ಕಾಂಗ್ರೆಸ್​​ನ 20 ಮಂದಿ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತಾರೆ; ಲಖನ್ ಜಾರಕಿಹೊಳಿ

ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶನಿವಾರ ಬೆಳಿಗ್ಗೆ ಆರಂಭವಾಗಲಿದೆ. ಈ ಮಧ್ಯೆ, ಇನ್ನೂ ಶಾಸಕರಾಗಿ ಆಯ್ಕೆಯಾಗುವ ಮೊದಲೇ ರಾಜೀನಾಮೆ ಮಾತು ಕೇಳಿಬರಲು ಆರಂಭವಾಗಿದೆ.

ಕಾಂಗ್ರೆಸ್​​ನ 20 ಮಂದಿ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತಾರೆ; ಲಖನ್ ಜಾರಕಿಹೊಳಿ
ಲಖನ್ ಮತ್ತು ಸತೀಶ್ ಜಾರಕಿಹೊಳಿ
Follow us
Ganapathi Sharma
|

Updated on: May 12, 2023 | 4:36 PM

ಬೆಳಗಾವಿ: ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶನಿವಾರ ಬೆಳಿಗ್ಗೆ ಆರಂಭವಾಗಲಿದೆ. ಈ ಮಧ್ಯೆ, ಇನ್ನೂ ಶಾಸಕರಾಗಿ ಆಯ್ಕೆಯಾಗುವ ಮೊದಲೇ ರಾಜೀನಾಮೆ ಮಾತು ಕೇಳಿಬರಲು ಆರಂಭವಾಗಿದೆ. ಬಿಜೆಪಿಗೆ ಪೂರ್ಣ ಬಹುಮತ ದೊರೆಯದಿದ್ದರೆ ಆಪರೇಷನ್ ಕಮಲದ ಸಾಧ್ಯತೆ ಇದೆ. ಆದರೆ ಹಾಗಾಗದು. ರಾಜ್ಯದಲ್ಲಿ ‌120 ಸ್ಥಾನ ಬಿಜೆಪಿಗೆ ದೊರೆಯಲಿದೆ. ಕಾಂಗ್ರೆಸ್ 85 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಲಿದೆ. ಇದರಿಂದಾಗಿ ಇಪ್ಪತ್ತು ಜನ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಬೆಳಗಾವಿಯಲ್ಲಿ ಪಕ್ಷೇತರ ಎಂಎಲ್‌ಸಿ ಲಖನ್ ಜಾರಕಿಹೊಳಿ (Lakhan Jarkiholi) ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಅಧಿಕಾರ ದೊರೆಯದಿದ್ದರೆ ಅವರು ಎನೂ ಮಾಡುತ್ತಾರೆ. ರಾಜೀನಾಮೆ ಕೊಟ್ಟು ಅಧಿಕಾರ ಇರುವವರ ಜತೆ ಬರುತ್ತಾರೆ. ಗೋವಾದಲ್ಲಿ ಆದ ಹಾಗೆಯೇ ಇಲ್ಲಿಯೂ ಆಗಲಿದೆ. ಯಾರ ನೇತೃತ್ವದಲ್ಲಿ ಇವೆಲ್ಲ ನಡೆಯಲಿದೆ ಗೊತ್ತಿಲ್ಲ ಆದರೆ ಮತ್ತೆ ಇಪ್ಪತ್ತು ಜನ ಬರುತ್ತಾರೆ ಎಂದು ಅವರು ಹೇಳಿದ್ದಾರೆ. ನಾನು ಪಕ್ಷೇತರನಾಗಿಯೇ ಇರುತ್ತೇನೆ ಎಂದೂ ಅವರು ಹೇಳಿದ್ದಾರೆ.

ಇನ್ನು ಲಖನ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ರಾಜೀನಾಮೆ ನೀಡಿ ಹೊದರೂ ಅವರಿಗೆ ಬಹುಮತ ಆಗುವುದಿಲ್ಲವಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಫಲಿತಾಂಶದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀ? ಇಲ್ಲಿದೆ ನೋಡಿ

ಬಿಜೆಪಿ ಬಹುಮತ ಪಡೆಯಲು ಅಂತರ ಬಹಳ ಇರಲಿದೆ. 35ರಷ್ಟು ಶಾಸಕರು ರಾಜೀನಾಮೆ ಕೂಡಬೇಕಾಗಬಹುದು. ಅಷ್ಟೆಲ್ಲ ಶಾಸಕರನ್ನು ಸೇರಿಸಲು ಅವರಿಂದ ಸಾಧ್ಯವಾಗದು. ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಾರಾ ಎಂಬುದು ಪ್ರಶ್ನೆ. ಸದ್ಯಕ್ಕೆ ಮಾಡಲ್ಲ, ಒಂದು ವರ್ಷ ಶಾಂತವಾಗಿ ಇರುತ್ತಾರೆ, ಕಾದು ನೋಡುತ್ತಾರೆ. ಲೋಕಸಭಾ ಚುನಾವಣೆ ಆಗುವವರೆಗೆ ಶಾಂತವಾಗಿ ಇರುತ್ತಾರೆ. ಈ ಅವಧಿಯಲ್ಲಿ ನಾವು ಗಟ್ಟಿಯಾಗಬೇಕು. ಈ ವಿಧಾನಸಭೆ ಚುನಾವಣೆ ಫಲಿತಾಂಶ ರಾಷ್ಟ್ರ ರಾಜಕಾರಣಕ್ಕೆ ಒಂದು ತಿರುವು ಆಗಲಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್