು ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಜತೆಯೂ ಈ ಸಂಬಂಧ ಚರ್ಚಿಸಿದ್ದಾರೆ. ಫಲಿತಾಂಶ ಬಂದ ಬಳಿಕ ಯಾವುದೇ ಗೊಂದಲ ಮೂಡುವುದು ಬೇಡ. ಫಲಿತಾಂಶ ಬರುವ ವೇಳೆಗೆ ಎಲ್ಲಾ ಸಿದ್ಧತೆ ಆಗಿರಬೇಕು ಎಂದು ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

  • 11 May 2023 06:24 PM (IST)

    Karnataka Elections Result 2023 Live: ಗಲಾಟೆ ಬಗ್ಗೆ ಪ್ರತ್ಯಕ್ಷದರ್ಶಿಯೊಂದಿಗೆ ಬಿಜೆಪಿ ಅಭ್ಯರ್ಥಿ ಸುದ್ದಿಗೋಷ್ಠೆ

    ಮಂಗಳೂರು: ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮರಾಮಾರಿ ವಿಚಾರವಾಗಿ ಪ್ರತ್ಯಕ್ಷದರ್ಶಿ ಕರೆತಂದು ಮೂಡಿಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಸುದ್ದಿಗೋಷ್ಟಿ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರೇ ಕಲ್ಲನ್ನು ಹೊಡೆದಿದ್ದಾರೆ. ಬಿಜೆಪಿ ಕಾರ್ಯಕರ್ತರಿರುವ ಜಾಗದಲ್ಲಿ ಕಲ್ಲೇ ಇರಲಿಲ್ಲ. ಬಿಜೆಪಿ ಕಾರ್ಯಕರ್ತರು ಕಲ್ಲನ್ನು ಹೊಡೆದೇ ಇಲ್ಲ. ಕಾಂಗ್ರೆಸ್ ಕಾರ್ಯಕರ್ತರು ಬಿಸಾಡಿದ ಕಲ್ಲೇಟು ಮಿಥುನ್ ರೈ ಕಾರಿಗೆ ಬಿದ್ದಿದೆ. ಬಿಜೆಪಿ ಕಾರ್ಯಕರ್ತರಿರುವ ಬೂತ್​ನಲ್ಲಿ ಮಿಥುನ್ ರೈ ಕಾರು ನಿಲ್ಲಿಸಿದ್ದು ತಪ್ಪು. ಭಾರತ್ ಮಾತಾ ಕೀ ಜೈ, ಮೋದಿಗೆ ಜೈ ಘೋಷಣೆ ಮಿಥುನ್ ರೈಗೆ ಸಹಿಸಲಾಗಲಿಲ್ಲ. ಗಲಾಟೆ ತಡೆಯಬೇಕಾದವರೇ ಪ್ರಚೋದನೆ ನೀಡಿದ್ದಾರೆ. ಹೊರಗಿನಿಂದ 300 ಜನರನ್ನು ಕರೆಸಿದ್ದರು.  ಅವರು ವಿವಿಧ ಅಸ್ತ್ರಗಳನ್ನಿಟ್ಟುಕೊಂಡು ಬಂದಿದ್ದರು ಎಂದರು.

  • 11 May 2023 06:20 PM (IST)

    Karnataka Elections Result 2023 Live: ಕಾಂಗ್ರೆಸ್ ಪಕ್ಷ ಸ್ವಂತ ಬಲದಲ್ಲಿ ಸರ್ಕಾರ ರಚನೆ ಮಾಡಲಿದೆ: ಎಚ್​ಕೆ ಪಾಟೀಲ್

    ಗದಗ: ಕಾಂಗ್ರೆಸ್ ಪಕ್ಷ ಸ್ವಂತ ಬಲದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದು ಗದಗ ನಗರದಲ್ಲಿ ಕಾಂಗ್ರೆಸ್ ನಾಯಕ ಹೆಚ್​.ಕೆ.ಪಾಟೀಲ್ ಹೇಳಿದ್ದಾರೆ. ಈಗಾಗಲೇ ಮತದಾನೋತ್ತರ ಸಮೀಕ್ಷೆ​ ಮೇಲೆ ಚರ್ಚೆ ಆಗುತ್ತಿದೆ. ಕಾಂಗ್ರೆಸ್ ನಿರೀಕ್ಷೆ ಮಾಡಿರುವ ಸಮೀಪ ಸಮೀಕ್ಷೆ ಬರುತ್ತಿದೆ. ಮೇ 13ರ ಮಧ್ಯಾಹ್ನದ ವೇಳೆಗೆ ಎಲ್ಲವೂ ಸ್ಪಷ್ಟವಾಗಿ ತಿಳಿಯುತ್ತದೆ ಎಂದರು.  ಸಿಎಂ ಸ್ಥಾನದ ಬಗ್ಗೆ ನಾನು ಮಾಧ್ಯಮದ ಮುಂದೆ ಹೆಚ್ಚು ಚರ್ಚೆ ಮಾಡುವುದಿಲ್ಲ ಎಂದರು. ನಿಮ್ಮಗೆ ಉನ್ನತ ಹುದ್ದೆ ಸಿಗುತ್ತಾ‌ ಎನ್ನುವ ಪ್ರಶ್ನೆಗೆ, ನಾನು ಚರ್ಚೆ ಮಾಡುವುದಿಲ್ಲ ಎಂದರು.

  • 11 May 2023 05:24 PM (IST)

    Karnataka Elections Result 2023 Live: ಪಾಳೆಗಾರಿಕೆ ಮಾಡುವವರ ವಿರುದ್ಧ ಕ್ಷೇತ್ರದ ಜನ ಮತ ನೀಡಿದ್ದಾರೆ: ಪ್ರೀತಮ್ ಗೌಡ

    ನನಗೆ ಹಾಸನವೇ ಪ್ರಪಂಚ, ಪ್ರಪಂಚವೇ ಹಾಸನ ಎಂದು ಹಾಸನ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಹೇಳಿದ್ದಾರೆ. ಕಳೆದ ಬಾರಿ ಓರ್ವ ಯುವಕ ಎಂದು ಜನರು ನನ್ನನ್ನು ಗೆಲ್ಲಿಸಿದ್ದರು. ಈ ಬಾರಿ ಒಳ್ಳೆಯ ಅಭಿವೃದ್ಧಿ ಮಾಡುತ್ತಾನೆ ಎಂದು ಮತ ಕೊಟ್ಟಿದ್ದಾರೆ. ಪಾಳೆಗಾರಿಕೆ ಮಾಡುವವರ ವಿರುದ್ಧ ಕ್ಷೇತ್ರದ ಜನ ಮತ ನೀಡಿದ್ದಾರೆ. ಸಕಲೇಶಪುರ, ಬೇಲೂರು ಕ್ಷೇತ್ರದ ಬಿಜೆಪಿ ಗೆಲ್ಲಲಿದೆ. 2018ರ ಸರ್ವೆಯಲ್ಲೂ ಕಾಂಗ್ರೆಸ್ ಮುನ್ನಡೆ ಎಂದೇ ಹೇಳಲಾಗಿತ್ತು. ಆಗಲೂ ಸರ್ವೆ ಸತ್ಯ ಆಗಿಲ್ಲ, ಈಗಲೂ ಸರ್ವೆಗಳು ಸತ್ಯ ಆಗಲ್ಲ. ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.

  • 11 May 2023 05:14 PM (IST)

    Karnataka Elections Result 2023 Live: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ: ಯಡಿಯೂರಪ್ಪ

    ಕರ್ನಾಟಕದಲ್ಲಿ ಮತ್ತೆ ನಾವೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್​​.ಯಡಿಯೂರಪ್ಪ ಹೇಳಿದ್ದಾರೆ. ಕಾಂಗ್ರೆಸ್​​ಗಿಂತ ಹೆಚ್ಚು ಸ್ಥಾನ ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ. ಸಮೀಕ್ಷೆ ಏನೇ ಹೇಳಿದರೂ ಮತ ಎಣಿಕೆ ನಂತರ ಗೊತ್ತಾಗಲಿದೆ. ನಮಗೆ ಸ್ಪಷ್ಟವಾದ ಬಹುಮತ ಸಿಗಲಿದೆ. ಈ ಚುನಾವಣೆಯಲ್ಲಿ ಬಿಜೆಪಿಗೆ 115ಕ್ಕೂ ಹೆಚ್ಚು ಸ್ಥಾನ ಸಿಗಲಿದೆ. ವೀರಶೈವ ಲಿಂಗಾಯತ ಮತಗಳ ವಿಭಜನೆ ಆಗಿಲ್ಲ. ನಾನೇ ಸ್ವಂತ ನಿರ್ಧಾರದಿಂದ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದೇನೆ. ಇದನ್ನು ಸಮುದಾಯ ಅರ್ಥ ಮಾಡಿಕೊಂಡಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಆಗುತ್ತಾರೆ. ಈ ಎಲ್ಲಾ ನಿರ್ಧಾರ ಹೈಕಮಾಂಡ್​ದ್ದು ಎಂದರು.

  • 11 May 2023 05:11 PM (IST)

    Karnataka Elections Result 2023 Live: ಹಾಸನದಲ್ಲಿ ನನ್ನ ಗೆಲುವು ನಿಶ್ಚಿತ: ಸ್ವರೂಪ್

    ಹಾಸನ ಕ್ಷೇತ್ರದಲ್ಲಿ ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿದೆ ಎಂದು ಜೆಡಿಎಸ್​ ಅಭ್ಯರ್ಥಿ ಸ್ವರೂಪ್​ ಹೇಳಿದ್ದಾರೆ. ಎಷ್ಟು ಮತಗಳ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಹೇಳುವುದಿಲ್ಲ. ಒಂದೊಂದು ಮತವೂ ನನಗೆ ಕೋಟಿ ಸಮಾನ. ಒಂದು ಮತದ ಅಂತರದಲ್ಲಿ ಗೆದ್ದರೂ ನಾನು ಖುಷಿಪಡುತ್ತೇನೆ. ಕಾರ್ಯಕರ್ತರ ಶ್ರಮ, ಕುಮಾರುವುದು ಜೆಡಿಎಸ್ ಎಂದರು. ಹಾಸನ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಸ್ವರೂಪ್​ ಹೇಳಿಕೆ

  • 11 May 2023 01:39 PM (IST)

    Karnataka Elections Result 2023 Live: ಕಾರಿನಲ್ಲೇ ರೆಸ್ಟ್ ಮಾಡಿದ ಡಿಕೆ ಶಿವಕುಮಾರ್

    ಡಿಕೆ ಶಿವಕುಮಾರ್ ಜ್ವರದಿಂದ ಬಳಲುತ್ತಿದ್ದು ಇಂದು ಕೊಂಚ ಸಪ್ಪೆಯಾಗಿ ಕಾಣಿಸಿಕೊಂಡಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ನಿವಾಸದಲ್ಲಿ ತಾಯಿಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಹಿಂತಿರುಗುವಾಗ ಕಾರಿನಲ್ಲೇ ವಿಶ್ರಾಂತಿ ಪಡೆದರು.

  • 11 May 2023 01:29 PM (IST)

    Karnataka Elections Result 2023 Live: ಚುನಾವಣೆ ಮುಗಿದ ಬೆನ್ನಲ್ಲೇ ಆಯಿಲ್ ಮಸಾಜ್ ಮಾಡಿಸಿಕೊಂಡ ದೇವರಾಜ ಪಾಟೀಲ್

    ಮತದಾನದ ಬಳಿಕ ರಿಲ್ಯಾಕ್ಸ್ ಮೂಡ್ ಗೆ ತಿರುಗಿದ ಅಭ್ಯರ್ಥಿಗಳು. ಮತದಾನ ಮುಗಿಯುತ್ತಿದ್ದಂತೆ ಬಾಗಲಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ದೇವರಾಜ ಪಾಟೀಲ ಆಯಿಲ್ ಮಸಾಜ್ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಟಿಕೆಟ್ ತಪ್ಪಿದ್ದರಿಂದ ಜೆಡಿಎಸ್ ಗೆ ಹೋಗಿ ಅಭ್ಯರ್ಥಿ ಆಗಿರುವ ಡಾ.ದೇವರಾಜ ಪಾಟೀಲ.

  • 11 May 2023 01:27 PM (IST)

    Karnataka Elections Result 2023 Live: ಸಿದ್ದರಾಮಯ್ಯ ಭೇಟಿಯಾದ ರಣದೀಪ್ ಸಿಂಗ್ ಸುರ್ಜೇವಾಲ

    ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮುಂದಿನ‌ ತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಿದರು.

  • 11 May 2023 01:23 PM (IST)

    Karnataka Elections Result 2023 Live: ಬಿಜೆಪಿಗೆ ಬಹುಮತ ಬರುತ್ತೆ -ಸುನೀಲ್​ ಕುಮಾರ್

    ಸಮೀಕ್ಷೆ ಬಗ್ಗೆ ವಿಶ್ಲೇಷಣೆ ಮಾಡಲ್ಲ, ಬಿಜೆಪಿಗೆ ಬಹುಮತ ಬರುತ್ತೆ ಎಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸುನೀಲ್​ ಕುಮಾರ್​ ಭರವಸೆ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಭಾಗದ ಜನರು ಬಿಜೆಪಿ ಪರ ಒಲವು ತೋರಿದ್ದಾರೆ ಎಂದರು. ಕಾರ್ಕಳ ಕ್ಷೇತ್ರದಲ್ಲಿ ಅಕ್ರಮ ಮತದಾನ ಆರೋಪ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸುನೀಲ್ ಕುಮಾರ್, ಮತಗಟ್ಟೆಯಲ್ಲಿ ಕಾಂಗ್ರೆಸ್​, ಬಿಜೆಪಿ ಏಜೆಂಟರು ಇರುತ್ತಾರೆ. ಸೋಲಿನ ಭೀತಿ, ಹತಾಶೆಯಿಂದ ಕಾಂಗ್ರೆಸ್​ನವರಿಂದ ಆರೋಪ ಮಾಡಲಾಗುತ್ತಿದೆ. ಯಾವುದೇ ಅಹಿತಕರ ಘಟನೆ ಇಲ್ಲದೆ 82% ಮತದಾನವಾಗಿದೆ. ಕ್ಷೇತ್ರದಲ್ಲಿ ಶೇ.82ರಷ್ಟು ಮತದಾನ ಬಿಜೆಪಿಗೆ ವರದಾನವಾಗಲಿದೆ ಎಂದರು.

  • 11 May 2023 01:17 PM (IST)

    Karnataka Elections Result 2023 Live: ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದ್ದರೂ ಮತ ಹಾಕಿಲ್ಲ -ಶೋಭಾ ಕರಂದ್ಲಾಜೆ

    ನಮ್ಮ ವರದಿ ಪ್ರಕಾರ ಬಿಜೆಪಿಗೆ 120-125 ಸ್ಥಾನ ಬರುತ್ತದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸ್ವಂತ ಬಲದಲ್ಲಿ ನಾವೇ ಸರ್ಕಾರ ರಚನೆ ಮಾಡ್ತೇವೆ. ಜನ ಎಕ್ಸಿಟ್ ಪೋಲ್​​ ಸುಳ್ಳು ಮಾಡ್ತಾರೆಂದು ಮೊದಲೇ ಹೇಳಿದ್ದೆ. ಈಗಲೂ ನನಗೆ ಅದೇ ವಿಶ್ವಾಸವಿದೆ. ಬಿ.ಎಸ್​.ಯಡಿಯೂರಪ್ಪನವರ ವರದಿ ಯಾವತ್ತೂ ಸುಳ್ಳಾಗಿಲ್ಲ. ಬೆಂಗಳೂರಿನಲ್ಲಿ 53% ಮಾತ್ರ ಮತದಾನ ಬೇಸರದ ಸಂಗತಿ. ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದ್ದರೂ ಮತ ಹಾಕಿಲ್ಲ. ಮುಂದೆ ಆದರೂ ಬೆಂಗಳೂರಿನ ಜನ‌ ಮತ ಹಾಕಲು ಬರಲಿ ಎಂದರು.

  • 11 May 2023 01:13 PM (IST)

    Karnataka Elections Result 2023 Live: ಕುಟುಂಬ ಸಮೇತ ಕುಕ್ಕೆಗೆ ಭೇಟಿ ನೀಡಿ ಬಲಿ ಪೂಜೆ ಮಾಡಿಸಿದ ಕೆಎಸ್ ಈಶ್ವರಪ್ಪ

    ಕೆ.ಎಸ್. ಈಶ್ವರಪ್ಪ ಕುಟುಂಬ ಸಮೇತ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈಶ್ವರಪ್ಪ ಅವರ ಮಗ ಕಾಂತೇಶ್ ಮತ್ತು ಸೊಸೆಯಿಂದ ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿದರು. ಉರುಳು ಸೇವೆ ಬಳಿಕ ಈಶ್ವರಪ್ಪ ಕುಟುಂಬ ವಿಶ್ಲೇಷ ಬಲಿ ಪೂಜೆ ಮಾಡಿಸಿದರು. ಇದೇ ವೇಳೆ ರಿಷಬ್ ಶೆಟ್ಟಿ ಕೂಡ ದೇವಸ್ಥಾನಕ್ಕೆ ಆಗಮಿಸಿದ್ದು ರಿಷಬ್ ಶೆಟ್ಟಿ ಕೂಡ ಆಶ್ಲೇಷಾ ಬಲಿ, ತುಲಾಭಾರ ಸೇವೆ ಮಾಡಿಸಿದರು.

  • 11 May 2023 01:08 PM (IST)

    Karnataka Elections Result 2023 Live: ತಾಯಿ ಭೇಟಿ ಮಾಡಿದ ಡಿಕೆ ಸಹೋದರರು

    ರಿಲಾಕ್ಸ್ ಮೂಡಿಸಲ್ಲಿ ಡಿಕೆ ಸಹೋದರರು. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ನಿವಾಸದಲ್ಲಿ ತಾಯಿ ಗೌರಮ್ಮ ಅವರನ್ನ ಭೇಟಿ ಮಾಡಿ ತಾಯಿಯ ಆರೋಗ್ಯ ವಿಚಾರಿಸಿದ ಡಿಕೆಶಿ.

  • 11 May 2023 01:01 PM (IST)

    Karnataka Elections Result 2023 Live: ಕಾಂಗ್ರೆಸ್ ಗೆಲ್ಲುತ್ತೆ ಎಂದು 3 ಲಕ್ಷ ಬೆಟ್ಟಿಂಗ್

    ಚುನಾವಣೆ ಮುಗಿಯುತ್ತಿದ್ದಂತೆ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಮಲ್ಲಯ್ಯನಪುರದಲ್ಲಿ ವ್ಯಕ್ತಿಯೊಬ್ಬ ಬೆಟ್ಟಿಂಗ್ ಗೆ ಆಹ್ವಾನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಾಂಗ್ರೆಸ್ ಗೆಲ್ಲುತ್ತೆ ಎಂದು 3 ಲಕ್ಷ ಬೆಟ್ ಕಟ್ಟಲು ಮುದ್ದರಾಮೇಗೌಡ ಎಂಬ ವ್ಯಕ್ತಿ ಬಿಜೆಪಿಯವರಿಗೆ ಆಹ್ವಾನ ನೀಡಿದ್ದಾನೆ.

  • 11 May 2023 12:01 PM (IST)

    Karnataka Elections Result 2023 Live: ಹೆಚ್​.ಡಿ.ಕುಮಾರಸ್ವಾಮಿ ಅವರೇ ಕಿಂಗ್​ ಮೇಕರ್​ ಆಗುತ್ತಾರೆ -ಡಾ.ದೇವರಾಜ ಪಾಟೀಲ

    ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಆಗೋದು ಗ್ಯಾರಂಟಿ ಎಂದು ಬಾಗಲಕೋಟೆ JDS ಅಭ್ಯರ್ಥಿ ಡಾ.ದೇವರಾಜ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೆಚ್​.ಡಿ.ಕುಮಾರಸ್ವಾಮಿ ಅವರೇ ಕಿಂಗ್​ ಮೇಕರ್​ ಆಗುತ್ತಾರೆ. ರಾಜ್ಯದ ಜನರು ಪ್ರಾದೇಶಿಕ ಪಕ್ಷಕ್ಕೆ ಆದ್ಯತೆ ಕೊಡುತ್ತಿದ್ದಾರೆ. ಹೆಚ್​.ಡಿ.ಕುಮಾರಸ್ವಾಮಿ ಬಗ್ಗೆ ಜನರಿಗೆ ಒಲವು ಜಾಸ್ತಿ ಇದೆ ಎಂದರು.

  • 11 May 2023 11:59 AM (IST)

    Karnataka Elections Result 2023 Live: ಕೆ.ಎಸ್​​.ಈಶ್ವರಪ್ಪ ವಿರುದ್ಧ ಆಯನೂರು ಮಂಜುನಾಥ್ ವಾಗ್ದಾಳಿ

    ರಾಜ್ಯದಲ್ಲಿ ಈ ಬಾರಿ ಅತಂತ್ರ ಫಲಿತಾಂಶ ಬರಲಿದೆ ಎಂದು ಶಿವಮೊಗ್ಗ ನಗರ JDS ಅಭ್ಯರ್ಥಿ ಆಯನೂರು ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ ರಚನೆಯಲ್ಲಿ ಜೆಡಿಎಸ್ ಪಕ್ಷ ಪ್ರಮುಖ ಪಾತ್ರ ವಹಿಸಲಿದೆ. ಶಿವಮೊಗ್ಗ ನಗರದಲ್ಲಿ ಜೆಡಿಎಸ್ ಗೆದ್ದು ಇತಿಹಾಸ ಸೃಷ್ಟಿ ಮಾಡಲಿದೆ. ಶಾಂತಿ ಸೌಹಾರ್ದತೆ, ಅಭಿವೃದ್ಧಿ ಮೇಲೆ ಚುನಾವಣೆ ಮಾಡಿದ್ದೇವೆ. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ನನಗೆ ಸಹಾಯ ಮಾಡಿದ್ದಾರೆ. ಹೊಸ ಇತಿಹಾಸದ ಪುಟ ತೆರೆಯುವ ವಿಶ್ವಾಸ ಇದೆ. ಬಿಎಸ್​ವೈರನ್ನು ಜಾತಿಗೆ ಸೀಮಿತ ಮಾಡಿ ಅಪಚಾರ ಮಾಡಿದ್ದಾರೆ. ಕೆ.ಎಸ್​.ಈಶ್ವರಪ್ಪಗೆ ಯಾವುದೇ ಸಾಮರ್ಥ್ಯ ಇಲ್ಲ. ಕೆ.ಎಸ್​​.ಈಶ್ವರಪ್ಪಗೆ ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸುವ ಶಕ್ತಿ ಇಲ್ಲ ಎಂದು ಕೆ.ಎಸ್​​.ಈಶ್ವರಪ್ಪ ವಿರುದ್ಧ ಆಯನೂರು ಮಂಜುನಾಥ್ ವಾಗ್ದಾಳಿ ನಡೆಸಿದರು.

  • 11 May 2023 11:56 AM (IST)

    Karnataka Elections Result 2023 Live: ಕಾರ್ಯಕರ್ತರಿಗೆ ಸಿದ್ದರಾಮಯ್ಯ ವಿಶೇಷ ಮನವಿ

    ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ. ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

  • 11 May 2023 11:53 AM (IST)

    Karnataka Elections Result 2023 Live: ಡಿಕೆಶಿ, ಸಿದ್ದರಾಮಯ್ಯರನ್ನು ಹಾಡಿಹೊಗಳಿದ ಕೃಷ್ಣಭೈರೇಗೌಡ

    ಸಿದ್ದರಾಮಯ್ಯ ಜನರ ಮನ್ನಣೆಯನ್ನು ಪಡೆದುಕೊಂಡಿದ್ದಾರೆ. ಸಮೀಕ್ಷೆಗಳಲ್ಲಿ ಸಿದ್ದರಾಮಯ್ಯ ಹೆಸರೇ ಮುಂಚೂಣಿಯಲ್ಲಿತ್ತು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅತ್ಯುತ್ತಮ ಆಡಳಿತ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸಂಘಟನೆ ಮಾಡಿದವರು. ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಪಕ್ಷಕ್ಕಾಗಿ ಡಿಕೆಶಿ ಕೆಲಸ ಮಾಡಿದ್ದಾರೆ. ಡಿಕೆಶಿ, ಸಿದ್ದರಾಮಯ್ಯ ಇಬ್ಬರೂ ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ. ಇಬ್ಬರಿಗೂ ಅವಕಾಶ ಸಿಗಬೇಕು ಎಂಬುದು ಎಲ್ಲರ ಅಭಿಪ್ರಾಯ. ಕಾರ್ಯಕರ್ತರು, ಶಾಸಕರು, ಜನರ ಅಭಿಪ್ರಾಯ ಇದೇ ಆಗಿದೆ ಎಂದು ಡಿಕೆಶಿ, ಸಿದ್ದರಾಮಯ್ಯರನ್ನು ಕೃಷ್ಣಭೈರೇಗೌಡ ಹಾಡಿಹೊಗಳಿದರು.

  • 11 May 2023 11:51 AM (IST)

    Karnataka Elections Result 2023 Live: ಉತ್ತರ ಕರ್ನಾಟಕದವರೇ ಸಿಎಂ ಆದರೂ ಅಭಿವೃದ್ಧಿ ಮಾಡಿಲ್ಲ -ಜಗದೀಶ್​ ಶೆಟ್ಟರ್

    ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಜನರಿಗೆ ಬೇಸರ ಮೂಡಿಸಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡೇ ಟು ಡೇ ರಾಜ್ಯ ಸರ್ಕಾರದ ಆಡಳಿತವನ್ನು ಜನ ನೋಡುತ್ತಾರೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪಲಿಲ್ಲ. ಮೀಸಲಾತಿ ಅನುಷ್ಠಾನ ಮಾಡಲ್ಲ ಅಂತಾ ಕೋರ್ಟ್​ಗೆ ಹೇಳಿದ್ರು. ಉತ್ತರ ಕರ್ನಾಟಕದವರೇ ಸಿಎಂ ಆದರೂ ಅಭಿವೃದ್ಧಿ ಮಾಡಿಲ್ಲ. ಸಿಎಂ ಬೊಮ್ಮಾಯಿ ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿಲ್ಲ. ಮುಖ್ಯಮಂತ್ರಿಗೆ ವಿಲ್ ಪವರ್​ ಬೇಕು. ಮುಖ್ಯಮಂತ್ರಿಗೆ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಇಲ್ಲ. ನಾನು ಲೆಕ್ಕಾಚಾರ ಮಾಡಿದ್ದಕ್ಕಿಂತ ಹೆಚ್ಚು ಬೆಂಬಲ ಸಿಕ್ಕಿದೆ. ಗೆಲುವಿನ ಅಂತರ ಕಳೆದ ಬಾರಿಗಿಂತ ಹೆಚ್ಚಾಗಲಿದೆ ಎಂದು ಜಗದೀಶ್​ ಶೆಟ್ಟರ್ ತಿಳಿಸಿದರು.

  • 11 May 2023 11:47 AM (IST)

    Karnataka Elections Result 2023 Live: ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಸಿಎಂ ಭೇಟಿ

    ಮತದಾನ ಮುಗಿಯುತ್ತಿದ್ದಂತೆ ಬೆಳಗಾವಿ ಜಿಲ್ಲೆ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಪತ್ನಿ ಚೆನ್ನಮ್ಮ ಜತೆ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಿ.ಸಿ.ಪಾಟೀಲ್​ ಸಾಥ್​​ ನೀಡಿದರು.

  • 11 May 2023 11:22 AM (IST)

    Karnataka Elections Result 2023 Live: ಸರ್ಕಾರ ರಚನೆ ಮಾಡಲು ಮಾನಸಿಕವಾಗಿ ಸಿದ್ಧರಾಗಿದ್ದೇವೆ -ಡಾ.ಪರಮೇಶ್ವರ್

    ಸರ್ಕಾರ ರಚನೆ ಮಾಡಲು ಮಾನಸಿಕವಾಗಿ ಸಿದ್ಧರಾಗಿದ್ದೇವೆ ಎಂದು ತುಮಕೂರಿನಲ್ಲಿ ಮಾಜಿ ಡಿಸಿಎಂ ಡಾ.ಪರಮೇಶ್ವರ್​ ತಿಳಿಸಿದ್ದಾರೆ. 2013ರಲ್ಲಿ ನಾನು 120 ಸ್ಥಾನ ಬರುವ ಮುನ್ಸೂಚನೆ ಕೊಟ್ಟಿದ್ದೆ, ಆದರೆ ನಾವು 122 ಸ್ಥಾನ ಗೆದ್ದಿದ್ದೆವು. ಈಗ ನಾನು 130 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೇನೆ. ನನ್ನ ಲೆಕ್ಕಾಚಾರ ಸರಿ ಆಗಬಹುದು. ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜವಾಗುವುದಿಲ್ಲ. ಕೆಲವೊಮ್ಮೆ ಸರ್ವೆ ನಿಜವಾಗಿದೆ, ಕೆಲವವೊಮ್ಮೆ ಸುಳ್ಳಾಗಿದೆ. ಆದ್ರೂ ಮತದಾನೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುಂದಿದೆ. ಕಾಂಗ್ರೆಸ್ ಪರ ಅಲೆ ಇರೋದು ಸಾಬೀತಾಗಿದೆ. ವರುಣದಲ್ಲಿ ಯಾವುದೇ ತೊಂದರೆ ಇಲ್ಲದೆ ಸಿದ್ದರಾಮಯ್ಯ ಗೆಲ್ತಾರೆ. ಕೊರಟಗೆರೆ ಕ್ಷೇತ್ರದಲ್ಲಿ ನಾನು ಹೆಚ್ಚಿನ ಮತ ಪಡೆದು ಗೆಲ್ಲುತ್ತೇನೆ ಎಂದು ಮಾಜಿ ಡಿಸಿಎಂ ಡಾ.ಪರಮೇಶ್ವರ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • 11 May 2023 11:19 AM (IST)

    Karnataka Elections Result 2023 Live: ತಿಂಡಿ ಸವಿದ ಡಿಕೆ ಬ್ರದರ್ಸ್

    ಕನಕಪುರದ ವಾಸು ಹೋಟಲ್​ನಲ್ಲಿ ಡಿ‌ಕೆ ಶಿವಕುಮಾರ್, ಡಿಕೆ ಸುರೇಶ್ ಒಟ್ಟಿಗೆ ‌ತಿಂಡಿ ಸವಿದರು.

  • 11 May 2023 11:15 AM (IST)

    Karnataka Elections Result 2023 Live: ಮೈಸೂರಿ‌ನಲ್ಲಿ ಬೆಟ್ಟಿಂಗ್ ಭರಾಟೆ

    ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಕಂತೆ ಕಂತೆ ಹಣ ಕೈ ಯಲ್ಲಿ ಹಿಡಿದು ಬೆಟ್ಟಿಂಗ್ ನಡೆಸಲಾಗುತ್ತಿದೆ. ಕೆ.ಆರ್ ನಗರದ ಕೈ ಅಭ್ಯರ್ಥಿ ಡಿ.ರವಿಶಂಕರ್ ಪರವಾಗಿ ಬೆಟ್ಟಿಂಗ್ ಕಟ್ಟಲು ಯುವಕ ಮುಂದಾಗಿದ್ದು ಯುವಕ‌ ತನ್ನ ಕೈಯಲ್ಲಿ ಕಂತೆ ಕಂತೆ ಹಣ ಹಿಡಿದುಕೊಂಡಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

  • 11 May 2023 11:11 AM (IST)

    Karnataka Elections Result 2023 Live: ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ -ಸಿಎಂ

    ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್​ ಪರವೇ ಹೇಳಿದ್ದವು. ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನ ಅಂತಾ ಹೇಳಿದ್ದವು. ಆದರೆ ಚುನಾವಣಾ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • 11 May 2023 11:09 AM (IST)

    Karnataka Elections Result 2023 Live: ಬಿಜೆಪಿ ನಾಯಕ ಸಿ.ಟಿ.ರವಿ ತಡರಾತ್ರಿ ಆಸ್ಪತ್ರೆಗೆ ದಾಖಲು

    ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ ರವಿ (CT Ravi) ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ‌ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದ ಸಿ.ಟಿ ರವಿ, ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು.

  • Published On - May 11,2023 11:03 AM

    Follow us
    ‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
    ‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
    Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
    Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
    Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
    Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
    ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
    ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
    ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
    ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
    ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
    ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
    ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
    ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
    ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
    ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
    5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
    5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
    ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
    ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ