ಮೇ.10ರ ಮತದಾನಕ್ಕೆ ಮಳೆ ಅಡ್ಡಿ ಆತಂಕ: ವಿಸ್ತರಣೆಯಾಗುತ್ತಾ ಮತದಾನದ ಸಮಯ? ಆಯುಕ್ತ ತುಷಾರ್​ ಗಿರಿನಾಥ್ ಸ್ಪಷ್ಟನೆ

ಬೆಂಗಳೂರಲ್ಲಿ ಮುಂದಿನ 5 ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಚುನಾವಣಾ ಆಯೋಗಕ್ಕೆ ಟೆನ್ಷನ್​​ ಶರುವಾಗಿದೆ. ಮಳೆ ಹೆಚ್ಚಾದರೇ ಮತದಾನದ ಪ್ರಮಾಣ ಕುಸಿಯುವ ಭೀತಿ ಆಯೋಗಕ್ಕೆ ಎದುರಾಗಿದೆ. ಹೀಗಾಗಿ ಪರ್ಯಾಯ ಕ್ರಮ ಕೈಗೊಳ್ಳಲು ಆಯೋಗ ಮುಂದಾಗಿದೆ.

ಮೇ.10ರ ಮತದಾನಕ್ಕೆ ಮಳೆ ಅಡ್ಡಿ ಆತಂಕ: ವಿಸ್ತರಣೆಯಾಗುತ್ತಾ ಮತದಾನದ ಸಮಯ? ಆಯುಕ್ತ ತುಷಾರ್​ ಗಿರಿನಾಥ್ ಸ್ಪಷ್ಟನೆ
ಬೆಂಗಳೂರು ನಗರ ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ತುಷಾರ್​ ಗಿರಿನಾಥ್​​
Follow us
ವಿವೇಕ ಬಿರಾದಾರ
|

Updated on: May 09, 2023 | 2:55 PM

ಬೆಂಗಳೂರು: ರಾಜ್ಯಾದ್ಯಂತ ಇನ್ನೂ 5 ದಿನಗಳ ಧಾರಾಕಾರ ಮಳೆಯಾಗುವ (Rain) ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಯಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ. ಇದರಿಂದ ಚುನಾವಣಾ ಆಯೋಗಕ್ಕೆ (Election Commission) ಟೆನ್ಷನ್​​ ಶರುವಾಗಿದೆ. ಮಳೆ ಹೆಚ್ಚಾದರೇ ಮತದಾನದ (Voting) ಪ್ರಮಾಣ ಕುಸಿಯುವ ಭೀತಿ ಆಯೋಗಕ್ಕೆ ಎದುರಾಗಿದೆ. ಹೀಗಾಗಿ ಪರ್ಯಾಯ ಕ್ರಮ ಕೈಗೊಳ್ಳಲು ಆಯೋಗ ಮುಂದಾಗಿದೆ. ಈ ಬಗ್ಗೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬೆಂಗಳೂರು ನಗರ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿ ತುಷಾರ್​ ಗಿರಿನಾಥ್​​ ಮತಗಟ್ಟೆಗಳು ಸೋರದಂತೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಮಳೆಯಿಂದ ಮತದಾನದಕ್ಕೆ ತೊಂದರೆಯಾದರೆ ಹೆಚ್ಚುವರಿ ಸಮಯ ನೀಡುತ್ತಾ ಆಯೋಗ..? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಮತದಾನಕ್ಕೆ ಸಮಯ ವಿಸ್ತರಣೆ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಹೆಚ್ಚುವರಿ ಸಮಯ ನೀಡುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಇಲ್ಲ. ನಗರದಲ್ಲಿನ ರಾಜಕಾಲುವೆ, ತೃತೀಯ ಕಾಲುವೆಗಳಲ್ಲಿ ಹೂಳು ತೆಗೆಯಲಾಗಿದೆ. ಕಾಲುವೆಗಳಲ್ಲಿ ನೀರು ನಿಲ್ಲದಂತೆ ಸ್ವಚ್ಛತೆ​ ಕೂಡ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ಸಿಕ್ಕ ಹಣ ಎಷ್ಟು? ನಿಮ್ಮ ಜಿಲ್ಲೆಯ ಪಾಲೆಷ್ಟು? ಇಲ್ಲಿದೆ ಮಾಹಿತಿ

ವಿವಿ ಪ್ಯಾಟ್​​ಗಳಿಗೆ ಪ್ಲಾಸ್ಟಿಕ್ ಕವರಿಂಗ್ ಮಾಡಲಾಗಿದೆ. ಮತಗಟ್ಟೆಗಳ ಮೇಲ್ಚಾವಣಿ ಸೋರಿಕೆಯಾಗದಂತೆ ಎಚ್ಚರಿಕೆವಹಿಸಿದ್ದೇವೆ. ರಸ್ತೆ, ಮತಗಟ್ಟೆಗಳ ಕಡೆ ನೀರು ನಿಲ್ಲದಂತೆ ಸ್ವಚ್ಛತೆ ಮಾಡಲಾಗಿದೆ. ಮತದಾನದ ಎಲ್ಲ ವಸ್ತುಗಳಿಗೆ ಪ್ಲಾಸ್ಟಿಕ್ ಕವರ್​​ಗಳನ್ನು ನೀಡಿದ್ದೇವೆ. ಮಳೆಯಿಂದ ಯಾವುದೇ ಸಮಸ್ಯೆಯಾಗದಂತೆ ಕ್ರಮಕೈಗೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ

ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆ ಕಳೆದ ಒಂದು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯಾದ್ಯಂತ ಇನ್ನೂ 5 ದಿನಗಳ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಯಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರದಲ್ಲಿ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ನಿನ್ನೆ (ಮೇ.08) ಸಿಂದಗಿ, ಬಾದಾಮಿ, ಆಳಂದ, ಚಿಕ್ಕಮಗಳೂರು, ಹುಕ್ಕೇರಿ, ಚಿಂತಾಮಣಿ, ಕಲಬುರ್ಗಿ, ಬಿಳಗಿ ಗೋಕಾಕ್, ಕೋಲಾರ, ದೇವನಹಳ್ಳಿ, ಟಿ ನರಸೀಪುರದಲ್ಲಿ ಹೆಚ್ಚು‌ ಮಳೆ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ