ಇತ್ತ ಬಿಜೆಪಿ ಪರ ಕಿಚ್ಚನ ಅಬ್ಬರದ ಪ್ರಚಾರಕ್ಕೆ ಮುಹೂರ್ತ ಫಿಕ್ಸ್: ಅತ್ತ ಜೆಡಿಎಸ್​ನಿಂದ​ ಸುದೀಪ್​ಗೆ ಶಾಕ್!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದರಿಂದ ಅವರ ಅಭಿಮಾನಿಗಳಲ್ಲೇ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ ಇದೀಗ ಕಿಚ್ಚನ ಅಬ್ಬರದ ಪ್ರಚಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಇತ್ತ ಬಿಜೆಪಿ ಪರ ಕಿಚ್ಚನ ಅಬ್ಬರದ ಪ್ರಚಾರಕ್ಕೆ ಮುಹೂರ್ತ ಫಿಕ್ಸ್: ಅತ್ತ ಜೆಡಿಎಸ್​ನಿಂದ​ ಸುದೀಪ್​ಗೆ ಶಾಕ್!
ಬಸವರಾಜ ಬೊಮ್ಮಾಯಿ, ಸುದೀಪ್
Follow us
|

Updated on:Apr 07, 2023 | 4:01 PM

ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ(Karnataka Assembly Elections 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಪರ ಪ್ರಚಾರ ಮಾಡುವುದಾಗಿ ಈಗಾಗಲೇ ನಟ ಕಿಚ್ಚ ಸುದೀಪ್(Kichcha Sudeep) ಘೋಷಿಸಿದ್ದಾರೆ. ಇದರಿಂದ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡ ಕಾರಣದಿಂದಾಗಿ ರಾಜ್ಯದಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಈ ಬಗ್ಗೆ ಅಭಿಮಾನಿಗಳಲ್ಲೂ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಈ ನಡುವೆ ನಟ ಕಿಚ್ಚ ಸುದೀಪ್​ ಬಿಜೆಪಿ ಪರ ಪ್ರಚಾರಕ್ಕೆ(campaign) ಮುಹೂರ್ತ ನಿಗದಿಯಾಗಿದ್ದು, ಏಪ್ರಿಲ್ 14 ರಿಂದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ. ಸುದೀಪ್ ಬೆಂಬಲದಿಂದಾಗಿ ಕಮಲ ಪಡೆಗೆ ದೊಡ್ಡ ಬಲ ಸಿಕ್ಕಂತಾಗಿದ್ದು, ಈ ಬಾರಿ ಅಧಿಕಾರಕ್ಕೆ ಬರಲೇಬೇಕೆಂದು ಪಣತೊಟ್ಟಿರುವ ಬಿಜೆಪಿ, ಈ ಚುನಾವಣೆಯಲ್ಲಿ ಸುದೀಪ್ ಜನಪ್ರಿಯತೆಯನ್ನು ಸಾಧ್ಯವಾದಷ್ಟು ಬಳಸಿಕೊಳ್ಳಲು ಪ್ಲಾನ್ ಮಾಡಿದೆ.

ಇದನ್ನೂ ಓದಿ: ಬೊಮ್ಮಾಯಿಗೆ ಮಾಮ ಅಂತ ಸುದೀಪ್​ ಕರೆಯೋದು ಯಾಕೆ? ಇಲ್ಲಿದೆ ಕಿಚ್ಚ ನೀಡಿದ ವಿವರಣೆ

ಸಿಎಂ ಬೊಮ್ಮಾಯಿ ಕಣಕ್ಕಿಳಿಯಲಿರುವ ಶಿಗ್ಗಾಂವಿ ಜೊತೆಗೆ ಇನ್ನೂ ಕೆಲ ಕ್ಷೇತ್ರಗಳಲ್ಲಿ ಅವರು ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ. ಆದ್ರೆ, ಕಿಚ್ಚ ಎಲ್ಲಿಂದ ಪ್ರಚಾರ ಆರಂಭಿಸಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಮತ್ತೊಂದೆಡೆ ಕಿಚ್ಚ ಸುದೀಪ್​ ಬಿಜೆಪಿ ಪರ ಪ್ರಚಾರ ಮಾಡುವುದಕ್ಕೆ ಅನುಮತಿ ನೀಡಬಾರದು ಎಂದು ಜೆಡಿಎಸ್, ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಚುನಾವಣೆ ಮುಗಿಯುವವರೆಗೆ ಸುದೀಪ್ ನಟನೆಯ ಯಾವುದೇ ಶೋ ಮತ್ತು ಅವರ ಭಾವಚಿತ್ರವಿರುವ ಜಾಹೀರಾತುಗಳ ಪ್ರಸಾರಕ್ಕೆ ತಡೆ ಹಿಡಿಯಬೇಕು ಎಂದು ಜೆಡಿಎಸ್‌ ಕಾನೂನು ಘಟಕ ಪತ್ರದ ಮೂಲಕ ಚುನಾವಣೆ ಆಯೋಗಕ್ಕೆ ಮನವಿ ಮಾಡಿದೆ.

ಇತ್ತೀಚೆಗಷ್ಟೇ ಅಭಿನಯ ಚಕ್ರವರ್ತಿ ಸುದೀಪ್ ಅವರು ಸಿಎಂ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಬೊಮ್ಮಾಯಿ ಅವರನ್ನು ತಿಳಿಸಿದ್ದರು. ಅಲ್ಲದೆ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಹಾಗೂ ಬೊಮ್ಮಾಯಿ ಅವರು ಹೇಳಿದ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವುದಾಗಿ ತಿಳಿಸಿದ್ದರು. ಆದರೆ ಸುದೀಪ್ ಅವರು ಪತ್ರಿಕಾಗೋಷ್ಠಿಯಲ್ಲಿ ಎಲ್ಲಿಯೂ ಬಿಜೆಪಿಯನ್ನು ಬೆಂಬಲಿಸುವುದಾಗಿ ಹೇಳಿರಲಿಲ್ಲ. ತಮಗೆ ಆತ್ಮೀಯರಾಗಿರುವ ಬೊಮ್ಮಾಯಿ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನನ್ನನ್ನು ಬೆಂಬಲಿಸಿದರೆ ಬಿಜೆಪಿಯನ್ನು ಬೆಂಬಲಿಸಿದಂತೆ ಎಂದಿದ್ದರು.

ಸುದೀಪ್ ಹೇಳಿದಂತೆ ಕೇವಲ ಸಿಎಂ ಬೊಮ್ಮಾಯಿ ಕ್ಷೇತ್ರದಲ್ಲಿ ಮಾತ್ರ ಪ್ರಚಾರ ಮಾಡುತ್ತಾರಾ? ಅಥವಾ ಅಕ್ಕಪಕ್ಕದ ಕ್ಷೇತ್ರಗಳನ್ನೂ ಸಹ ಬಿಜೆಪಿ ಅಭ್ಯರ್ಥಿಗಳ ಪರವಾಗಿಯೂ ಕ್ಯಾಂಪೇನ್ ಮಾಡುತ್ತಾರಾ? ಯಾವ್ಯಾವ ಕ್ಷೇತ್ರದಲ್ಲಿ ಸುದೀಪ್ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:45 pm, Fri, 7 April 23