AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವವರಿಗೆ ಇಂದು ನಾಮಪತ್ರ ಸಲ್ಲಿಸಲು ಕೊನೆ ದಿನ. ಇಂದು ವರ್ಷದ ಮೊದಲ ಸೂರ್ಯಗ್ರಹಣ ಹಾಗೂ ಅಮವಾಸ್ಯೆ ಕೂಡ. ಹೀಗಾಗಿ ಆಚಾರ ವಿಚಾರಗಳನ್ನು ಪಾಲಿಸುವವರು, ನಂಬುವ ಬಹುತೇಕ ಮಂದಿ ಬುಧವಾರವೇ ನಾಮಪತ್ರ ಸಲ್ಲಿಸಿದ್ದಾರೆ.

Karnataka Assembly Elections 2023: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ
ಕಾಂಗ್ರೆಸ್​, ಜೆಡಿಎಸ್​, ಬಿಜೆಪಿ
ಆಯೇಷಾ ಬಾನು
|

Updated on:Apr 20, 2023 | 9:59 AM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಸ್ಪರ್ಧಿಸುವವರಿಗೆ ಇಂದು ನಾಮಪತ್ರ ಸಲ್ಲಿಸಲು ಕೊನೆ ದಿನ. ಹೀಗಾಗಿ ಬಹುತೇಕ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಿಸಿವೆ. ಅದರಲ್ಲೂ ಏಪ್ರಿಲ್ 20ರಂದು ವರ್ಷದ ಮೊದಲ ಅಮವಾಸ್ಯೆ ಹಿನ್ನೆಲೆ ಆಚಾರ-ವಿಚಾರ ಪಾಲಿಸುವ ಬಹುತೇಕ ಅಭ್ಯರ್ಥಿಗಳು ಏಪ್ರಿಲ್ 19ರ ಬುಧವಾರದಂದೇ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಕೊನೆಯ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಕೂಡ ಅನೇಕ ಪ್ರಮುಕ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ 21ರಿಂದ ನಾಮಪತ್ರಗಳ ಪರಿಶೀಲನೆ ನಡೆಯುತ್ತೆ. ಬಳಿಕ ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ.

ಗುರುವಾರ (ಏಪ್ರಿಲ್ 20) ವರ್ಷದ ಮೊದಲ ಸೂರ್ಯಗ್ರಹಣ ಹಾಗೂ ಅಮವಾಸ್ಯೆ ಕೂಡ. ಹೀಗಾಗಿ ಆಚಾರ ವಿಚಾರಗಳನ್ನು ಪಾಲಿಸುವವರು, ನಂಬುವ ಬಹುತೇಕ ಮಂದಿ ಬುಧವಾರವೇ ನಾಮಪತ್ರ ಸಲ್ಲಿಸಿದ್ದಾರೆ. ಆದ್ರೆ ಕಡೆಗಳಿಗೆಯಲ್ಲಿ ಟಿಕೆಟ್ ಘೋಷಣೆಯಾದವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಂಜೆ 4 ಗಂಟೆಗೆ ನಿಪ್ಪಾಣಿ ತಹಶೀಲ್ದಾರ್ ಕಚೇರಿಗೆ ತೆರಳಿ ನಿಪ್ಪಾಣಿ ಬಿಜೆಪಿ ಅಭ್ಯರ್ಥಿ ಸಚಿವೆ ಶಶಿಕಲಾ‌ ಜೊಲ್ಲೆ ‌ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಸಂಜೆ 5ಕ್ಕೆ ಬೃಹತ್ ಪ್ರಚಾರ ಸಭೆ ನಡೆಸಲಿದ್ದಾರೆ. ಕೆ.ಆರ್.ಪುರಂ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು, ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಸಿ.ಶ್ರೀನಿವಾಸ್, ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿ ಡಾ.ಬಿ.ಸಿ.ಮುದ್ದು ಗಂಗಾಧರ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಿನ್ನೆ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ: ಅಂತಿಮ ಪಟ್ಟಿಯಲ್ಲಿ ಯಾರಿಗೆಲ್ಲ ಸಿಕ್ತು ಟಿಕೆಟ್? ಇಲ್ಲಿದೆ ವಿವರ

ಚಿಕ್ಕನಾಯಕನಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಕಿರಣ್ ಕುಮಾರ್, ಗುಬ್ಬಿ ಬಿಜೆಪಿ ಅಭ್ಯರ್ಥಿ ದಿಲೀಪ್ ಕುಮಾರ್, ಕುಣಿಗಲ್ ಬಿಜೆಪಿ ಅಭ್ಯರ್ಥಿ ಡಿ ಕೃಷ್ಣ ಕುಮಾರ್, ತುರುವೇಕೆರೆ ಜೆಡಿಎಸ್ ಅಭ್ಯರ್ಥಿ ಎಮ್ ಟಿ ಕೃಷ್ಣಪ್ಪ, ಶಿರಾ ಜೆಡಿಎಸ್ ಅಭ್ಯರ್ಥಿ ಆರ್ ಉಗ್ರೇಶ್, ಮಧುಗಿರಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ರಾಜಣ್ಣ, ತುರುವೇಕೆರೆ ಬಿಜೆಪಿ ಅಭ್ಯರ್ಥಿ ಮಸಾಲ ಜಯರಾಂ, ಕುಣಿಗಲ್ ಜೆಡಿಎಸ್ ಅಭ್ಯರ್ಥಿ ಡಿ ನಾಗರಾಜಯ್ಯ, ತುಮಕೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಷಣ್ಮುಖಪ್ಪ ಯಾದವ್‌ ಸೇರಿದಂತೆ ಅನೇಕರು ಆಯಾ ತಾಲೂಕು ಚುನಾವಣಾಧಿಕಾರಿಗಳಿಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಸಂಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ, ಬಳ್ಳಾರಿ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅನಿಲ್ ಲಾಡ್, ಹೂವಿನಹಡಗಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣಾ ನಾಯ್ಕ್, ಹಗರಿಬೊಮ್ಮನಹಳ್ಳಿ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ನೇಮಿರಾಜ ನಾಯ್ಕ್ ಸೇರಿ ಬಳ್ಳಾರಿ ಜಿಲ್ಲೆಯಲ್ಲಿಂದು ವಿವಿಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಹಾಗೂ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ, ಕೆ ಆರ್ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಾ ರಾ ಮಹೇಶ್, ಟಿ ನರಸೀಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್ ಸಿ ಮಹದೇವಪ್ಪ ಸೇರಿದಂತೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಕೆ ಜೋರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 9:58 am, Thu, 20 April 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ