Karnataka Elections 2023: ಕರ್ನಾಟಕ ವಿಧಾನಸಭೆಗೆ ಇಂದು ಮತದಾನ, ಸಮಯ, ಫಲಿತಾಂಶದ ದಿನಾಂಕ ಇತರೆ ಮಾಹಿತಿ ಇಲ್ಲಿದೆ

Karnataka Election 2023 Voting Date and Time: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು, ಚುನಾವಣೆಯ ಸಂಪೂರ್ಣ ವೇಳಾಪಟ್ಟಿ, ಮತದಾರರ ಮಾಹಿತಿ, ಮತದಾನ ಕೇಂದ್ರಗಳು ಹೀಗೆ ಇತ್ಯಾದಿ ಮಾಹಿತಿ ಇಲ್ಲಿದೆ.

Karnataka Elections 2023: ಕರ್ನಾಟಕ ವಿಧಾನಸಭೆಗೆ ಇಂದು ಮತದಾನ, ಸಮಯ, ಫಲಿತಾಂಶದ ದಿನಾಂಕ ಇತರೆ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
| Updated By: ರಮೇಶ್ ಬಿ. ಜವಳಗೇರಾ

Updated on:May 10, 2023 | 6:12 AM

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election 2023) ಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಇಂದು ಅಂದರೆ ಮೇ 10 ರಂದು 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಹಿನ್ನೆಲೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಸಹ ಮಾಡಿಕೊಂಡಿದೆ. ಕರ್ನಾಟಕ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ವಿಜೇತ ಪಕ್ಷವು 113 ಸ್ಥಾನಗಳನ್ನು ಹೊಂದುವುದು ಅಗತ್ಯವಾಗಿದೆ. ಪರಿಶಿಷ್ಟ ಜಾತಿಗಳಿಗೆ (ಎಸ್ಸಿ) 36 ಸ್ಥಾನಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್ಟಿ) 15 ಸ್ಥಾನಗಳನ್ನು ಕಾಯ್ದಿರಿಸಲಾಗಿದೆ. ಬಿಜೆಪಿ 199, ಕಾಂಗ್ರೆಸ್ 75 ಮತ್ತು ಜೆಡಿಎಸ್ 28 ಸ್ಥಾನಗಳನ್ನು ಹೊಂದಿವೆ.

ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಮತ್ತು ಪ್ರಣಾಳಿಕೆಗಳನ್ನು ಈಗಾಗಲೇ ಬಿಡುಗಡೆ ಮಾಡಿವೆ. ಏಕರೂಪ ನಾಗರಿಕ ಸಂಹಿತೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಅನುಷ್ಠಾನದ ಭರವಸೆಯನ್ನು ಬಿಜೆಪಿ ನೀಡಿದೆ. ಕರ್ನಾಟಕದ ಜನರಿಗೆ ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಯುವ ನಿಧಿ ಮತ್ತು ಶಕ್ತಿ  ಸೇರಿದಂತೆ ಐದು ಭರವಸೆಗಳನ್ನು ಕಾಂಗ್ರೆಸ್​​ ನಾಯಕರು ಘೋಷಿಸಿದ್ದಾರೆ. ಪಂಚರತ್ನ ಯೋಜನೆಯನ್ನು ಜೆಡಿಎಸ್​ ತಿಳಿಸಿದೆ.

ಇದನ್ನೂ ಓದಿ: Karnataka Polling Booth: ಕರ್ನಾಟಕ ವಿಧಾನಸಭಾ ಚುನಾವಣಾ ಮತಗಟ್ಟೆ ವಿವರಗಳನ್ನು ತಿಳಿಯುವುದು ಹೇಗೆ?

ಕರ್ನಾಟಕ ಚುನಾವಣಾ ವೇಳಾಪಟ್ಟಿ

  • ನಾಮಪತ್ರ ಸಲ್ಲಿಕೆ ಆರಂಭ:                        ಏಪ್ರಿಲ್‌ 13, 2023
  • ನಾಮಪತ್ರ ಸಲ್ಲಿಕೆಗೆ ಕೊನೆ ದಿನ:                 ಏಪ್ರಿಲ್‌ 20, 2023
  • ನಾಮಪತ್ರ ಪರಿಶೀಲನೆ:                               ಏಪ್ರಿಲ್‌ 21, 2023
  • ನಾಮಪತ್ರ ಹಿಂಪಡೆಯಲು ಕೊನೆ ದಿನ:    ಏಪ್ರಿಲ್‌ 24, 2023
  • ಮತದಾನ:                                                   ಮೇ 10, 2023
  • ಫಲಿತಾಂಶ:                                                  ಮೇ 13, 2023
  • ಚುನಾವಣೆ ಪ್ರಕ್ರಿಯೆ ಮುಕ್ತಾಯ:               ಮೇ 15, 2023

ಮತದಾರರ ವಿವರ

ಸೋಮವಾರ, ಮೇ 1 ರಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ರಾಜ್ಯದ ಚುನಾವಣಾ ವ್ಯವಸ್ಥೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸಿದ್ದಾರೆ. ಚುನಾವಣಾ ಆಯೋಗದ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 5,21,73,579 ಕೋಟಿ ಮತದಾರರಿದ್ದಾರೆ. ಅವರಲ್ಲಿ 2.62 ಕೋಟಿ ಪುರುಷರು ಮತ್ತು 2.59 ಕೋಟಿ ಮಹಿಳೆಯರು.

ಇದನ್ನೂ ಓದಿ: ನಿಮ್ಮ ವೋಟರ್​​ ಐಡಿ ತಿದ್ದುಪಡಿ, ಹೆಸರು ಬದಲಾವಣೆ ಮಾಡಿಸುವುದು ಹೇಗೆ? ಇಲ್ಲಿದೆ ಮಾಹಿತಿ

ತೃತೀಯ ಲಿಂಗಿ 4,669, ಶತಾಯುಷಿ 16,976, 80 ವರ್ಷ ಮೇಲ್ಪಟ್ಟವರು 12,15,763, ವಿಶೇಷ ಚೇತನರು 5,55,073, ಸೇವಾ 47,779 ಮತ್ತು 9,17,241 ಮೊದಲ ಬಾರಿಯ ಮತದಾರರಾಗಿದ್ದಾರೆ. ಇದಲ್ಲದೆ, ರಾಜ್ಯಾದ್ಯಂತ ಒಟ್ಟು 58,282 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಈ ದಾಖಲೆಗಳ ಮೂಲಕವೂ ಮತದಾನ ಮಾಡಬಹುದು

1) ಪಾಸ್ಪೋರ್ಟ್

2) ಚಾಲನಾ ಪರವಾನಗಿ

3) ಕೇಂದ್ರ/ರಾಜ್ಯ ಸರ್ಕಾರದ ಹಾಗೂ ಅರೆ ಸರ್ಕಾರಿ ಮತ್ತು ಸಾರ್ವಜನಿಕ ಸ್ವಾಮ್ಯದ ಪಿಎಸ್ಯು/ಪಬ್ಲಿಕ್ ಲಿಮಿಟೆಡ್ ಕಂಪನಿಗಳು ತಮ್ಮ ಸಿಬ್ಬಂದಿಗೆ ನೀಡಿರುವ ಫೋಟೋ ಗುರುತಿನ ಚೀಟಿ

4) ಬ್ಯಾಂಕ್ / ಪೋಸ್ಟ್ ಆಫೀಸ್ ಫೋಟೋವುಳ್ಳ ಪಾಸ್ ಬುಕ್

5) ಪಾನ್ ಹೊಂದಿರುವ ಕಾರ್ಡ್

6) ಎನ್ಪಿಆರ್ ಅಡಿ ಅರ್ಜಿ ನೀಡಿರುವ ಸ್ಮಾರ್ಟ್ ಕಾರ್ಡ್

7) ಎಂನರೇಗಾ ಜಾಬ್ ಕಾರ್ಡ್

8) ಕಾರ್ಮಿಕರ ಸಚಿವಾಲಯದ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್

9) ಫೋಟೋವುಳ್ಳ ಪಿಂಚಣಿ ದಾಖಲೆ

10) ಚುನಾವಣಾ ಆಯೋಗದ ವತಿಯಿಂದ ನೀಡುವ ದೃಢೀಕೃತ ಫೋಟೋ ವೋಟರ್ ಸ್ಲಿಪ್ಸ್

11) ಸಂಸದರು/ವಿಧಾನಸಭಾ/ವಿಧಾನ ಪರಿಷತ್ತಿನ ಸದಸ್ಯರಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ

12) ಆಧಾರ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಗುರುತಿನ ಚೀಟಿ ಬಳಸಿ ಮತದಾನ ಮಾಡಬಹುದು.

ಮತದಾನದ ನಿಯಮಗಳು

  • ಮತಗಟ್ಟೆಗಳಲ್ಲಿ ಫೋಟೋ ತೆಗೆಯಲು ಅನುಮತಿ ಇಲ್ಲ.
  • ಮೊಬೈಲ್​​ ತೆಗೆದುಕೊಂಡು ಹೋಗಲು ಅನುಮತಿ ಇಲ್ಲ.
  • ಕ್ಯಾಮರಾ ಅಥವಾ ಇತರೆ ಎಲೆಕ್ಟ್ರಾನಿಕ್​ ಸಾಧನಗಳಿಗೆ ಅವಕಾಶವಿಲ್ಲ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:56 pm, Mon, 8 May 23

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ