ಮತದಾರರ ಪಟ್ಟಿಯಲ್ಲಿ ಹೆಸರಿದ್ದು ವೋಟರ್​ ಐಡಿ ಇಲ್ಲದಿದ್ದರೂ ಈ ದಾಖಲೆಗಳೊಂದಿಗೆ ನೀವು ಮತದಾನ ಮಾಡ್ಬಹುದು

ಇದೇ ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಮತದಾರರು ಮತ ಚಲಾಯಿಸಲು ಮತಗಟ್ಟೆಗಳಿಗೆ ಹೋದ ಸಂದರ್ಭದಲ್ಲಿ ಅವರು ಹೊಂದಿರುವ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ತೋರಿಸಬೇಕು. ಒಂದು ವೇಳೆ ಅದನ್ನು ಹಾಜರುಪಡಿಸಲು ಸಾಧ್ಯವಿಲ್ಲದಿದ್ದಲ್ಲಿ ಈ ಕೆಳಕಂಡ ಯಾವುದಾದರೂ ಒಂದು ಪರ್ಯಾಯ ದಾಖಲಾತಿಯನ್ನು ತೋರಿಸಬೇಕು.

ಮತದಾರರ ಪಟ್ಟಿಯಲ್ಲಿ ಹೆಸರಿದ್ದು ವೋಟರ್​ ಐಡಿ ಇಲ್ಲದಿದ್ದರೂ ಈ ದಾಖಲೆಗಳೊಂದಿಗೆ ನೀವು ಮತದಾನ ಮಾಡ್ಬಹುದು
5 ಜನ ಕಲಾವಿದರಿಂದ ಸಾಂಪ್ರದಾಯಿಕ ಚಿತ್ತಾರದೊಂದಿಗೆ ಮತದಾರರನ್ನು ಸೆಳೆಯಲು ಈ ವಿನೂತನ ಕ್ರಮ
Follow us
ರಮೇಶ್ ಬಿ. ಜವಳಗೇರಾ
| Updated By: ಅಕ್ಷಯ್​ ಪಲ್ಲಮಜಲು​​

Updated on:May 03, 2023 | 3:20 PM

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Eelctions 2023) ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯ 224 ಕ್ಷೇತ್ರಗಳಿಗೆ ಇದೇ ಮೇ 10ರಂದು ಮತದಾನ(Voting) ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಮತದಾನದ ದಿನದಂದು ಮತ ಚಲಾಯಿಸಲು ಮತಗಟ್ಟೆ ಪ್ರವೇಶಿಸುವ ಮತದಾರರು ಮತಗಟ್ಟೆ ಅಧಿಕಾರಿಗೆ ತಮ್ಮ ಗುರುತನ್ನು ಖಾತ್ರಿ ಪಡಿಸಲು ಫೋಟೋ ಇರುವ ಗುರುತಿನ ಚೀಟಿಯನ್ನು(identity card) ತೋರಿಸಬೇಕು. ಇನ್ನು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದು, ವೋಟರ್​ ಐಡಿ ಕಾರ್ಡ್ ಇಲ್ಲದಿದ್ದರೂ ಸಹ ನೀವು ಮತದಾನ ಮಾಡಬಹುದು. ಈ ಕೆಳಗಿನ ಯಾವುದಾದರೊಂದು ದಾಖಲೆ ಇದ್ದರೆ ನೀವು ಮತ ಚಲಾಯಿಸಬಹುದು.

ಇದನ್ನೂ ಓದಿ: Karnataka Election Live: ಒಂದೆಡೆ ಪ್ರಧಾನಿ ಮೋದಿ, ಮತ್ತೊಂದಡೆ ರಾಹುಲ್​ ಗಾಂಧಿ; ಜೋರಾದ ಕೈ-ಕಮಲದ ಪ್ರಚಾರ ಭರಾಟೆ

1) ಪಾಸ್ಪೋರ್ಟ್, 2) ಚಾಲನಾ ಪರವಾನಗಿ, 3) ಕೇಂದ್ರ/ರಾಜ್ಯ ಸರ್ಕಾರದ ಹಾಗೂ ಅರೆ ಸರ್ಕಾರಿ ಮತ್ತು ಸಾರ್ವಜನಿಕ ಸ್ವಾಮ್ಯದ ಪಿಎಸ್ಯು/ಪಬ್ಲಿಕ್ ಲಿಮಿಟೆಡ್ ಕಂಪನಿಗಳು ತಮ್ಮ ಸಿಬ್ಬಂದಿಗೆ ನೀಡಿರುವ ಫೋಟೋ ಗುರುತಿನ ಚೀಟಿ, 4) ಬ್ಯಾಂಕ್ / ಪೋಸ್ಟ್ ಆಫೀಸ್ ಫೋಟೋವುಳ್ಳ ಪಾಸ್ ಬುಕ್, 5) ಪಾನ್ ಹೊಂದಿರುವ ಕಾರ್ಡ್, 6) ಎನ್ಪಿಆರ್ ಅಡಿ ಅರ್ಜಿ ನೀಡಿರುವ ಸ್ಮಾರ್ಟ್ ಕಾರ್ಡ್, 7) ಎಂನರೇಗಾ ಜಾಬ್ ಕಾರ್ಡ್, 8) ಕಾರ್ಮಿಕರ ಸಚಿವಾಲಯದ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, 9) ಫೋಟೋವುಳ್ಳ ಪಿಂಚಣಿ ದಾಖಲೆ, 10) ಚುನಾವಣಾ ಆಯೋಗದ ವತಿಯಿಂದ ನೀಡುವ ದೃಢೀಕೃತ ಫೋಟೋ ವೋಟರ್ ಸ್ಲಿಪ್ಸ್, 11) ಸಂಸದರು/ವಿಧಾನಸಭಾ/ವಿಧಾನ ಪರಿಷತ್ತಿನ ಸದಸ್ಯರಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ, 12) ಆಧಾರ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಗುರುತಿನ ಚೀಟಿ ಬಳಸಿ ಮತದಾನ ಮಾಡಬಹುದು.

ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿಯಲ್ಲಿ(ಎಲೆಕ್ಷನ್ ಕಾರ್ಡ್) ದೋಷಗಳಿದ್ದರೆ, ಇಲ್ಲವೆ ಗುರುತಿನ ಚೀಟಿ ತರದಿದ್ದ ಸಂದರ್ಭದಲ್ಲಿ ಭಾರತ ಆಯೋಗ ಪರಿಗಣಿಸಿರುವ 12 ದಾಖಲೆಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು. ಒಂದು ಪಕ್ಷ ಮತದಾರರ ಗುರುತಿನ ಚೀಟಿಯಲ್ಲಿ ದೋಷವಿದ್ದರೆ, ಇಲ್ಲವೆ ಮತದಾರರ ಗುರುತಿನ ಚೀಟಿಯಲ್ಲಿರುವ ವ್ಯಕ್ತಿಯ ಭಾವಚಿತ್ರ ಹೊಂದಾಣಿಕೆ ಆಗದಿದ್ದ ಪಕ್ಷದಲ್ಲೂ 12 ದಾಖಲಾತಿಗಳ ಪೈಕಿ ಒಂದನ್ನು ತೋರಿಸಿ ಮತ ಚಲಾಯಿಸಬಹುದು.

Published On - 7:56 am, Wed, 3 May 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ