AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSY Reaction: ಮನೆಮನೆಗೆ ಹೋಗಿ ಕೊಟ್ಟ ಗ್ಯಾರಂಟಿ ಈಡೇರಿಸಿ: ಕಾಂಗ್ರೆಸ್​ಗೆ ಯಡಿಯೂರಪ್ಪ ಒತ್ತಾಯ

Karnataka Assembly Elections 2023 Results: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಲಿ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಆಗ್ರಹಸಿದ್ದಾರೆ.

BSY Reaction: ಮನೆಮನೆಗೆ ಹೋಗಿ ಕೊಟ್ಟ ಗ್ಯಾರಂಟಿ ಈಡೇರಿಸಿ: ಕಾಂಗ್ರೆಸ್​ಗೆ ಯಡಿಯೂರಪ್ಪ ಒತ್ತಾಯ
ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಬಿಎಸ್​ವೈ ಇಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2023 | 2:43 PM

Share

ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023 Results) ಕಾಂಗ್ರೆಸ್ ಪಕ್ಷ ಭರ್ಜರಿ ಫಲಿತಾಂಶ ಪಡೆದಿದೆ. ಬಹುತೇಕ ಚುನಾವಣಾ ಸಮೀಕ್ಷೆ ಮತ್ತು ಮತಗಟ್ಟೆ ಸಮೀಕ್ಷೆಗಳನ್ನು ಮೀರಿ ಕಾಂಗ್ರೆಸ್ ನಿಚ್ಚಳ ಬಹುಮತ ಪಡೆದಿದೆ. ಇದೇ ವೇಳೆ ಈ ಚುನಾವಣಾ ಫಲಿತಾಂಶದ ಬಗ್ಗೆ ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ಮುಖಂಡ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಪಕ್ಷ ಈ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳುತ್ತದೆ ಎಂದಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿಪರ ಕೆಲಸಗಳನ್ನು ಮಾಡಿದೆ. ಆದರೂ ಪಕ್ಷ ಸೋತಿದೆ. ಸೋಲಿಗೆ ಕಾರಣ ಗೊತ್ತಿಲ್ಲ. ಒಂದು ದಿನವೂ ವಿರಮಿಸಿದೆ ಚುನಾವಣಾ ಪ್ರಚಾರಗಳಲ್ಲಿ ಪಾಲ್ಗೊಂಡಿದ್ದೆವು. ಮುಂದಿನ ದಿನಗಳಲ್ಲಿ ಸೋಲಿಗೆ ಆತ್ಮ ವಿಮರ್ಶೆ ಮಾಡಿಕೊಳ್ಳುತ್ತೇವೆ ಎಂದಿರುವ ಯಡಿಯೂರಪ್ಪ, ರಾಜ್ಯದ ಅಭಿವೃದ್ಧಿಗೆ ಪಕ್ಷದ ಸಹಕಾರ ಇರುತ್ತದೆ ಎಂದಿದ್ದಾರೆ. ಹಾಗೆಯೇ, ರಾಜ್ಯದ ಮತದಾರರಿಗೂ ಯಡಿಯೂರಪ್ಪ ಅಭಿನಂದನೆ ಹೇಳಿದ್ದಾರೆ.

ಕೊಟ್ಟ ಭರವಸೆ ಈಡೇರಿಸಿ: ಕಾಂಗ್ರೆಸ್​ಗೆ ಯಡಿಯೂರಪ್ಪ ಒತ್ತಾಯ

ಇದೇ ವೇಳೆ, ಬಹುಮತ ಗಳಿಸಿ ಸರ್ಕಾರ ರಚಿಸಲಿರುವ ಕಾಂಗ್ರೆಸ್ ಪಕ್ಷಕ್ಕೆ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ವಿರೋಧ ಪಕ್ಷವಾಗಿ ಸಹಕಾರ ಕೊಡುತ್ತದೆ ಎಂದು ಯಡಿಯೂರಪ್ಪ ಹೇಳಿದ್ಧಾರೆ. ಹಾಗೆಯೇ, ಮನೆಮನೆಗೆ ಹೋಗಿ ಕಾಂಗ್ರೆಸ್ ಪಕ್ಷದವರು ಹಲವು ಗ್ಯಾರಂಟಿಗಳನ್ನು ಕೊಟ್ಟಿದ್ದಾರೆ. ಈ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ.

ಇನ್ನು, ಲೋಕಸಭಾ ಚುನಾವಣೆಗೂ ಈ ಫಲಿತಾಂಶಕ್ಕೂ ಸಂಬಂಧ ಇಲ್ಲ ಎಂದು ಬಿಎಸ್​ವೈ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ 2 ಕ್ಷೇತ್ರದಿಂದ ಬೆಳೆದು ಈಗ ಸ್ವಂತವಾಗಿ ಅಧಿಕಾರಕ್ಕೆ ಹಿಡಿಯುವ ಮಟ್ಟಕ್ಕೆ ಏರಿದೆ. ಈಗ ಸೋಲಾದರೂ ಲೋಕಸಭಾ ಚುನಾವಣೆಯಲ್ಲಿ ಹಿಂದಿನಂತೆ 25 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು