Electoral Bonds: ಚುನಾವಣೆ ಹಿನ್ನೆಲೆ ಎಸ್​​ಬಿಐನಲ್ಲಿ ಇಂದಿನಿಂದ ಸಿಗಲಿದೆ ಚುನಾವಣಾ ಬಾಂಡ್; ಏನಿದು, ಯಾರು ಖರೀದಿಸಬಹುದು?

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂದಿನಿಂದ (ಏಪ್ರಿಲ್ 3) ಚುನಾವಣಾ ಬಾಂಡ್​ಗಳ ಮಾರಾಟ ಮಾಡಲು ಆರಂಭಿಸಿದೆ.

Electoral Bonds: ಚುನಾವಣೆ ಹಿನ್ನೆಲೆ ಎಸ್​​ಬಿಐನಲ್ಲಿ ಇಂದಿನಿಂದ ಸಿಗಲಿದೆ ಚುನಾವಣಾ ಬಾಂಡ್; ಏನಿದು, ಯಾರು ಖರೀದಿಸಬಹುದು?
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Apr 03, 2023 | 3:06 PM

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಇಂದಿನಿಂದ (ಏಪ್ರಿಲ್ 3) ಚುನಾವಣಾ ಬಾಂಡ್​ಗಳ (Electoral Bonds) ಮಾರಾಟ ಮಾಡಲು ಆರಂಭಿಸಿದೆ. ಏಪ್ರಿಲ್ 12ರ ವರೆಗೆ ಎಸ್​​ಬಿಐನ 29 ಶಾಖೆಗಳಲ್ಲಿ ಚುನಾವಣಾ ಬಾಂಡ್​ಗಳು ಖರೀದಿಗೆ ಲಭ್ಯ ಇರಲಿವೆ. ಕೇಂದ್ರ ಹಣಕಾಸು ಸಚಿವಾಲಯವು ಮಾರ್ಚ್ 31ರಂದು ‘ಎಲೆಕ್ಟೋರಲ್ ಬಾಂಡ್ ಸ್ಕೀಮ್ 2018’ ರ ಅಡಿಯಲ್ಲಿ ಚುನಾವಣಾ ಬಾಂಡ್‌ಗಳ 26ನೇ ಕಂತಿನ ಘೋಷಣೆ ಮಾಡಿತ್ತು. ಇದರಂತೆ, ಭಾರತೀಯ ನಾಗರಿಕರು, ಉದ್ಯಮಿಗಳು ಬಾಂಡ್​ಗಳನ್ನು ಖರೀದಿಸಬಹುದಾಗಿದ್ದು, ರಾಜಕೀಯ ಪಕ್ಷಗಳು ತೆರೆದಿರುವ ಎಲೆಕ್ಟೋರಲ್ ಬಾಂಡ್ ಖಾತೆಗಳ ಮೂಲಕ ದೇಣಿಗೆ ನೀಡಬಹುದಾಗಿದೆ. ಬಾಂಡ್​​ಗಳು ಇಶ್ಯೂ ಮಾಡಿದ 15 ದಿನಗಳ ಅವಧಿಗೆ ಮಾನ್ಯತೆ ಹೊಂದಿರುತ್ತವೆ. ಈ ಅವಧಿಯ ಒಳಗಾಗಿ ರಾಜಕೀಯ ಪಕ್ಷಗಳು ಅವುಗಳನ್ನು ಪಡೆಯಬೇಕಾಗಿದೆ.

ರಾಜ್ಯ ವಿಧಾನಸಭೆ ಚುನಾವಣೆ ಮೇ 10ರಂದು ನಡೆಯಲಿದ್ದು, ಫಲಿತಾಂಶ ಮೇ 13ರಂದು ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾರ್ಚ್ 29ರಂದು ಘೋಷಿಸಿತ್ತು.

ಈ ಹಿಂದಿನ ಮಾರಾಟದ ಅವಧಿಯಲ್ಲಿ, ಜನವರಿ ತಿಂಗಳಲ್ಲಿ ಎಸ್​ಬಿಐ 308.76 ಕೋಟಿ ರೂ. ಮೊತ್ತದ ಚುನಾವಣಾ ಬಾಂಡ್​ಗಳ ಗುಚ್ಛವನ್ನು ಮಾರಾಟ ಮಾಡಿತ್ತು. ಫೆಬ್ರುವರಿಯಲ್ಲಿ ನಡೆದ ತ್ರಿಪುರಾ, ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಾಂಡ್​​ಗಳನ್ನು ಬಿಡುಗಡೆ ಮಾಡಲಾಗಿತ್ತು ಎಂಬುದು ಆರ್​ಟಿಐ ಅರ್ಜಿಯಡಿ ಪಡೆದ ಮಾಹಿತಿಯಿಂದ ತಿಳಿದುಬಂದಿದೆ ಎಂದು ‘ದಿ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

2018ರ ನಂತರ ಈ ವರೆಗೆ ಎಸ್​ಬಿಐ 12,008.59 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್​​ಗಳನ್ನು ಮಾರಾಟ ಮಾಡಿದೆ. ಈ ಪೈಕಿ 11,984.91 ಕೋಟಿ ರೂ. ಮೌಲ್ಯದ ಬಾಂಡ್​ಗಳನ್ನು ರಾಜಕೀಯ ಪಕ್ಷಗಳು ರಿಡೀಮ್ ಮಾಡಿಕೊಂಡಿವೆ.

ಪ್ರತಿ ವರ್ಷ ಜನವರಿ, ಏಪ್ರಿಲ್, ಜುಲೈ ಹಾಗೂ ಅಕ್ಟೋಬರ್​​ ತಿಂಗಳಲ್ಲಿ ನಾಲ್ಕರಿಂದ 10 ದಿನಗಳ ಅವಧಿಗೆ ಚುನಾವಣಾ ಬಾಂಡ್​​ಗಳನ್ನು ಮಾರಾಟ ಮಾಡಲಾಗುತ್ತದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹೆಚ್ಚುವರಿಯಾಗಿ 30 ದಿನಗಳ ಕಾಲ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ವಿಧಾನಸಭೆ ಚುನಾವಣೆಗಳ ಸಂದರ್ಭದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಕಾಲ ಬಾಂಡ್​ಗಳ ಮಾರಾಟಕ್ಕೆ 2022ರಿಂದ ಹಣಕಾಸು ಸಚಿವಾಲಯ ಅನುಮತಿ ನೀಡಿದೆ.

ಚುನಾವಣಾ ಬಾಂಡ್ ಎಂದರೇನು​​?

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವುದಕ್ಕಾಗಿ ವ್ಯಕ್ತಿಗಳು ಅಥವಾ ಸಂಸ್ಥೆ / ಕಂಪನಿಗಳು ಈ ಚುನಾವಣಾ ಬಾಂಡ್​​ಗಳನ್ನು ಉಪಯೋಗಿಸುತ್ತವೆ. ಎಸ್​ಬಿಐ ಬ್ಯಾಂಕ್ ನಿರ್ದಿಷ್ಟ ಮುಖಬೆಲೆಯ ಚುನಾವಣಾ ಬಾಂಡ್​​ಗಳನ್ನು ಬಿಡುಗಡೆ ಮಾಡಿ ಮಾರಾಟ ಮಾಡುತ್ತದೆ. ಚುನಾವಣಾ ಬಾಂಡ್‌ಗಳನ್ನು ಅರ್ಹ ರಾಜಕೀಯ ಪಕ್ಷವು ಅಧಿಕೃತ ಬ್ಯಾಂಕ್‌ ಖಾತೆಯ ಮೂಲಕ ಮಾತ್ರವೇ ಎನ್‌ಕ್ಯಾಶ್ ಮಾಡಬಹುದಾಗಿದೆ.

ಚುನಾವಣಾ ಬಾಂಡ್ ಅನ್ನು ಯಾರು, ಹೇಗೆ ಖರೀದಿಸಬಹುದು?

ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಲು ಬಯಸುವ ವ್ಯಕ್ತಿ ಅಥವಾ ಸಂಸ್ಥೆ / ಕಂಪನಿಗಳು ಚುನಾವಣಾ ಬಾಂಡ್​ಗಳನ್ನು ಖರೀದಿಸಬಹುದು. ಎಸ್​ಬಿಐ ಬ್ಯಾಂಕ್​ನ ಅಧಿಕೃತ ಶಾಖೆಗಳಲ್ಲಿ ಚುನಾವಣಾ ಬಾಂಡ್​ಗಳು ದೊರೆಯುತ್ತವೆ. ಡಿಜಿಟಲ್ ಪಾವತಿ ಅಥವಾ ಚೆಕ್ ನೀಡಿ ಚುನಾವಣಾ ಬಾಂಡ್​ಗಳನ್ನು ಖರೀದಿಸಬೇಕು. ನಗದು ನೀಡಿ ಖರೀದಿಸಲು ಅವಕಾಶವಿಲ್ಲ. ಚುನಾವಣಾ ಬಾಂಡ್​ಗಳನ್ನು ಖರೀದಿಸಿದ ದೇಣಿಗೆದಾರು ಅದನ್ನು ತನ್ನಿಚ್ಛೆಯ ರಾಜಕೀಯ ಪಕ್ಷಕ್ಕೆ ನೀಡಬಹುದು. ಅದನ್ನು ರಾಜಕೀಯ ಪಕ್ಷ 15 ದಿನಗಳ ಒಳಗಾಗಿ ಎನ್​ಕ್ಯಾಶ್ ಮಾಡಿಕೊಳ್ಳಬೇಕು.

ಯಾವೆಲ್ಲ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಸ್ವೀಕರಿಸಬಹುದು?

ಭಾರತದ ನಾಗರಿಕರು ಹಾಗೂ ಸಂಸ್ಥೆಗಳು ಚುನಾವಣಾ ಬಾಂಡ್​ಗಳ ಖರೀದಿಗೆ ಅರ್ಹರಾಗಿರುತ್ತಾರೆ. ಜಂಟಿಯಾಗಿಯೂ ಚುನಾವಣಾ ಬಾಂಡ್​ಗಳನ್ನು ಖರೀದಿಸಬಹುದಾಗಿದೆ. ಕೆವೈಸಿ ದೃಢೀಕರಿಸಿದ ಬಳಿಕವಷ್ಟೇ ಚುನಾವಣಾ ಬಾಂಡ್​ಗಳನ್ನು ವಿತರಿಸಲಾಗುತ್ತದೆ. ಈ ಬಾಂಡ್​​ಗಳು ಇದು ಪಾವತಿ ಮಾಡುವವರ ಹೆಸರನ್ನು ಹೊಂದಿರುವುದಿಲ್ಲ.

1951ರ ಪ್ರಜಾ ಪ್ರತಿನಿಧಿ ಕಾಯ್ದೆಯ ಸೆಕ್ಷನ್ 29ಎ ಅಡಿಯಲ್ಲಿ ನೋಂದಣಿಯಾಗಿರುವ ರಾಜಕೀಯ ಪಕ್ಷ ಮಾತ್ರ ಚುನಾವಣಾ ಬಾಂಡ್​ಗಳನ್ನು ಸ್ವೀಕರಿಸಲು ಅವಕಾಶವಿದೆ. ಅಲ್ಲದೆ, ಹಿಂದಿನ ಲೋಕಸಭೆ ಚುನಾವಣೆ ಹಾಗೂ ರಾಜ್ಯ ಚುನಾವಣೆಗಳಲ್ಲಿ ಶೇಕಡಾ 1ಕ್ಕಿಂತ ಕಡಿಮೆ ಮತಗಳನ್ನು ಪಡೆದಿದ್ದರೆ ಅಂಥ ರಾಜಕೀಯ ಪಕ್ಷ ಚುನಾವಣಾ ಬಾಂಡ್​​ ಸ್ವೀಕರಿಸಲು ಅರ್ವಾಗಿರುವುದಿಲ್ಲ.

ಚುನಾವಣಾ ಬಾಂಡ್​ ಬಿಡುಗಡೆಗೆ ಕಾರಣವೇನು?

ರಾಜಕೀಯ ಪಕ್ಷಗಳಿಗೆ ಹಣಕಾಸು ನೆರವು ನೀಡುವ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕಗೊಳಿಸುವುದಕ್ಕಾಗಿ ಕೇಂದ್ರ ಸರ್ಕಾರ 2017ರ ಹಣಕಾಸು ಕಾಯ್ದೆಯಲ್ಲಿ ಚುನಾವಣಾ ಬಾಂಡ್​​ ಪರಿಚಯಿಸಿತು. 2018ರಲ್ಲಿ ಚುನಾವಣಾ ಬಾಂಡ್ ಯೋಜನೆ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. 2017ರ ಬಜೆಟ್​​ನಲ್ಲಿ ಅಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಚುನಾವಣಾ ಬಾಂಡ್​ಗಳನ್ನು ಬಿಡುಗಡೆ ಮಾಡುವ ಯೋಜನೆ ಬಗ್ಗೆ ಘೋಷಿಸಿದ್ದರು.

ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ