ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election 2023) ಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಇಂದು ಅಂದರೆ ಮೇ 10 ರಂದು 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಹಿನ್ನೆಲೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಸಹ ಮಾಡಿಕೊಂಡಿದೆ. ಕರ್ನಾಟಕ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ವಿಜೇತ ಪಕ್ಷವು 113 ಸ್ಥಾನಗಳನ್ನು ಹೊಂದುವುದು ಅಗತ್ಯವಾಗಿದೆ. ಪರಿಶಿಷ್ಟ ಜಾತಿಗಳಿಗೆ (ಎಸ್ಸಿ) 36 ಸ್ಥಾನಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್ಟಿ) 15 ಸ್ಥಾನಗಳನ್ನು ಕಾಯ್ದಿರಿಸಲಾಗಿದೆ. ಬಿಜೆಪಿ 199, ಕಾಂಗ್ರೆಸ್ 75 ಮತ್ತು ಜೆಡಿಎಸ್ 28 ಸ್ಥಾನಗಳನ್ನು ಹೊಂದಿವೆ.
ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಮತ್ತು ಪ್ರಣಾಳಿಕೆಗಳನ್ನು ಈಗಾಗಲೇ ಬಿಡುಗಡೆ ಮಾಡಿವೆ. ಏಕರೂಪ ನಾಗರಿಕ ಸಂಹಿತೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಅನುಷ್ಠಾನದ ಭರವಸೆಯನ್ನು ಬಿಜೆಪಿ ನೀಡಿದೆ. ಕರ್ನಾಟಕದ ಜನರಿಗೆ ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಯುವ ನಿಧಿ ಮತ್ತು ಶಕ್ತಿ ಸೇರಿದಂತೆ ಐದು ಭರವಸೆಗಳನ್ನು ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ. ಪಂಚರತ್ನ ಯೋಜನೆಯನ್ನು ಜೆಡಿಎಸ್ ತಿಳಿಸಿದೆ.
ಇದನ್ನೂ ಓದಿ: Karnataka Polling Booth: ಕರ್ನಾಟಕ ವಿಧಾನಸಭಾ ಚುನಾವಣಾ ಮತಗಟ್ಟೆ ವಿವರಗಳನ್ನು ತಿಳಿಯುವುದು ಹೇಗೆ?
ಸೋಮವಾರ, ಮೇ 1 ರಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ರಾಜ್ಯದ ಚುನಾವಣಾ ವ್ಯವಸ್ಥೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸಿದ್ದಾರೆ. ಚುನಾವಣಾ ಆಯೋಗದ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 5,21,73,579 ಕೋಟಿ ಮತದಾರರಿದ್ದಾರೆ. ಅವರಲ್ಲಿ 2.62 ಕೋಟಿ ಪುರುಷರು ಮತ್ತು 2.59 ಕೋಟಿ ಮಹಿಳೆಯರು.
ಇದನ್ನೂ ಓದಿ: ನಿಮ್ಮ ವೋಟರ್ ಐಡಿ ತಿದ್ದುಪಡಿ, ಹೆಸರು ಬದಲಾವಣೆ ಮಾಡಿಸುವುದು ಹೇಗೆ? ಇಲ್ಲಿದೆ ಮಾಹಿತಿ
ತೃತೀಯ ಲಿಂಗಿ 4,669, ಶತಾಯುಷಿ 16,976, 80 ವರ್ಷ ಮೇಲ್ಪಟ್ಟವರು 12,15,763, ವಿಶೇಷ ಚೇತನರು 5,55,073, ಸೇವಾ 47,779 ಮತ್ತು 9,17,241 ಮೊದಲ ಬಾರಿಯ ಮತದಾರರಾಗಿದ್ದಾರೆ. ಇದಲ್ಲದೆ, ರಾಜ್ಯಾದ್ಯಂತ ಒಟ್ಟು 58,282 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
1) ಪಾಸ್ಪೋರ್ಟ್
2) ಚಾಲನಾ ಪರವಾನಗಿ
3) ಕೇಂದ್ರ/ರಾಜ್ಯ ಸರ್ಕಾರದ ಹಾಗೂ ಅರೆ ಸರ್ಕಾರಿ ಮತ್ತು ಸಾರ್ವಜನಿಕ ಸ್ವಾಮ್ಯದ ಪಿಎಸ್ಯು/ಪಬ್ಲಿಕ್ ಲಿಮಿಟೆಡ್ ಕಂಪನಿಗಳು ತಮ್ಮ ಸಿಬ್ಬಂದಿಗೆ ನೀಡಿರುವ ಫೋಟೋ ಗುರುತಿನ ಚೀಟಿ
4) ಬ್ಯಾಂಕ್ / ಪೋಸ್ಟ್ ಆಫೀಸ್ ಫೋಟೋವುಳ್ಳ ಪಾಸ್ ಬುಕ್
5) ಪಾನ್ ಹೊಂದಿರುವ ಕಾರ್ಡ್
6) ಎನ್ಪಿಆರ್ ಅಡಿ ಅರ್ಜಿ ನೀಡಿರುವ ಸ್ಮಾರ್ಟ್ ಕಾರ್ಡ್
7) ಎಂನರೇಗಾ ಜಾಬ್ ಕಾರ್ಡ್
8) ಕಾರ್ಮಿಕರ ಸಚಿವಾಲಯದ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
9) ಫೋಟೋವುಳ್ಳ ಪಿಂಚಣಿ ದಾಖಲೆ
10) ಚುನಾವಣಾ ಆಯೋಗದ ವತಿಯಿಂದ ನೀಡುವ ದೃಢೀಕೃತ ಫೋಟೋ ವೋಟರ್ ಸ್ಲಿಪ್ಸ್
11) ಸಂಸದರು/ವಿಧಾನಸಭಾ/ವಿಧಾನ ಪರಿಷತ್ತಿನ ಸದಸ್ಯರಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ
12) ಆಧಾರ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಗುರುತಿನ ಚೀಟಿ ಬಳಸಿ ಮತದಾನ ಮಾಡಬಹುದು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:56 pm, Mon, 8 May 23