ನಾಳೆ ಬೆಂಗಳೂರಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ಭೇಟಿ: ರಾಜ್ಯ ಬಿಜೆಪಿಯಲ್ಲಿ ಸಂಚಲನ

|

Updated on: Feb 22, 2023 | 10:59 PM

ನಾಳೆ ಬೆಂಗಳೂರಿಗೆ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಗಳು ಭೇಟಿ ನೀಡಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ನಾಳೆ ಬೆಂಗಳೂರಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ಭೇಟಿ: ರಾಜ್ಯ ಬಿಜೆಪಿಯಲ್ಲಿ ಸಂಚಲನ
Union Minister Dharmendra Pradhan, Annamalai
Follow us on

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ಕರ್ನಾಟಕದಲ್ಲಿ(Karnataka) ರಾಜಕೀಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್​​ ಅಖಾಡಕ್ಕಿಳಿದಿದ್ದು, ಮತಬೇಟೆ ಆರಂಭಿಸಿವೆ. ಇದರ ಮಧ್ಯೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಜೋರಾಗಿದೆ. ಇದಕ್ಕೆ ಪೂರಕವೆಂಬಂತೆ ನಾಳೆ(ಫೆ.23) ಬೆಂಗಳೂರಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳು(Karnataka BJP Election in-charge) ಆಗಮಿಸುತ್ತಿದ್ದಾರೆ. ಇದರಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Anant Nag: ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಅನಂತ್ ನಾಗ್ ಗೈರು, ಕುತೂಹಲ ಕೆರಳಿಸಿದ ದಿಢೀರ್ ನಿರ್ಧಾರ

ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್​, ಸಹ ಉಸ್ತುವಾರಿಗಳಾದ ಮನ್​ಸುಖ್ ಮಾಂಡವೀಯ, ಕೆ.ಅಣ್ಣಾಮಲೈ ಅವರು ನಾಳೆ (ಗುರುವಾರ) ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬಳಿಕ ರಾಜ್ಯದ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ಚುನಾವಣಾ ಉಸ್ತುವಾರಿಗಳು ಇದೇ ಮೊದಲಿಗೆ ಬಾರಿಗೆ ಆಗಮಿಸುತ್ತಿದ್ದು, ಚುನಾವಣೆಯ ಕಾರ್ಯತಂತ್ರಗಳ, ಅಭ್ಯರ್ಥಿ ಆಯ್ಕೆ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಭರದ ಸಿದ್ಧತೆ ನಡೆದಿದೆ. ಈಗಾಗಲೇ ಖುದ್ದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮೇಲಿಂದ ಮೇಲೆ ಒಬ್ಬರಾದ ಮೇಲೆ ಒಬ್ಬರಂತೆ ಕರ್ನಾಟದ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಲೇ ಇದ್ದಾರೆ. ಮೋದಿ ಅಭಿವೃದ್ಧಿ ಕಾರ್ಯಕ್ರಮಗಳ ಹೆಸರಿನಲ್ಲಿ ಮತಬೇಟೆಗಿಳಿದಿದ್ದರೆ, ಅಮಿತ್ ಶಾ, ನಡ್ಡಾ ಬಿಜೆಪಿ ಕಾರ್ಯಕರ್ತರ ಸಮಾವೇಶ ಮಾಡುವ ಮೂಲಕ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಇದೀಗ ಚುನಾವಣೆ ಉಸ್ತುವಾರಿಗಳು ಆಗಮಿಸುತ್ತಿದ್ದು, ಏನೆಲ್ಲ ಟಾಸ್ಕ್​ ನೀಡಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ